ಗದಗ | ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಹುನ್ನಾರ; ಸಿಪಿಐ(ಎಂ) ಆರೋಪ

Date:

“ರಾಜ್ಯದ 15 ಜಿಲ್ಲೆಗಳ ವಿದ್ಯುತ್ ವಿತರಣೆಗೆ ಅನುಮತಿ ಕೋರಿ ದಿ ಟಾಟಾ ಪವರ್ ಕಂಪೆನಿ ಲಿ., ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ (ಕೆಇಆರ್ಸಿ) ಅರ್ಜಿ ಸಲ್ಲಿಸಿದ್ದು, ಇದು ರಾಜ್ಯದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಹುನ್ನಾರವಾಗಿದೆ. ಆದ್ದರಿಂದ ಟಾಟಾ ಕಂಪನಿಯ ಕೋರಿಕೆಯನ್ನು ತಿರಸ್ಕರಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್ವಾದಿ) ಕರ್ನಾಟಕ ರಾಜ್ಯ ಸಮಿತಿ ಕೆ.ಇ.ಆರ್.ಸಿ. ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತದೆ” ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ್ ಹೇಳಿದ್ದಾರೆ.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ಅವರು, “ಬೆಸ್ಕಾಂ, ಮೆಸ್ಕಾಂ, ಸೆಸ್ಕಾಂ ಮತ್ತು ಹೆಸ್ಕಾಂ ವ್ಯಾಪ್ತಿಯ 15 ಜಿಲ್ಲೆಗಳಲ್ಲಿ 2003ರ ವಿದ್ಯುತ್ ಕಾಯ್ದೆ ಸೆಕ್ಷನ್ 14 ಹಾಗೂ 15ರ ಅಡಿ ವಿದ್ಯುತ್ ವಿತರಣೆಗೆ ಪರವಾನಗಿ ಕೋರಿ ಕೆ.ಇ.ಆರ್.ಸಿ.ಗೆ ದಿ ಟಾಟಾ ಪವರ್ ಕಂಪನಿ ಅರ್ಜಿ ಸಲ್ಲಿಸಿದೆ. ಇದು ರಾಜ್ಯದ ವಿದ್ಯುತ್ ಕ್ಷೇತ್ರವನ್ನು ಖಾಸಗಿ ಕಾರ್ಪೊರೇಟ್ ಕಂಪನಿಗಳು ಹಸ್ತಾಂತರ ಮಾಡಿಕೊಳ್ಳುವ ಷಡ್ಯಂತ್ರದ ಭಾಗವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ನರೇಂದ್ರ ಮೋದಿ ನಾಯಕತ್ವದ ಒಕ್ಕೂಟ ಸರ್ಕಾರ ಮಾಡಿರುವ ವಿದ್ಯುತ್ ತಿದ್ದುಪಡಿ ಮಸೂದೆಯ ಅಂಶಗಳನ್ನು ಉಪಯೋಗಿಸಿಕೊಳ್ಳಲು ಇಂತಹ ಪ್ರಯತ್ನಕ್ಕೆ ಖಾಸಗಿ ಕಂಪನಿಗಳು ಮುಂದಾಗಿವೆ. ಕೆ.ಇ.ಬಿ.ಯನ್ನು ವಿಭಜನೆ ಮಾಡಿ ವಿದ್ಯುತ್ ವಿತರಣಾ ಕಂಪನಿಗಳನ್ನು ಮಾಡಿದಾಗಲೇ, ಇದು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಹುನ್ನಾರವಾಗಿದೆ ಎಂದು ಸಿಪಿಐ(ಎಂ) ಪಕ್ಷವು ಎಚ್ಚರಿಕೆಯನ್ನು ನೀಡಿತ್ತು” ಎಂದು ಹೇಳಿದ್ದಾರೆ.

“ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಹಲವಾರು ಖಾಸಗಿ ಕಂಪನಿಗಳು ಪ್ರವೇಶ ಪಡೆದುಕೊಳ್ಳುವುದು ಮಾತ್ರವಲ್ಲ, ವಿದ್ಯುತ್ ಉತ್ಪಾದನೆ, ಸಾಗಾಣಿಕೆ ಮತ್ತು ವಿತರಣೆ ಈ ಮೂರು ಆಯಾಮಗಳಲ್ಲೂ ಖಾಸಗೀಕರಣ ಮಾಡುವ ಉದ್ದೇಶದಿಂದಲೇ ʼವಿದ್ಯುತ್ ತಿದ್ದುಪಡಿ ಮಸೂದೆ-2025ʼನ್ನು ಕೇಂದ್ರ ಬಿಜೆಪಿ ಸರ್ಕಾರ ಅಂಗೀಕರಿಸಿದೆ. ಒಂದೇ ವಿದ್ಯುತ್ ವಿತರಣಾ ಪ್ರದೇಶದಲ್ಲಿ ಹಲವು ವಿತರಣಾ ಕಂಪನಿಗಳಿಗೆ ಅವಕಾಶ ನೀಡುವುದು, ವಿದ್ಯುತ್ ದರಗಳನ್ನು ವಿಪರೀತವಾಗಿ ಹೆಚ್ಚಿಸುವುದು, ಕ್ರಾಸ್-ಸಬ್ಸಿಡಿಗಳನ್ನು ರದ್ದು ಮಾಡುವುದು, ಮುಂತಾದ ಅಂಶಗಳನ್ನು ಇದು ಒಳಗೊಂಡಿದೆ. ರಾಜ್ಯಗಳ ವಿದ್ಯುತ್ ಸ್ವಾಯತ್ತತೆಯನ್ನು ಇದು ಸಂಪೂರ್ಣವಾಗಿ ನಾಶ ಮಾಡುತ್ತದೆ” ಎಂದು ತಿಳಿಸಿದ್ದಾರೆ.

ಟಾಟಾ ಕಂಪನಿಯಂತಹ ಖಾಸಗಿ ಕಾರ್ಪೊರೇಟುಗಳು ಪ್ರವೇಶ ಮಾಡಿದರೆ, ಸರ್ಕಾರಗಳು ಈ ಭಾಧ್ಯತೆಯನ್ನು ಕಳಚಿಕೊಳ್ಳುತ್ತವೆ. ಇದರಿಂದ ಗೃಹ ಬಳಕೆದಾರರು, ಸಾರ್ವಜನಿಕರು, ಸಣ್ಣ ರೈತರು, ಪಂಪಸೆಟ್ ಬಳಕೆದಾರರು, ಸಣ್ಣ ಕೈಗಾರಿಕೆಗಳು ತೀವ್ರವಾದ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ಉದ್ಯೋಗದ ಮೇಲೂ ತೀವ್ರ ಪರಿಣಾಮ ಬೀರುತ್ತದೆ. ಆದ್ದರಿಂದ ವಿದ್ಯುತ್ ವಿತರಣಾ ವಲಯಕ್ಕೆ ಟಾಟಾ ಕಂಪನಿ ಪ್ರವೇಶ ನೀಡಬಾರದು. ಕೆ.ಇ.ಆರ್.ಸಿ. ಮತ್ತು ರಾಜ್ಯ ಸರ್ಕಾರ ಇಂತಹ ಪ್ರಯತ್ನಗಳನ್ನು ತಡೆ ಹಿಡಿಯಬೇಕು. ಕರ್ನಾಟಕದ ಜನತೆ ಇಂತಹ ಪ್ರಯತ್ನಗಳನ್ನು ವಿರೋಧಿಸಬೇಕು ಎಂದು ಸಿಪಿಐ(ಎಂ) ಪಕ್ಷವು ಕರೆ ನೀಡುತ್ತದೆ ಎಂದು ಪತ್ತಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...