ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

Date:

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆಯಾದ ಹಿನ್ನೆಲೆಯಲ್ಲಿ ಜಯಂತಿಯನ್ನು ಪುಷ್ಪಾರ್ಚನೆಯೊಂದಿಗೆ ಸಾಂಕೇತಿಕವಾಗಿ ಆಚರಿಸಲು ಕ್ರಮ ವಹಿಸಬೇಕೆಂದು  ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ತಿಳಿಸಿದರು.

- Advertisement -

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ  ಅಕ್ಟೋಬರ್ (16) ರಂದು ಜರುಗಿದ ವೀರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ  ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅಕ್ಟೋಬರ್ 23 ರಂದು ಆಚರಿಸಲಾಗುವ  ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕಿತ್ತು ಆದರೆ ಕರ್ನಾಟಕ ಪಶ್ಚಿಮ ಪದವೀಧರರ ಚುನಾವಣೆಯ 2026  ಚುನಾವಣೆ ಇರುವುದರಿಂದ ಜಯಂತಿಯನ್ನು ಪುಷ್ಪಾರ್ಚನೆಯೊಂದಿಗೆ ಸಾಂಕೇತಿಕವಾಗಿ  ಆಚರಿಸಲಾಗುವುದು. ಚುನಾವಣಾ ನಂತರ ಸಮಾಜದಿಂದ ಅದ್ದೂರಿ ಆಚರಣೆ ಮಾಡಬಹುದು ಎಂದರು. ಸಮಾಜದ ಮುಖಂಡರು  ಹಿರಿಯರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು” ಎಂದರು.

ಈ ಸಭೆಯಲ್ಲಿ  ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ .ವ್ಹಿ. ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಗಣ್ಯರು, ಹಿರಿಯರು ಹಾಜರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...