ಗದಗ | ಲಕ್ಕುಂಡಿ ದೇಶದ ಅಗ್ರ ಪುರಾತತ್ವ ಕೇಂದ್ರವಾಗಿಸಲು ಯೋಜನೆಗೆ ಸಿದ್ಧತೆ: ಸಚಿವ ಎಚ್.ಕೆ. ಪಾಟೀಲ

Date:

“ಐತಿಹಾಸಿಕ ಲಕ್ಕುಂಡಿಯನ್ನು ರಾಷ್ಟ್ರ ಮಟ್ಟದಲ್ಲಿ ಅಗ್ರ ಪುರಾತತ್ವ ಕೇಂದ್ರವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಸಮಗ್ರ ಯೋಜನೆ ರೂಪಿಸುತ್ತಿದೆ. ಮುಂದಿನ ಒಂದು ವರ್ಷದಲ್ಲಿ 100ಕ್ಕೂ ಹೆಚ್ಚು ದೇವಾಲಯಗಳು ಮತ್ತು ಬಾವಿಗಳನ್ನು ಅನಾವರಣಗೊಳಿಸುವ ಗುರಿ ಹೊಂದಲಾಗಿದೆ” ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

- Advertisement -

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಶನಿವಾರ ಏರ್ಪಡಿಸಿದ್ದ 6 ಸ್ಮಾರಕಗಳ ಸಂರಕ್ಷಣೆ, ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ, ದಶ ಬಾವಿ, ದಶ ದೇವಾಲಯ ಅನಾವರಣ, ಪ್ರಾಚ್ಯವಶೇಷಗಳ‌ ಅನ್ವೇಷಣಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಈಗಾಗಲೇ ಪಂಚ ದೇವಾಲಯ ಮತ್ತು ಪಂಚಬಾವಿಗಳ ಅನಾವರಣ ಯಶಸ್ವಿಯಾಗಿ ನಡೆದಿದೆ, ಇದೀಗ  10 ಭಾವಿ, ದೇವಾಲಯಗಳನ್ನು ಸಾರ್ವಜನಿಕರಿಗೆ ಪರಿಚಯಿಸಲಾಗಿದೆ. ಈ ಮೂಲಕ ಪುರಾತತ್ವ ಸ್ಮಾರಕಗಳ ಸಂಖ್ಯೆ 70ರ ಗಡಿ ದಾಟಿದೆ” ಎಂದು ಹೇಳಿದರು.

“ಲಕ್ಕುಂಡಿಯ ಅನೇಕ ದೇವಾಲಯಗಳು ಮತ್ತು ಬಾವಿಗಳು ಕಾಲಕ್ರಮೇಣ ನಿರ್ಲಕ್ಷ್ಯದಿಂದ ತಮ್ಮ ಗುರುತನ್ನು ಕಳೆದುಕೊಂಡಿದ್ದವು. ಅವುಗಳನ್ನು ಪತ್ತೆಹಚ್ಚಿ ಪುನರುಜ್ಜೀವನಗೊಳಿಸುವ ಕಾರ್ಯವನ್ನು ಸರ್ಕಾರ ಮತ್ತು ಸ್ಥಳೀಯರ ಸಹಕಾರದಿಂದ ಯಶಸ್ವಿಯಾಗಿ ಕೈಗೊಳ್ಳಲಾಗಿದೆ. 2026ರೊಳಗೆ ಕನಿಷ್ಠ 50 ಬಾವಿ ಮತ್ತು 50 ದೇವಾಲಯಗಳನ್ನು ಅನಾವರಣಗೊಳಿಸಿ 100ರ ಗಡಿಯನ್ನು ದಾಟುವ ಗುರಿ ಹೊಂದಲಾಗಿದೆ. ಇದಕ್ಕೆ ಲಕ್ಕುಂಡಿ ಜನರ ಸಹಕಾರ ಅತ್ಯಗತ್ಯ” ಎಂದು ಮನವಿ ಮಾಡಿದರು.

10.16 ಕೋಟಿ ಬಿಡುಗಡೆ: ಸ್ಮಾರಕಗಳ ಅಭಿವೃದ್ಧಿಗೆ ಪ್ರಸ್ತುತ 10.16 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಹಾಲಗುಂಡಿಯಲ್ಲಿ ಬಸವೇಶ್ವರ ದೇವಾಲಯಕ್ಕೆ 1.58 ಕೋಟಿ, ಕನ್ನೇರ ಬಾವಿಗೆ 1.70 ಕೋಟಿ, ಮಲ್ಲಿಕಾರ್ಜುನ ದೇವಾಲಯಕ್ಕೆ 1.67 ಕೋಟಿ, ವಿರೂಪಾಕ್ಷೇಶ್ವರ ದೇವಾಲಯಕ್ಕೆ 1.81 ಕೋಟಿ, ಚಂದ್ರಮೌಳೇಶ್ವರ ದೇವಾಲಯಕ್ಕೆ 1.80 ಕೋಟಿ, ಕಲ್ಮಠ ದ್ವಾರಬಾಗಿಲು ಮತ್ತು ಬಾವಿಗೆ 1.50 ಕೋಟಿ ಮಂಜೂರಾಗಿದೆ. ಲಕ್ಕುಂಡಿಯಲ್ಲಿ ದೇಶದಲ್ಲೇ ಅತ್ಯುತ್ತಮ ಬಯಲು ವಸ್ತು ಸಂಗ್ರಹಾಲಯ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಈಗಾಗಲೇ 1200ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳಿಗೆ ಸಂಖ್ಯೆ ನೀಡಲಾಗಿದೆ. ಶೀಘ್ರದಲ್ಲೇ ಈ ಸಂಖ್ಯೆ 2000 ದಾಟುವ ನಿರೀಕ್ಷೆಯಿದೆ” ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್ ಜಿಲ್ಲೆಯ ಅಭಿವೃದ್ಧಿಗೆ ₹500 ಕೋಟಿ ಯೋಜನೆ

ಗ್ರಾಮಸ್ಥರ ಪ್ರಾಮಾಣಿಕತೆ ಶ್ಲಾಘನೆ: ಬಂಗಾರದ ನಾಣ್ಯಗಳಂತಹ ಅಮೂಲ್ಯ ವಸ್ತುಗಳನ್ನು ಸಹ ಸರ್ಕಾರಕ್ಕೆ ಒಪ್ಪಿಸುತ್ತಿರುವ ಲಕ್ಕುಂಡಿ ಜನರ ಪ್ರಾಮಾಣಿಕತೆ ಅಪರೂಪ. ಇತ್ತೀಚೆಗೆ ಲಕ್ಕುಂಡಿಯಲ್ಲಿ ಪತ್ತೆಯಾದ ಬಂಗಾರದ ಮೌಲ್ಯವನ್ನು ತಜ್ಞರು 8 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಲಕ್ಕುಂಡಿ–ಗದಗ–ಕಪ್ಪತಗುಡ್ಡ ಪ್ರವಾಸಿ ವಲಯಗಳಾಗಿ ರೂಪುಗೊಂಡಿದೆ. ಮುಖ್ಯಮಂತ್ರಿಗಳ ಬೆಂಬಲದೊಂದಿಗೆ ಲಕ್ಕುಂಡಿಯ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಪ್ರಸ್ತಾವನೆಗಳನ್ನು ಮಂಜೂರು ಮಾಡಲಾಗುವುದು. ಲಕ್ಕುಂಡಿಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಬಹುದಾದ ಪುರಾತತ್ವ ಕೇಂದ್ರವನ್ನಾಗಿ ರೂಪಿಸಲು ಸರ್ಕಾರ ಬದ್ಧವಾಗಿದೆ” ಎಂದು ಸಚಿವ ಎಚ್ ಕೆ ಪಾಟೀಲರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...