“ಗದಗ-ಬೆಟಗೇರಿ ನಗರದ ಸ್ಲಂ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 863 ಮನೆಗಳು ಮಂಜೂರು ಮಾಡಲಾಗಿದೆ. ಆದರೆ ಫಲಾನುಭವಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಎಡವಟ್ಟನಿಂದ ನೈಜ ಗುಡಿಸಲು ನಿವಾಸಿಗಳು ಸರ್ಕಾರದ ವಸತಿ ಯೋಜನೆಯಿಂದ ವಂಚಿತರಾಗಿದ್ದಾರೆ” ಎಂದು ಜಿಲ್ಲಾ ಸ್ಲಂ ಸಮಿತಿ ಪಾದಾಧಿಕಾರಿಗಳು ಹೇಳಿದರು.
ಗದಗ ಪಟ್ಟಣದಲ್ಲಿ ಜಿಲ್ಲಾ ಸ್ಲಂ ಸಮಿತಿ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆ ಕಲ್ಪಿಸುವಂತೆ ಸ್ಲಂ ಬೋರ್ಡ ಅಧಿಕಾರಿಗಳಿ ಮನವಿ ಸಲ್ಲಿಸಿ ಅವರು ಮಾತನಾಡಿದರು.
“ರಾಜ್ಯ ಸರ್ಕಾರದಿಂದ ಜಾರಿಗೆ ತರಲಾಗುತ್ತಿರುವ 2.0 ವಸತಿ ಯೋಜನೆಗೆ ನಗರದ ಗುಡಿಸಲು ನಿವಾಸಿಗಳ ಅರ್ಹ ಫಲಾನುವಿಗಳನ್ನು ಗುರುತಿಸಿ ವಸತಿ ಯೋಜನೆ ಕಲ್ಪಿಸಬೇಕು” ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಸ್ಲಂ ಬೋರ್ಡ ಅಧಿಕಾರಿಗಳಿಗೆ ಮನವಿ ಮಾಡಿದರು.
ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರು ಇಮ್ತಿಯಾಜ.ಆರ್.ಮಾನ್ವಿ ಮಾತನಾಡಿ, “ಗದಗ-ಬೆಟಗೇರಿ ನಗರದಲ್ಲಿ 863 ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆಡಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ’ ಎಂದು ಗುತ್ತಿಗೆದಾರರು ಹೇಳುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಇನ್ನು ಹಲವು ಸ್ಲಂಗಳಲ್ಲಿ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕಾಗಿದೆ. ನಗರದಲ್ಲಿ ನಿರ್ಮಿಸಿಲಾಗುತ್ತಿರುವ ಮನೆಗಳ ಕುರಿತು ಯಾವ ಪ್ರದೇಶದಲ್ಲಿ ಕಳಪೆ ಕಾಮಗಾರಿ ಆಗುತ್ತಿದೆ. ಯಾವ ಸ್ಥಿತಿಯಲ್ಲಿ ಮನೆಗಳು ಕಾಮಗಾರಿ ನಿಲ್ಲಿಸಲಾಗಿದೆ ಎಂದು ಸ್ಲಂ ಬೋರ್ಡ್ ಅಧಿಕಾರಿಗಳು ಸ್ಥಳ ಪರಿಶೀಲಿಸಿಬೇಕು” ಎಂದರು.
“ಮನೆಗಳ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿರುವುದರ ಕುರಿತಯ ಅಧಿಕಾರಿಗಳು ಗುತ್ತಿಗೆದಾರರಿಗೆ ನೋಟಿಸ್ ನೀಡಬೇಕು. ಸ್ಥಳೀಯ ರಾಜಕೀಯ ಪ್ರಭಾವದಿಂದ ಸ್ಲಂ ಪ್ರದೇಶಗಳನ್ನು ಹೊರತುಪಡಿಸಿ ಈಗಾಗಲೇ ಸರ್ಕಾರದ ವಸತಿ ಯೋಜನೆಡಿಯಲ್ಲಿ ಮನೆಗಳನ್ನು ನಿರ್ಮಿಸಿ ಕೊಟ್ಟಿರುವ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮನೆಗಳನ್ನು ನಿರ್ಮಿಸುತ್ತಿರುವುದು ಇದು ಸರ್ಕಾರದ ಅನುದಾನ ದುರ್ಬಳಕೆ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.
“ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಪ್ರಭಾದಿಂದ ಸ್ಲಂ ರಹಿತ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಲು ಸೂಚಿಸಿದ್ದರಿಂದ ನಗರದ ನೈಜ ಸ್ಲಂ ನಿವಾಸಿಗಳಿಗೆ, ವಸತಿರಹಿತರಿಗೆ ಜನಪ್ರತಿನಿಧಿಗಳಿಂದ ಅನ್ಯಾಯ ಮಾಡುತ್ತಿರುವುದನ್ನು ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಖಂಡಿಸುತ್ತೇವೆ. ಕೊಡಲೇ ಇದನ್ನು ಸರಿಪಡಿಸಿ ಸ್ಲಂ ಪ್ರದೇಶಗಳಲ್ಲಿ ಮಾತ್ರ ಸರ್ಕಾರದ ವಸತಿ ಯೋಜನೆಯ ಮನೆಗಳನ್ನು ನಿರ್ಮಾಣ ಮಾಡಬೇಕು” ಎಂದು ಆಗ್ರಹಿಸಿದರು.
“ನಗರದ ಸ್ಲಂ ಪ್ರದೇಶಗಳ ಜ್ವಲಂತ ಸಮಸ್ಯೆಗಳು ಮಹಿಳೆಯರಿಗಾಗಿ ಶೌಚಾಲಯ ನಿರ್ಮಾಣ, ಸ್ಲಂ ಭವನ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಮಾಡುವುದು, ಕೊಳಗೇರಿಗಳ ಅಭಿವೃಧ್ದಿ ಅನುದಾನ ಮಂಜೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವುದು, ಅಘೋಷಿತ ಗುಡಿಸಲು ಪ್ರದೇಶಗಳ ಘೋಷಣೆಗೆ ತಕ್ಷಣ ಕ್ರಮ ಕೈಗೊಳ್ಳಲು” ಎಂದು ಆಗ್ರಹಿಸಿದರು.
“ನಗರದ ಸ್ಲಂ ಜನಸಂಖ್ಯೆಗೆ ಅನುಗುಣವಾಗಿ ಮನೆಗಳನ್ನು ನಿರ್ಮಿಸಲು ಭೂಮಿಯನ್ನು ಖರೀದಿಸಲು, ಸ್ಲಂ ಜನರ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಕ್ಷಣ ಕುಂದು-ಕೊರತೆಗಳ ಸಭೆಯನ್ನು ಆಯೋಜಿಸಬೇಕು.
ಮನವಿಗೆ ಸ್ಪಂದಿಸಿದ ಸ್ಲಂ ಬೋರ್ಡ ಅಧಿಕಾರಿಗಳು “ಸ್ಲಂ ಜನರ ಸಮಸ್ಯಗಳನ್ನು ಹಂತ-ಹಂತವಾಗಿ ಕೆಲಸ ಮಾಡಲಾಗುವುದು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆಯಲು ಪತ್ರ ಕಳುಹಿಸಿ, ನೇರವಾಗಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಸಭೆಯ ದಿನಾಂಕವನ್ನು ನಿಗದಿಗೊಳಿಸಲಾಗುವುದು” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಮಹಿಳಾ ಸಮಿತಿ ಅಧ್ಯಕ್ಷರಾದ ಪರವೀನಬಾನು ಹವಾಲ್ದಾರ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಪುಷ್ಪಾ ಬಿಜಾಪೂರ, ರವಿ ಗೋಸಾವಿ, ಮೆಹಬೂಬಸಾಬ ಬಳ್ಳಾರಿ, ಜಂದಿಸಾಬ ಢಾಲಾಯತ, ಅಫ್ರೋಜಾ ನಾಗನೂರ, ಮುನ್ನಾ ಅಗಡಿ, ಮೌಲಾಸಾಬ ಮುಜಾವರ, ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.




