ಗದಗ | ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸಲು ಎಸ್ಎಫ್ಐ ಆಗ್ರಹ

Date:

“ಶಿಕ್ಷಣ ಪಡೆಯಲು ಗಜೇಂದ್ರಗಡ ಸುತ್ತ ಮುತ್ತಲಿನ ಸುಮಾರು ಹಳ್ಳಿಗಳು ಹಾಗೂ ನಗರ ಪ್ರದೇಶಗಳಿಂದ ವಿದ್ಯಾರ್ಥಿಗಳು ನಗರಕ್ಕೆ ಬರುತ್ತಾರೆ. ತಾಲೂಕಿನಾದ್ಯಂತ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರತಿ ವರ್ಷ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಪದವಿ ಅಂತಿಮ ವರ್ಷ ಮುಗಿಸಿ ಉತ್ತೀರ್ಣರಾಗುತ್ತಾರೆ. ಆದ್ದರಿಂದ ಎಂಎ, ಎಂಕಾಂ ಎಂಎಸ್‌ಸಿ, ಸ್ನಾತಕೋತ್ತರ ಪದವಿಗಳನ್ನು ಪ್ರಾರಂಭಿಸಬೇಕು” ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯ ಆವರಣದಲ್ಲಿ ಎಸ್ಎಫ್ಐ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಒಳಗೊಂಡು ಸ್ನಾತಕೋತ್ತರ ಕೇಂದ್ರವನ್ನು ಆರಂಭಿಸಬೇಕು. ನಡೆಸಿ ಕಾಲೇಜಿನ ಪ್ರಾಧ್ಯಾಪಕರು ವಿಶ್ವನಾಥ ಹಾಗೂ ಕಂದಾಯ ನಿರೀಕ್ಷಕರು ಪವಾಡಗೌಡ ಮಾಲಿಪಾಟೀಲ ಇವರ ಮೂಲಕ ಧಾರವಾಡದ ಕವಿವಿ ಉಪ ಕುಲಪತಿ, ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ ಮಾತನಾಡಿ, “ಗಜೇಂದ್ರಗಡ ನಗರಕ್ಕೆ ಸುಮಾರು ನಾಲ್ಕು ತಾಲೂಕುಗಳಿಂದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಾರೆ. ಪದವಿ ನಂತರದ ಶಿಕ್ಷಣ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡಲು ಗಜೇಂದ್ರಗಡದಲ್ಲಿ ಸ್ನಾತಕೋತ್ರ ಕೇಂದ್ರ ಇಲ್ಲ. ದೂರ ದೂರದ ಊರುಗಳಿಗೆ ಹೋಗಿ ಕೆಲವು ವಿದ್ಯಾರ್ಥಿಗಳು ಪಿಜಿ ಓದುತ್ತಿದ್ದಾರೆ. ಇನ್ನೂ ಕೆಲವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಇದನ್ನು ಎಸ್ಎಫ್ಐ ಖಂಡಿಸುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಪದವಿ ಕೇಂದ್ರ ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.

ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ ಮಾತನಾಡಿ, “ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ ಆಗಿದೆ. ಆದರೆ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ಒದಗಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಗಜೇಂದ್ರಗಡ ತಾಲೂಕಿನಲ್ಲಿ ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿ ವರ್ಷ ತಮ್ಮ ಪದವಿ ಶಿಕ್ಷಣ ಮುಗಿಸಿ ಹೊರಹೋಗುತ್ತಿದ್ದಾರೆ. ಆದರೆ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಬೇರೆ ಬೇರೆ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರ, ಕೂಡಲೇ ಇದರ ವರದಿ ತಯಾರಿಸಿ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಪದವಿ ಕೇಂದ್ರ ಪ್ರಾರಂಭಿಸಲು ಮುಂದಾಗಬೇಕೆಂದು ಸಾಂಕೇತಿಕ ಹೋರಾಟ ಮೂಲಕ ಎಸ್ ಎಫ್ ಐ ಸಂಘಟನೆ ಎಚ್ಚರಿಸುತ್ತದೆ” ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಅನಿಲ್ ಆರ್, ವಿಶ್ವನಾಥ, ಪವಾಡಗೌಡ ಮಾಲಿಪಾಟೀಲ, ಗುರುಕಿರಣ್, ಶರಣು ಮಾಟರಂಗಿ, ಪ್ರಸನ್ನ ಮೂರ್ತಿ, ಗೌತಮ್, ಕೀರಣ್ ರಾಠೋಡ, ಲಕ್ಷ್ಮಿ ಕಬ್ಬರಿಗೆ, ಭೀಮವ್ವ ,ಕಾವ್ಯ, ಅಕ್ಷತಾ, ಕಿರಣ್ ಪಮ್ಮಾರ್, ಪರಶುರಾಮ್ ಜಾದವ್, ವಿನಾಯಕ್ ರಾಥೋಡ, ದ್ಯಾಮಣ್ಣ ತೆಂಗುಂಟಿ, ಮಂಜುನಾಥ್, ಹರೀಶ್, ಮಂಜುನಾಥ, ಭಾಗ್ಯ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...