ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

Date:

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ ಗದಗ ಜಿಲ್ಲೆಯ ಹಳ್ಳಿಗಳು ಸಾಕ್ಷಿ. ಸೋದರ ಸೊಸೆಗೆ ಸೋದರತ್ತೆಯರು ಸೀರೆ ಉಡಿಸಬೇಕು ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಗದಗ ಜಿಲ್ಲೆಯ ಕೆಲ ಭಾಗದಲ್ಲಿ ಕಳೆದ 10-15 ದಿನಗಳಿಂದ ಸೀರೆಗಳ ಮಾರಾಟ ಬಲು ಜೋರಾಗಿದೆ. ಮಹಿಳೆಯರು ತಮ್ಮ ಅಣ್ಣ  ಅಥವಾ ತಮ್ಮನಿಗೆ ಒಬ್ಬಳೇ ಮಗಳಿದ್ದರೆ ಸೋದರತ್ತೆ ಸೀರೆ ಉಡಿಸಬೇಕು. ಇಲ್ಲಾಂದ್ರೆ ಕೇಡಾಗುತ್ತೆ ಅನ್ನೋ ಸುದ್ದಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹಳ್ಳಿಗಳಲ್ಲಿ ಹಬ್ಬಿದೆ.

- Advertisement -

ಹೀಗಾಗಿ ನಮ್ಮ ಅಣ್ಣ ಅಥವಾ ತಮ್ಮನ ಮಗಳಿಗೆ ಒಳ್ಳೆಯ ಸೀರೆ ಕೊಡಿ ಅಂತ ಮಹಿಳೆಯರು ಕೇಳ್ತಾಯಿದ್ದಾರೆ. ಇದರಿಂದ ಬಟ್ಟೆ ಅಂಗಡಿಗಳ ಮಾಲೀಕರು ಭರ್ಜರಿ ವ್ಯಾಪಾರವಾಗುತ್ತಿದೆ. ಭೀಕರ ಬರ ಹಿನ್ನೆಲೆಯಲ್ಲಿ ಈ ಬಾರಿ ಹಬ್ಬಗಳಲ್ಲಿ ಜನರು ಬಟ್ಟೆ ಖರೀದಿಗೆ ಮುಂದಾಗಿರಲಿಲ್ಲ. ಆದರೆ, ಈ ವದಂತಿ ಗ್ರಾಮೀಣ ಭಾಗದ ಜನರನ್ನು ದಂಗು ಬಡಿಸಿದೆ. ಮಹಿಳೆಯರು ಪಟ್ಟಣದ ಬಟ್ಟೆ ಅಂಗಡಿಗಳಲ್ಲಿ ಸೀರೆ ಖರೀದಿಗೆ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಳೆದ 15 ದಿನಗಳಿಂದ ತಾಲೂಕಿನ ಮಾಚೇನಹಳ್ಳಿ, ಬೆಳ್ಳಟ್ಟಿ, ಹೊಸಳ್ಳಿ, ನಾಗರಮಡುವು, ತಂಗೋಡ, ಕೋಗನೂರು, ಹಬ್ಬಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಈ ರೀತಿಯ ವದಂತಿ ಹಬ್ಬಿದೆ. ಸೀರೆ ಕೊಡಿಸದಿದ್ದರೆ ಕೇಡಾಗುತ್ತೆ ಎಂಬ ನಂಬಿಕೆಯಿಂದ ತವರು ಮನೆಗೆ ಹೆಣ್ಣುಮಕ್ಕಳು ಬಂದು ಅಣ್ಣ, ತಮ್ಮನ ಮಗಳಿಗೆ ಸೀರೆ ಉಡಿಸಿ, ಆರತಿ‌ ಮಾಡುವುದು ಸಾಮಾನ್ಯವಾಗಿದೆ.

ಸೊಸೆಗೆ ಹೊಸ ಸೀರೆ ಉಡಿಸಿ ಹಣೆಗೆ ಕುಂಕುಮ ಇಟ್ಟು ಆರತಿ ಬೆಳಗಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ತಾಯಂದಿರು ತವರು ಮನೆಯವರನ್ನು ಹರಸುತ್ತಿದ್ದಾರೆ. ಈ ತರದ ವದಂತಿ ಇದೇ ಮೊದಲೇನಲ್ಲ, ಈ ಮೊದಲು, ತಾಯಿಗೆ ಮಗಳು ಸೀರೆ ಕೊಡಿಸುವುದು, ಒಬ್ಬನೇ ಮಗನಿದ್ದರೆ ಬೆಳ್ಳಿ ಕಡಗ ಕೊಡಿಸುವುದು ಸುದ್ದಿಯಾಗಿತ್ತು.

ಇವುಗಳನ್ನು ಯಾರು ಹಬ್ಬಿಸುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ. ಹಳ್ಳಿಯ ಜನರನ್ನು ಇಂತಹ ವದಂತಿಗಳಿಂದ ದಾರಿ ತಪ್ಪಿಸುವ ಕೆಲಸವಾಗುತ್ತಿದೆ. ಒಟ್ಟಾರೆ ಇಂತಹ ವದಂತಿಗಳು ಜನರಲ್ಲಿ ಪುನ: ಮೌಢ್ಯವನ್ನು ಹುಟ್ಟು ಹಾಕುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...