ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

Date:

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ ಸಮಸ್ಯೆಗಳು ಉಲ್ಬಣಗೊಳ್ಳಲು ಮುಖ್ಯ ಕಾರಣ ನಾವೆಲ್ಲರೂ ಭಗತ್ ಸಿಂಗ್‌ರನ್ನು ಸರಿಯಾಗಿ ಅಧ್ಯಯನ ಮಾಡದಿರುವುದು. ಇನ್ನು ಮುಂದೆಯಾದರೂ ಅವರ ಚಿಂತನೆಯನ್ನು ಅಧ್ಯಯನ ಮಾಡಿ, ಮೈಗೂಡಿಸಿಕೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಮುಖಂಡ ಬಾಲು ರಾಠೋಡ್ ಹೇಳಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಎಸ್ಎಫ್ಐ ತಾಲೂಕ ಸಮಿತಿ ನೇತೃತ್ವದಲ್ಲಿ ಸಂಘದ ಕಚೇರಿಯಲ್ಲಿ ಕ್ರಾಂತಿಕಾರಿ ಭಗತ್ ಸಿಂಗ್ ರವರ 120ನೇ ಜಯಂತಿಯ ಸಂದರ್ಭದಲ್ಲಿ ಮಾತನಾಡಿದ ಅವರು, “ನಿಜವಾದ ದೇಶಪ್ರೇಮ ಎಂದರೆ ಭಗತ್‌ ಸಿಂಗರದ್ದು. ಅವರ ಸ್ವಾತಂತ್ರ್ಯ ಹೋರಾಟದಲ್ಲಿದ್ದ ಪೂರ್ಣ ಸ್ವಾತಂತ್ರ್ಯದ ಪರಿಕಲ್ಪನೆ ಸ್ವಾತಂತ್ರ್ಯ ಗಳಿಸಿ ಏಳು ದಶಕಗಳು ಕಳೆದರೂ ಇನ್ನೂ ಸಂಪೂರ್ಣವಾಗಿ ಗಳಿಸಲು ಸಾಧ್ಯವಾಗಿಲ್ಲ. ಎಲ್ಲರಿಗೂ ಶಿಕ್ಷಣ, ಉದ್ಯೋಗ, ಆರೋಗ್ಯ, ಆಶ್ರಯ ಮತ್ತು ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಿಸುವ ಸ್ವಾತಂತ್ರ್ಯದ ಆಶಯ ಇಂದಿಗೂ ನನಸಾಗದೆ ಉಳಿದಿದೆ” ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

“ಇಂದಿನ ಯುವಜನರಿಗೆ ಸಿನಿಮಾ ನಟ-ನಟಿಯರು, ರಾಜಕಾರಣಿಗಳು, ಬಂಡವಾಳಗಾರರು ಅಥವಾ ಸೆಲೆಬ್ರಿಟಿಗಳು ಆದರ್ಶವಾಗುತ್ತಾರೆ. ಆದರೆ ನಿಜವಾಗಿಯೂ ಯುವಜನರಿಗೆ ಆದರ್ಶವಾಗಬೇಕಿರುವುದು ಭಗತ್ ಸಿಂಗ್‌ರಂತಹ ದೇಶಪ್ರೇಮಿಗಳು. ಅವರು ಎತ್ತಿದ ಸಮಾಜವಾದ ಚಿರಾಯುವಾಗಲಿ, ಸಾಮ್ರಾಜ್ಯಶಾಹಿ ನಾಶವಾಗಲಿ (Up Up Socialism, Down Down Capitalism) ಎಂಬ ಕೂಗನ್ನು ಇಂದಿನ ಯುವಜನತೆ ಮತ್ತೆ ಮೊಳಗಿಸಬೇಕಿದೆ” ಎಂದು ಬಾಲು ರಾಠೋಡ್ ಒತ್ತಿ ಹೇಳಿದರು.

ಭಗತ್ ಸಿಂಗ್ ಕೇವಲ 23 ವರ್ಷಗಳ ಕಾಲ (ಸೆಪ್ಟೆಂಬರ್ 27, 1907 ರಿಂದ ಮಾರ್ಚ್ 23, 1931) ಬದುಕಿದ್ದರೂ, ಅವರ ಹೋರಾಟದ ಹಾದಿ, ದೇಶಕ್ಕಾಗಿ ಚಿಕ್ಕ ವಯಸ್ಸಿನಲ್ಲಿಯೇ ಪ್ರಾಣತ್ಯಾಗ ಮಾಡಿದ ಧೈರ್ಯ ಹಾಗೂ ಅಳವಾದ ಅಧ್ಯಯನ ಜಗತ್ತಿನ ಎಲ್ಲಾ ಯುವಜನರಿಗೆ ಆದರ್ಶನೀಯವಾಗಿದೆ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಸಿಐಟಿಯು ಜಿಲ್ಲಾ ಸಂಚಾಲಕ ಮಹೇಶ್ ಹಿರೇಮಠ, ಬಿಸಿ ಊಟ ನೌಕರ ರಾಜ್ಯ ಮುಖಂಡ ಲಕ್ಷ್ಮೀದೇವಿ, ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಅನಿಲ್ ರಾಠೋಡ್, ತನುಜಾ ರಾಯಬಾಗಿ, ಶರಣು ಮಾಟರಂಗಿ, ಮಾಂತೇಶ್ ಮಾದರ, ರವಿ ಮಾದಿ, ಪ್ರೇಮಕುಮಾರ್ ರಾಠೋಡ್, ರಮೇಶ್ ಬಡಿಗೇರ್, ವಿಜಯ್ ಚೌಹಾನ್ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದ ಯುವಕನಿಗೆ ದೆಹಲಿ ಸಚಿವನಿಂದ ಕಪಾಳ ಮೋಕ್ಷ

ದೆಹಲಿಯಲ್ಲಿ ಸಚಿವ ಪರ್ವೇಶ್ ವರ್ಮಾ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ...

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...