“ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ. ಅವರು ರಚಿಸಿರುವ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಇಂದಿಗೂ ಪ್ರಸ್ತುತವಾಗಿದೆ” ಎಂದು ಕರವೇ ಜಿಲ್ಲಾಧ್ಯಕ್ಷ ಹನುಮಂತಪ್ಪ ಅಬ್ಬಿಗೇರಿ ಹೇಳಿದರು.
ಗದಗ ಪಟ್ಟಣದ ಹುಯಿಲಗೋಳ ನಾರಾಯಣರಾಯ್ ಅವರ ಜನ್ಮದಿನದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
“ನಾರಾಯಣರಾಯ್ ಅವರು ಮೂಲತಃ ನಾಟಕಕಾರರು. ಕನ್ನಡ ರಂಗಭೂಮಿಗಾಗಿ ಕಾಲ್ಪನಿಕ, ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಹೀಗೆ ವಿವಿಧ ಬಗೆಯ ನಾಟಕಗಳನ್ನು ರಚಿಸಿ ಪ್ರದರ್ಶಿಸಿದರು. ಇವರ ಅನೇಕ ಕವನಗಳು ಅಂದಿನ ಪತ್ರಿಕೆಗಳಾದ ಜೈ ಕರ್ನಾಟಕ ವೃತ್ತ, ಪ್ರಭಾತ, ಧನಂಜಯ ಮೊದಲಾದವುಗಳಲ್ಲಿ ಪ್ರಕಟವಾಗಿವೆ” ಎಂದರು.
“ನಾರಾಯಣರಾಯರು ತಮ್ಮ ನಾಟಕಗಳಿಗಾಗಿ ಗೀತೆಗಳನ್ನು ರಚಿಸಿದ್ದರು. ನಾರಾಯಣ ರಾಯರು ಮೂಡಲು ಹರಿಯಿತು ಎಂಬ ಕಾದಂಬರಿಯನ್ನೂ ಬರೆದಿದ್ದರೆಂದು ತಿಳಿದು ಬಂದಿದೆ. ಆದರೆ ಈ ಕಾದಂಬರಿಯ ಹಸ್ತಪ್ರತಿ ಈಗ ಲಭ್ಯವಿಲ್ಲ” ಎಂದರು.
This video cannot be played in your browser. Open the video directly
“ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹುಯಿಲಗೋಳ ನಾರಾಯಣರು ರಚಿಸಿದ ಗೀತೆ ಕರ್ನಾಟಕ ರಾಜ್ಯದ ನಾಡಗೀತೆಯೆಂದು ಖ್ಯಾತಿ ಪಡೆದಿತ್ತು. ಈ ಗೀತೆಯನ್ನು ಬೆಳಗಾವಿಯಲ್ಲಿ ಜರುಗಿದ, ೧೯೨೪ರ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಗಿತ್ತು. ಮಹಾತ್ಮ ಗಾಂಧಿಯವರು ಈ ಅಧಿವೇಶನದ ಅಧ್ಯಕ್ಷರಾಗಿದ್ದರು” ಎಂದರು
“ಈ ಗೀತೆಯನ್ನು ೧೯೨೪ ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತ ಗೀತೆಯಾಗಿ ಹಾಡಲಾಗಿತ್ತು. ಆಗಿನ್ನೂ ಬಾಲಕಿಯಾಗಿದ್ದ ಪದ್ಮಭೂಷಣ ಪ್ರಶಸ್ತಿ ಗಳಿಸಿದ್ದ ಗಂಗೂಬಾಯಿ ಹಾನಗಲ್ ಈ ಗೀತೆಯನ್ನು ಅಂದು ಹಾಡಿದ್ದರು. ೧೯೭೦ ರಲ್ಲಿ ಅಧಿಕೃತ ನಾಡಗೀತೆ ಪಟ್ಟಿಯಿಂದ ಇದನ್ನು ತೆಗೆದು ಹಾಕಲಾಯಿತು” ಎಂದು ಇತಿಹಾಸ ಸ್ಮರಿಸಿದರು.
ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ವಿನಾಯಕ ಬದಿ, ಶಿರಾಜ್ ಹೊಸಮನಿ, ಇಸಾಕ್ ನದಾಫ್, ನಿಂಗನಗೌಡ ಮಾಲಿಪಾಟೀಲ್, ದ್ಯಾಮಣ್ಣ ಈಳಿಗೆರˌ ಅಲ್ತಾಫ್ ಕಟ್ಟಿಮನಿ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.





