ಗದಗ | ಡೊನೇಷನ್ ಹಾವಳಿ ತಡೆಗಟ್ಟಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಎಸ್ಎಫ್ಐ ಆಗ್ರಹ

Date:

ಅನುದಾನಿತ, ಅನುದಾನರಹಿತ  ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯ ದಿನಾಂಕವನ್ನು ರಾಜ್ಯ ಸರಕಾರ ಇನ್ನೂ ನಿಗದಿ ಪಡಿಸಿಲ್ಲ. ಹೀಗಿರುವಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಪ್ರಕ್ರಿಯೆಗಳನ್ನು ಪ್ರಾರಂಭಿಸಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ನೀತಿ-ನಿಯಮಗಳನ್ನು ಮೀರಿ ಡೊನೇಷನ್ ವಸೂಲಿ ಮಾಡತೊಡಗಿವೆ. ಇಂತಹ ಶಿಕ್ಷಣ ಸಂಸ್ಥೆಗಳ ಮೇಲೆ ಕೂಡಲೇ ಕಾನೂನು ಕ್ರಮ ಜರುಗಿಸುವಂತೆ ಎಸ್ಎಫ್ಐ ಒತ್ತಾಯಿಸಿತು.

- Advertisement -

 ಗದಗ ಜಿಲ್ಲೆಯ ರೋಣ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಶಿಕ್ಷಣ ಇಲಾಖೆ ಅಧಿಕಾರಿ ಬಸವರಾಜ ಪಂಪಣ್ಣವರ ಹಾಗೂ ತಹಶೀಲ್ದಾರ್ ಕಚೇರಿಯ  ಶಿರಸ್ತಿದಾರರು ರೇಣುಕಾ ನೆಲೊಗಲ್ ಅವರ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ, ಉಪ ನಿರ್ದೇಶಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನಂತರ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ್ ಮಾತನಾಡಿ, “ಶಿಕ್ಷಣ ಸಂಸ್ಥೆಗಳು ಸೀಟುಗಳ ಲಭ್ಯತೆ, ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ, ನಿಯಮಗಳ ಕುರಿತು ಶಿಕ್ಷಣ ಇಲಾಖೆ ಅನೇಕ ಸುತ್ತೋಲೆ ಹೊರಡಿಸಿದರೂ ಖಾಸಗಿ ಶಾಲೆಗಳು ಎಗ್ಗಿಲ್ಲದೆ ವಸೂಲಿ ಮಾಡುತ್ತಿವೆ. ಈ ಮೂಲಕ ನಿಯಮಗಳನ್ನು ಉಲ್ಲಂಘಿಸಿ ಆದೇಶಗಳಿಗೆ ಬೆಲೆ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸುತ್ತೇವೆ” ಕಿಡಿಕಾರಿದರು.

“ಕಾಳ ಸಂತೆಯಲ್ಲಿ ಶಿಕ್ಷಣ ಮಾರಾಟವಾಗುತ್ತಿದೆ. ಜಿಲ್ಲೆಯಾದ್ಯಂತ ನಾಯಿ ಕೊಡೆಗಳಂತೆ ಖಾಸಗಿ ಶಾಲೆಗಳು, ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಿವೆ. ಒಂದೆಡೆ ರಾಜ್ಯದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೋನೆಷನ್ ಮನಬಂದತೆ ಪ್ರಾರಂಭವಾಗಿದೆ. ಬಡ ಹಿಂದುಳಿದ ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೋನೆಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ತುಂಬಾ ದುರದರಷ್ಟಕರವಾಗಿದೆ” ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಶಿಕ್ಷಣ ಹಕ್ಕು ಕಾಯ್ದೆ 1983 ಮತ್ತು 2009ರ ಆರ್.ಟಿಇ ಕಾಯ್ದೆ ಜಾರಿಯಾದರೂ ಜಿಲ್ಲೆಯಲ್ಲಿ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಆರ್.ಟಿ.ಇ ಸೀಟು ಮಧ್ಯವರ್ತಿಗಳ ಪಾಲಾಗುತ್ತಿವೆ. ಜಿಲ್ಲೆಯ ಬಹುತೇಕ ಖಾಸಗಿ ಶಾಲೆಗಳಲ್ಲಿ 30 ರಿಂದ 1 ಲಕ್ಷ ರೂ ವರೆಗೂ ಡೊನೇಷನ್ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ. ಹಾಗೂ ಅಕ್ರಮವಾಗಿ ಟ್ಯುಷನ್, ಟ್ಯೂಟರಿಯಲ್, ಅನದೀಕೃತವಾಗಿ ICSC, CBSC ಹೆಸರಿನಲ್ಲಿ ಶಾಲೆಗಳು ನಡೆಯುತ್ತೀವೆ ಸಮ್ಮರ್ ಕ್ಯಾಂಪ್ (ಬೇಸಿಗೆ ತರಬೇತಿ ಕೇಂದ್ರ)ಗಳ” ಇತ್ಯಾದಿ ಹೆಸರುಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿ ಸರಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಗಲೂ ದರೋಡೆ ಮಾಡುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ಮೌನ ವಹಿಸಿರುವುದೇಕೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ ಎಫ್ ಐ ಗದಗ ಜಿಲ್ಲಾಧ್ಯಕ್ಷರು ಚಂದ್ರು ರಾಠೋಡ ಮಾತನಾಡಿ, “ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ 10×6 ಸೈಜಿನಲ್ಲಿ ಫೆಕ್ಸ್ ಪ್ರಕಟಿಸಬೇಕು. ಇದೇ ಮಾಹಿತಿಯನ್ನು ಇಲಾಖೆಯ ವೆಬ್ ಸೈಟ್‌ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದರೆ ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿರುವುದಿಲ್ಲ. ಹೆಚ್ಚಿನ ದರದಲ್ಲಿ ಕಲಿಕಾ ಸಾಮಗ್ರಿಗಳ ವಿದ್ಯಾರ್ಥಿಗಳಿಗೆ ಕೊಟ್ಟು ಶಾಲೆಗಳನ್ನು ಅಂಗಡಿಯಾಗಿ ಮಾರ್ಪಡಿಸಿದ ಶಾಲೆಗಳ ವಿರುದ್ಧ ಮಾನ್ಯತೆಯನ್ನು ರದ್ದು ಮಾಡಬೇಕು. ಜಿಲ್ಲೆಯ ಬಹುತೇಕ ಶಾಲೆಗಳು ಆಯುಕ್ತರ ಆದೇಶವನ್ನು ಉಲ್ಲಂಘಿಸಿದ್ದು, ಅಂತಹ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ಮುಚ್ಚಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮತ್ತು ಈ ಕೂಡಲೇ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಮಿತಿ ರಚಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರಾದ ಚಂದ್ರು ರಾಠೋಡ, ರಾಜ್ಯ ಉಪಾಧ್ಯಕ್ಷರಾದ ಗಣೇಶ ರಾಠೋಡ, ಶಿರಸ್ತಿದಾರರಾದ ಶ್ರೀಮತಿ ಶಿಲ್ಪ ಮೇಡಂ, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಶ್ರೀ ಬಸವರಾಜ ಪಂಪಣ್ಣವರ,ಎಸ್ ಎಫ್ ಐ ತಾಲೂಕು ಮುಖಂಡರಾದ ಶರಣಪ್ಪ ಮಾಟರಂಗಿ, ಮಲ್ಲಿಕಾರ್ಜುನ ಮುರಡಿ, ನಾಗರಾಜ್ ಅಂಗಡಿ, ಸುಪ್ರೀತ ಬೆಳವಟಗಿ,ಅನೀಲ, ಗೌತಮ್ ಉಪಸ್ಥಿತರಿದ್ದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...