ಗದಗ | ಉಪನ್ಯಾಸಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಸಭಾಧ್ಯಕ್ಷರು ಜಿ.ಎಸ್.ಪಾಟೀಲ ಸಭಾಧ್ಯಕ್ಷರು 

Date:

“ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲು ಸರ್ಕಾರ ಉದ್ದೇಶಿಸಿದ್ದು, ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರದಲ್ಲಿ ಪರಿಹಾರ ಒದಗಿಸಲಾಗುವುದು” ಎಂದು ವಿಧಾನಸಭೆಯ ಸಭಾಧ್ಯಕ್ಷರು ಜಿ. ಎಸ್. ಪಾಟೀಲ ಹೇಳಿದರು.

- Advertisement -

ಗದಗ ಪಟ್ಟಣದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಗದಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ನೆರವೇರಿದ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಪದಗ್ರಹಣ ಹಾಗೂ ಧನ್ಯತಾ ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಗಮನಾರ್ಹ ಬದಲಾವಣೆಗಳು ಆಗುತ್ತಿವೆ. ಇವುಗಳಿಗೆ ಉಪನ್ಯಾಸಕರು ಸ್ಪಂದಿಸಿ ನಿರಂತರವಾಗಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. ಗದಗ ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮ ಪಡಿಸಬೇಕು ಹಾಗೂ ಗುಣಾತ್ಮಕ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಬೇಕು” ಎಂದು ಹೇಳಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ವಿಧಾನಪರಿಷತ್ತಿನ ಮಾಜಿ ಸಭಾಪತಿಗಳಾದ ಬಸವರಾಜ ಹೊರಟ್ಟಿ ಮಾತನಾಡಿ, “ಸರ್ಕಾರಕ್ಕೆ ಹಲವಾರು ಬಾರಿ ವಿನಂತಿಸಿದರೂ ಅದು ಶಿಕ್ಷಕರ ಹಾಗೂ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ. ಹಳೆಯ ಪಿಂಚಣಿ ಜಾರಿ ಸೇರಿದಂತೆ ಅನುದಾನಿತ ಶಾಲಾ, ಕಾಲೇಜು ಶಿಕ್ಷಕ ಮತ್ತು ಉಪನ್ಯಾಸಕ ನೇಮಕಾತಿ, ಉಪನ್ಯಾಸಕ ವಿದ್ಯಾರ್ಥಿ ಅನುಪಾತ ಸೇರಿದಂತೆ ಹಲವಾರು ಶಿಕ್ಷಣ ಕ್ಷೇತ್ರದ ಗಂಭೀರ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ನವೆಂಬರ ತಿಂಗಳಲ್ಲಿ ಅನುದಾನಿತ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಉಗ್ರ ಹೋರಾಟ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಮತ್ತೊರ್ವ ಅತಿಥಿಗಳಾಗಿ ಪಾಲ್ಗೊಂಡ ವಿಧಾನಪರಿಷತ್ ಸದಸ್ಯರು ಎಸ್. ವ್ಹಿ. ಸಂಕನೂರ ಮಾತನಾಡಿ, “ಇಡೀ ದೇಶಕ್ಕೆ ಮಾದರಿಯಾದ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಸರ್ಕಾರವು ವ್ಯವಸ್ಥಿತವಾಗಿ ಶಾಲಾ ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳಿಸಲು ಯೋಜಿಸುತ್ತಿದೆ. ಇದನ್ನು ಕೈಬಿಡಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ಪ್ರಮುಖ ಕೊಂಡಿಯಾದ ಪದವಿಪೂರ್ವ ಶಿಕ್ಷಣ ಇಲಾಖೆಯ ಎಲ್ಲ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಿ ಉಪನ್ಯಾಸಕರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು

ಸಮಾರಂಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗದಗ ಜಿಲ್ಲೆಗೆ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು, ನಿವೃತ್ತಿ ಹೊಂದಿದ ಪ್ರಾಚಾರ್ಯರು, ಹಾಗೂ ಉಪನ್ಯಾಸಕರು, ಶೇಕಡಾ ೧೦೦% ಫಲಿತಾಂಶಗೈದ ವಿವಿಧ ವಿಷಯಗಳ ಉಪನ್ಯಾಸಕರನ್ನು ಹಾಗೂ ಪ್ರಾಚಾರ್ಯರ ಹುದ್ದೆಗೆ ಬಡ್ತಿ ಹೊಂದಿದ ಹಾಗೂ ಸಾಧನೆಗೈದ ಉಪನ್ಯಾಸಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 

ಗದಗ ಜಿಲ್ಲಾ ಪ. ಪೂ. ಕಾಲೇಜುಗಳ ಪ್ರಾಚಾರ್ಯರ ಸಂಘದ ಕಾರ್ಯದರ್ಶಿಗಳಾದ ವಾಯ್. ಸಿ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಎಂ. ಸಿ. ಕಟ್ಟಿಮನಿ ಅಧ್ಯಕ್ಷತೆ ವಹಿಸಿದರು.  

ಕಾರ್ಯಕ್ರಮದಲ್ಲಿ ತೋಂಟದಾರ್ಯ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶಿವಾನಂದ ಪಟ್ಟಣಶೆಟ್ಟಿ, ಪ. ಪೂ. ಶಿ. ಇಲಾಖೆಯ ಗದಗ ಜಿಲ್ಲಾ ಉಪನಿರ್ದೇಶಕರು ಎಸ್. ಬಿ. ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಆರ್. ಎಸ್. ಬುರಡಿ ವಿಶೇಷ ಆಮಂತ್ರಿತರಾಗಿ ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ಪ.ಪೂ. ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ ಅಂಗಡಿ ವಂದಿಸಿದರು. ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ. ಕೆ. ಲಮಾಣಿ, ಹಿರಿಯ ಪ್ರಾಚಾರ್ಯರಾದ ಶಿರಸಿ, ಬಿ. ಜಿ. ಗಿರಿತಮ್ಮಣ್ಣವರ, ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷರಾದ ಶ್ರೀಶೈಲ ಬಿರಕಬ್ಬಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಡಾ. ದತ್ತಪ್ರಸನ್ನ ಪಾಟೀಲ, ಎಫ್. ಎನ್. ಹುಡೇದ ನಿರೂಪಿಸಿದರು. ಶ್ರೀಮತಿ ಹೆಚ್. ಎನ್. ಕಾಳೆ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊತು. ಕರ್ನಾಟಕ ಪ. ಪೂ. ಕಾಲೇಜುಗಳ ಉಪನ್ಯಾಸಕರುಗಳ ಸಂಘದ ಜಿಲ್ಲಾಧ್ಯಕ್ಷರಾದ ಎಸ್. ಎಸ್. ಸೋಮಣ್ಣನವರ ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...