ಗದಗ | ಸ್ವಾತಂತ್ರ್ಯ ದಿನಾಚರಣೆಯಂದು ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

Date:

“ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಸುರಕ್ಷಿತವಾಗಿ ಕರೆತಂದು, ಕಾರ್ಯಕ್ರಮ ಮುಕ್ತಾಯದ ನಂತರ ಯಾವುದೇ ತೊಂದರೆಯಾಗದಂತೆ ಅವರನ್ನು ಸುರಕ್ಷಿತವಾಗಿ ಮರಳಿ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ತಿಳಿಸಲಾಯಿತು.

- Advertisement -

ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ವಿದ್ಯಾರ್ಥಿಗಳ ಆಗಮನ ಮತ್ತು ನಿರ್ಗಮನ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ಸಾರಿಗೆ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ” ಸೂಚಿಸಿದರು.

ಜಿಲ್ಲಾ ಕ್ರೀಡಾಂಗಣದ ಸಂಪೂರ್ಣ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೂ ಮುನ್ನ ಕ್ರೀಡಾಂಗಣದ ಒಳ ಹಾಗೂ ಹೊರ ಆವರಣವನ್ನು ಸ್ವಚ್ಛಗೊಳಿಸುವುದರೊಂದಿಗೆ, ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡಾಂಗಣ ಸಂಪೂರ್ಣ ಭರ್ತಿಯಾಗುವಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಜಿಲ್ಲಾಧಿಕಾರಿಗಳು ಚರ್ಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ ಎಂ. ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...