“ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನವಂಬರ್ 14 ಶನಿವಾರ ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ” ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, “ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ವಾಸಣ್ಣ ಕುರಡಗಿ ಅವರು ಅಧ್ಯಕ್ಷತೆ ವಹಿಸುವರು. ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಡಿ. ಆರ್. ಪಾಟೀಲ, ಮಾಜಿ ಸಚಿವರು ಹಾಗೂ ಶಾಸಕರು ಎಚ್.ಕೆ. ಪಾಟೀಲ, ಮಾಜಿ ಶಾಸಕರು ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪಕ್ಷದ ಮುಖಂಡರು ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣಗೌಡ ಎಚ್. ಪಾಟೀಲ, ಗದಗ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಬಿ. ಅಸೂಟಿ ಪಾಲ್ಗೊಳ್ಳುವರು.
ಕಾರಣ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು” ಎಂದು ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.




