ಗದಗ | ಪ್ರಜಾ ಸೇವಾ ಇಲಾಖೆ: ಜನರ ಸಮಸ್ಯೆಗಳಿಗೆ ಜಿಲ್ಲಾಡಳಿತ ನೇರ ಸ್ಪಂದನೆ

Date:

‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಹಾಗೂ ‘ಅಹವಾಲು ನಿಮ್ಮದು, ಪರಿಹಾರ ನಮ್ಮದು’ ಎಂಬ ಆಶಯದೊಂದಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ನೇರವಾಗಿ ಮಂಡಿಸಿದರು.

- Advertisement -

ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಜನಸಾಮಾನ್ಯರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ಪರಿಹಾರ ಕಲ್ಪಿಸುವ ಪ್ರಜಾ ಸೇವಾ ಇಲಾಖೆಯ ಸಭೆ ಇಂದು ಶನಿವಾರ ನಡೆಯಿತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಹವಾಲುಗಳು ಸಲ್ಲಿಕೆಯಾಗಿದ್ದು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು.

ಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ, “ಜನಸಾಮಾನ್ಯರ ಬಳಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವುದರ ಜೊತೆಗೆ, ಅವರ ಸಮಸ್ಯೆಗಳನ್ನು ನೇರವಾಗಿ ಅರಿತು ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾ ಸೇವಾ ಅಭಿಯಾನದ ಜನ ಸಂಪರ್ಕ ಸಭೆಯನ್ನು ಜಾರಿಗೆ ತರಲಾಗಿದೆ” ಎಂದು ಹೇಳಿದರು.

“ಸಾಮಾನ್ಯವಾಗಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ವಿವಿಧ ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸಿ, ಹಲವು ಬಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇರುತ್ತದೆ. ಇದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಅಭಿಯಾನ ರೂಪಿಸಲಾಗಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜನರ ಬಳಿಗೆ ಸರ್ಕಾರದ ಸೇವೆ : “ಸರ್ಕಾರದ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ಇಲಾಖೆಗಳ ಸೇವೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಯಾವುದೇ ಕಾರಣಕ್ಕೂ ಅರ್ಹ ವ್ಯಕ್ತಿಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬಾರದು. ಆಡಳಿತ ವ್ಯವಸ್ಥೆ ಜನಸ್ನೇಹಿಯಾಗಿರಬೇಕು ಎಂಬ ಉದ್ದೇಶದಿಂದ ಈ ರೀತಿಯ ಜನ ಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಮಧ್ಯವರ್ತಿಗಳನ್ನು ಅವಲಂಬಿಸದೆ, ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು. ಜನರ ಅಹವಾಲುಗಳನ್ನು ಆಲಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಅಧಿಕಾರಿಗಳಿಂದ ಸ್ಥಳದಲ್ಲಿಯೇ ಸ್ಪಂದನೆ ಸಭೆಯಲ್ಲಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪೊಲೀಸ್, ಅರಣ್ಯ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರು ಅಧಿಕಾರಿಗಳ ಮುಂದಿಟ್ಟರು. ಸಾರ್ವಜನಿಕರು ಸಲ್ಲಿಸಿದ ಅಹವಾಲುಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಸಮಸ್ಯೆಯ ಸ್ವರೂಪ ಹಾಗೂ ಸಂಬಂಧಿಸಿದ ಇಲಾಖೆಯ ವ್ಯಾಪ್ತಿಯನ್ನು ಗುರುತಿಸಿ ಅಗತ್ಯ ಕ್ರಮಕ್ಕೆ ಮುಂದಾದರು.

ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸ್ಪಂದನೆ ನೀಡಲಾಯಿತು. ಇನ್ನು ಕೆಲವು ಸಮಸ್ಯೆಗಳಿಗೆ ಸ್ಥಳ ಪರಿಶೀಲನೆ, ದಾಖಲೆಗಳ ಪರಿಶೀಲನೆ ಹಾಗೂ ಸಂಬಂಧಿಸಿದ ಇಲಾಖೆಯ ಅನುಮತಿ ಅಗತ್ಯವಿರುವ ಹಿನ್ನೆಲೆಯಲ್ಲಿ, ಅವುಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ವಹಿಸಿ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿತುನ್ ಎಚ್.ಎನ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ, ಜಿಲ್ಲಾ ಪಂಚಾಯಿತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಸಹಾಯಕ ಆಯುಕ್ತ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್. ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ವೆಂಕಟೇಶ್ ಆಲ್ಕೋಡ ಮತ್ತು ತಂಡದವರು ನಾಡಗೀತೆ ಪ್ರಸ್ತುತ ಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...