ಗದಗ | ಅಕ್ರಮ ಮರಳು ಸಾಗಾಣಿಕೆ ಕೇಂದ್ರಗಳ ಮೇಲೆ ಕಂದಾಯ ನಿರೀಕ್ಷಕರ ದಾಳಿ

Date:

ಲಕ್ಷ್ಮೇಶ್ವರ ತಾಲೂಕಿನಾದ್ಯಂತ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಕಂದಾಯ ಇಲಾಖೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಡೆಯುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ ಬಡ್ನಿ, ಹುಲ್ಲೂರು, ಮಲ್ಲಾಪುರ, ಹಾಗೂ ಸೋಗಿಹಾಳ ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗುತ್ತಿತ್ತು. ಈ ಬಗ್ಗೆ ನಿಖರ ಮಾಹಿತಿ ಪಡೆದ ಕಂದಾಯ ನಿರೀಕ್ಷಕರು, ಮರಳು ಸಾಗಾಣಿಕೆ ನಡೆಯುತ್ತಿದ್ದ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಟ್ಟುನಿಟ್ಟಿನ ಸೂಚನೆ: ತಾಲೂಕಿನಾದ್ಯಂತ ಅಕ್ರಮವಾಗಿ‌ ಮರಳು ದಂಧೆಯನ್ನು ಯಾವುದೇ ಕಾನೂನು ಭಯವಿಲ್ಲದೆ ನಡೆಯುತ್ತಿದೆ. ಇದರ ಹಲವರು ಮಾಹಿತಿ ನೀಡಿರುವುದನ್ನ‌ ಆದರಿಸಿ ಅಕ್ರಮ‌ ಮರಳು ಅಡ್ಡೆಗಳ ಮೇಲೆ ಕಂದಾಯ ನಿರೀಕ್ಷಕರು ದಾಳಿ ಪರೀಶಿಲಿಸಿದ್ದಾರೆ. ‘ಕಳ್ಳ ಮರಳು ಸಾಗಾಣಿಕೆಯನ್ನು  ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಕಂದಾಯ ಅಧಿಕಾರಿಗಳು ತಿಳಿಸಿದರು.

ಗ್ರಾಮಗಳಲ್ಲಿ ಅನಧಿಕೃತವಾಗಿ ಮರಳು ಸಾಗಾಣಿಕೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಯಾವುದೇ ಕಾರಣಕ್ಕೂ ನಿಯಮ ಮೀರಿ ಮರಳು ಸಾಗಿಸಲು ಅವಕಾಶ ನೀಡಬಾರದೆಂದು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಲಕ್ಕುಂಡಿಯ ದುರ್ಗಾದೇವಿ ಕೆರೆಯಲ್ಲಿ 800 ವರ್ಷಗಳ ಹೊಯ್ಸಳ ‘ಸಂಗೀತ-ನೃತ್ಯ’ ಶಿಲ್ಪಗಳು ಪತ್ತೆ

“ಈ ಕಾರ್ಯಾಚರಣೆಯು ಅಕ್ರಮ ಮರಳು ದಂಧೆಕೋರರಲ್ಲಿ ನಡುಕ ಹುಟ್ಟಿಸಿದ್ದು, ಪರಿಸರ ರಕ್ಷಣೆ ಮತ್ತು ಸರ್ಕಾರದ ನಿಯಮಗಳ ಪಾಲನೆಗೆ ಇಲಾಖೆ ಮುಂದಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...