ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

Date:

“ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ ನಮೂದಿಸಿದ್ದಾರೆ. ಅನುಮಾನಾಸ್ಪದ ಮತದಾರರಿಗೆ ನೋಟಿಸ್ ನೀಡುವ ಮೂಲಕ ಮತದಾರರನ್ನು ಆತಂಕ ದೂಡಿದ್ದಾರೆ. ಇದರಿಂದ ಕ್ಷೇತ್ರದ ಸಾವಿರಾರು ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಡಿದ್ದಾರೆ. ಬದುಕಿದವರನ್ನು ಸತ್ತಿದ್ದಾರೆಂದು ನಮೂದು ಮಾಡಿರುತ್ತಾರೆ” ಎಂದು ಮುಖಂಡರು‌ ಕಿಡಿಕಾರಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ತಹಶಿಲ್ದಾರ್ ಕಚೇರಿ ಎದುರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫಂಡರೇಷನ್ ವತಿಯಿಂದ  ಎಸ್ಐಆರ್ ರದ್ದುಗೊಳಿಸಲು ಹಾಗೂ‌ ಮುಖ್ಯ‌ ಚುನಾವಣಾ ಅಧಿಕಾರಿ ಜ್ಞಾನೇಶಕುಮಾರ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಮನವಿ ಸಲ್ಲಿಸಿದ ನಂತರ ಮುಖಂಡ ಪೀರು ರಾಠೋಡ್ ಮಾತನಾಡಿ, “ಎಸ್ಐಆರ್ ಪ್ರಕ್ರಿಯೆ ಬಡವರ, ಕಾರ್ಮಿಕರ ದೀನ ದಲಿತರ, ಅಲ್ಪಸಂಖ್ಯಾಂತರ ಮತಗಳನ್ನು ಕಸೆದುಕೊಳುವ ಹುನ್ನಾರ ಅಡೆಗಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಕೈಗೊಳ್ಳಲಾಗುತ್ತಿರುವ SIR ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಹಲವು ಆತಂಕಗಳು, ಅನುಮಾನಗಳು ಮತ್ತು ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಮತದಾರರ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಅಂಶವಾಗಿದೆ. ಯಾವುದೇ ಪರಿಷ್ಕರಣಾ ಪ್ರಕ್ರಿಯೆಯಿಂದ ಅರ್ಹ ಮತದಾರರ ಹೆಸರುಗಳು ತಪ್ಪಾಗಿ ಕೈಬಿಡದಂತೆ ಹಾಗೂ ಮತದಾನದ ಹಕ್ಕಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು” ಎಂದು ಒತ್ತಾಯಿಸಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಚ ಚಂದ್ರು‌ರಾಠೋಡ್ ಮಾತನಾಡಿ, “ಈ ಹಿನ್ನೆಲೆಯಲ್ಲಿ SIR ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಮತ್ತು SIRಗೆ ಸಂಬಂಧಿಸಿದಂತೆ ಉಂಟಾಗಿರುವ ಸಾರ್ವಜನಿಕ ಆಕ್ಷೇಪಣೆಗಳು ಹಾಗೂ ಆರೋಪಗಳ ಕುರಿತು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಾವು ಆಗ್ರಹಿಸುತ್ತೇವೆ” ಎಂದು ಹೇಳಿದರು.

“ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಕುರಿತು ಸಾರ್ವಜನಿಕವಾಗಿ ವ್ಯಕ್ತವಾಗಿರುವ ಆಕ್ಷೇಪಣೆಗಳು ಮತ್ತು ಆರೋಪಗಳ ಬಗ್ಗೆ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

 ಮನವಿ ಸಂದರ್ಭದಲ್ಲಿ ಮುಖಂಡರು ಅನಿಲ್ ಆರ್, ಮೆಹಬೂಬ್ ಹವಾಲ್ದಾರ್, ಆನಂದ ರಾಠೋಡ್, ತುಕಾರಾಮ್ ಚವ್ಹಾಣ, ರೇವನಪ್ಪ ರಾಠೋಡ್, ಮುತ್ತಣ್ಣ ರಾಠೋಡ್, ದೇವಲೆಪ್ಪ ರಾಠೋಡ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕವಲೆತ್ತು ನದಿ ಪಕ್ಕ ಮೆಟ್ಟಿಲು ನಿರ್ಮಿಸಲು ಡಿಸಿಗೆ ಗ್ರಾಮಸ್ಥರು ಮನವಿ

ರಾಣಿಬೆನ್ನೂರ ತಾಲೂಕಿನ ಕವಲೆತ್ತು ಗ್ರಾಮದ ರಾಷ್ಟ್ರೀಯ ಹೆದ್ದಾರಿ-48 ಸರ್ವೀಸ್ ರಸ್ತೆಯ ತುಂಗಭದ್ರಾ...

ಹಾವೇರಿ | ಸರಕಾರ ರೈತರಿಗೆ ₹30 ಸಾವಿರ ಪರಿಹಾರ ಕೊಡಬೇಕು: ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳಿ ಆಗ್ರಹ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ.  ಸರ್ಕಾರ ರೈತರರಿಗೆ ₹2500 ಪರಿಹಾರವನ್ನು ಕೊಡಬೇಕೆಂದು...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...