ಶಿರಹಟ್ಟಿ ಹಾಗೂ ಲಕ್ಷೇಶ್ವರ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಯ ನೇಮಕಾತಿಯಲ್ಲಿ ಸರ್ಕಾರದ ಆದೇಶದಂತೆ ಒಳ ಮೀಸಲಾತಿ ಅನ್ವಯಿಸಿ ನೇಮಕಾತಿ ಮಾಡಬೇಕು” ಎಂದು ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಭೀಮ ಶಕ್ತಿ ಸಂಘಟನೆಯ ವತಿಯಿಂದ ಉಪ ಜಿಲ್ಲಾಧಿಕಾರಿ ಮನವಿ ಸಲ್ಲಿಸಲಾಯಿತು.
“ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ತಾಲೂಕುಗಳ ಅಂಗನವಾಡಿ ಹುದ್ದೆಗಳನ್ನು ಮೀಸಲಾತಿ ಅನ್ವಯ ನೇಮಕಾತಿ ಮಾಡಿಕೊಳ್ಳಬೇಕು” ಎಂದು ಮುಖಂಡರು ಒತ್ತಾಯಿಸಿದರು.
ಭೀಮ ಶಕ್ತಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಶಂಕರ ಮುಗುಳಿ ಮಾತನಾಡಿ, “ಸರ್ಕಾರದ ಆದೇಶದಂತೆ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಸರ್ಕಾರದ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿಯೂ ಸಹ ಒಳ ಮೀಸಲಾತಿ ಅನ್ವಯದಲ್ಲಿ ನೇಮಕಾತಿ ಮಾಡಬೇಕೆಂಬ ಸರ್ಕಾರದ ಆದೇಶವಿದೆ” ಎಂದು ಹೇಳಿದರು.
ಸರಕಾರದ ಆದೇಶದಲ್ಲಿ ಸ್ಪಷ್ಟವಾಗಿ ನೇಮಕಾತಿ ಅಧಿಸೂಚನೆಯಲ್ಲಿ ಪರಿಶಿಷ್ಟ ಜಾತಿಗೆ ಮೂರಕ್ಕಿಂತ ಹೆಚ್ಚು, ಹುದ್ದೆಗಳು ಲಭ್ಯವಾದಲ್ಲಿ ಕಡ್ಡಾಯವಾಗಿ ಒಳ ಮೀಸಲಾತಿ ಅನ್ವಯಿಸಬೇಕೆಂದು ಹೇಳಿದೆ” ಎಂದರು.
ಸರ್ಕಾರದ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸ್ಪಷ್ಟವಾಗಿ ಆದೇಶ ಮಾಡಿದರು ಸಹ ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ತಮ್ಮ ಮನಸ್ಸಿಗೆ ಬಂದಂತೆ ನೇಮಕಾತಿ ಪ್ರಕ್ರಿಯೆಯ ಆದೇಶವನ್ನು ಹೊರಡಿಸುವ ಮೂಲಕ ಸಾಮಾಜಿಕ ಮತ್ತು ಕಾನೂನಿನ ವಿರುದ್ಧವಾಗಿ ತಮ್ಮ ಅಧಿಕಾರ ಚಲಾಯಿಸುವ ಮೂಲಕ ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಅನ್ಯಾಯ ಮತ್ತು ಮೋಸ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ” ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ಆದೇಶದಂತೆ ನೇಮಕಾತಿ ಪ್ರಕ್ರಿಯೆಯಲ್ಲಿ ಒಳಮೀಸಲಾತಿ ಜಾರಿ ಅನ್ವಯ ನೇಮಕಾತಿ ಮಾಡುವ ಮೂಲಕ ತಳ ಸಮುದಾಯಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡಲೇಬೇಕು. ಇಲ್ಲದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಮನವಿ ಸಂಧರ್ಭದಲ್ಲಿ ಸಂಘಟನೆಯ ರಾಜ್ಯ ಕಾನೂನು ಸಲಹೆಗಾರರು ಮೈಲಾರಪ್ಪ ಡಿ ಎಚ್, ಅಣ್ಣಪ್ಪ ಗುತ್ತೇಮ್ಮನವರ, ಅನಿಲ ಸಣ್ಣತಂಗಿಯವರ, ಪ್ರವೀಣ ಅದರಗುಂಚಿ, ಸ್ಯಾಮಸುಂದರ, ಮನು ತುರಾಡಿ, ಸೋಮಣ್ಣ ಇನ್ನೂ ಅನೇಕರು ಉಪಸ್ಥಿತರಿದ್ದರು.




