ಗದಗ | ನಿಯಮಗಳನ್ನು ಮೀರಿ ಡೊನೇಷನ್ ವಸೂಲಿ ಖಂಡಿಸಿ ಎಸ್ಎಫ್ಐ ಪ್ರತಿಭಟನೆ

Date:

2026-27 ನೇ ಸಾಲಿನಲ್ಲಿ ಪ್ರಾರಂಭವಾಗುವ ಅನುದಾನಿತ, ಅನುದಾನರಹಿತ  ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿಯ ದಿನಾಂಕವನ್ನು ರಾಜ್ಯ ಸರಕಾರ ಇನ್ನೂ ನಿಗದಿ ಪಡಿಸಿಲ್ಲ. ಹೀಗಿರುವಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಪ್ರಕ್ರಿಯೆಗಳನ್ನು ಪ್ರಾರಂಭಿಸಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ನೀತಿ-ನಿಯಮಗಳನ್ನು ಮೀರಿ ಡೊನೇಷನ್ ವಸೂಲಿಯಲ್ಲಿ ತೊಡಗಿವೆ” ಎಂದು ಎಸ್ಎಫ್ಐ ಪ್ರತಿಭಟನೆ ನಡೆಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಎಸ್ಎಫೈ ನೇತೃತ್ವದಲ್ಲಿ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆ ಸೇರಿ, ಡೊನೇಷನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಮತ್ತು ಅನಧಿಕೃತ ಬೇಸಿಗೆ ತರಬೇತಿ ಕೇಂದ್ರಗಳ ಮೇಲೆ ಸೂಕ್ತ ಕಾನೂಕು ಕ್ರಮ ಕೈಗೊಳ್ಳಲು ಒತ್ತಾಯಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಮಾತನಾಡು, ಖಾಸಗಿ ಶಿಕ್ಷಣ ಸಂಸ್ಥೆಗಳು ಮಿತಿಮೀರಿ ಡೊನೇಷನ್ ಸಂಗ್ರಹಿಸುತ್ತಿದ್ದಾರೆ. ಸೀಟುಗಳ ಲಭ್ಯತೆ, ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ, ನಿಯಮಗಳ ಕುರಿತು ಶಿಕ್ಷಣ ಇಲಾಖೆ ಅನೇಕ ಸುತ್ತೋಲೆ ಹೊರಡಿಸಿದರೂ ಖಾಸಗಿ ಶಾಲೆಗಳು ಎಗ್ಗಿಲ್ಲದೆ ವಸೂಲಿಯಲ್ಲಿ ತೊಡಗಿವೆ. ಈ ಮೂಲಕ ನಿಯಮಗಳನ್ನು ಉಲ್ಲಂಘಿಸಿ ಆದೇಶಗಳಿಗೆ ಬೆಲೆ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆ” ಎಂದು ಖಂಡಿಸಿದರು.

“ಕಾಳ ಸಂತೆಯಲ್ಲಿ ಶಿಕ್ಷಣ ಮಾರಾಟವಾಗುತ್ತಿದೆ. ಜಿಲ್ಲೆಯಾದ್ಯಂತ ನಾಯಿ ಕೊಡೆಗಳಂತೆ ಖಾಸಗಿ ಶಾಲೆಗಳು, ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಿವೆ. ಒಂದೆಡೆ ರಾಜ್ಯದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೋನೆಷನ್ ಮನಬಂದತೆ ಪ್ರಾರಂಭವಾಗಿದೆ. ಬಡ ಹಿಂದುಳಿದ ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೋನೆಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ತುಂಬಾ ದುರದರಷ್ಟಕರವಾಗಿದೆ” ಎಂದರು.

“ಶಿಕ್ಷಣ ಹಕ್ಕು ಕಾಯ್ದೆ 1983 ಮತ್ತು 2009ರ ಆರ್.ಟಿಇ ಕಾಯ್ದೆ ಜಾರಿಯಾದರೂ ಜಿಲ್ಲೆಯಲ್ಲಿ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಆರ್.ಟಿ.ಇ ಸೀಟು ಮಧ್ಯವರ್ತಿಗಳ ಪಾಲಾಗುತ್ತಿವೆ. ಜಿಲ್ಲೆಯ ಬಹುತೇಕ ಖಾಸಗಿ ಶಾಲೆಗಳಲ್ಲಿ 30 ರಿಂದ 1 ಲಕ್ಷ ರೂ ವರೆಗೂ ಡೊನೇಷನ್ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಅಕ್ರಮವಾಗಿ ಟ್ಯುಷನ್, ಟ್ಯೂಟರಿಯಲ್, ಅನದೀಕೃತವಾಗಿ ICSC,CBSC ಹೆಸರಿನಲ್ಲಿ ಶಾಲೆಗಳು ನಡೆಯುತ್ತೀವೆ ಸಮ್ಮರ ಕ್ಯಾಂಪ್ (ಬೇಸಿಗೆ ತರಬೇತಿ ಕೇಂದ್ರ) ಗಳ” ಇತ್ಯಾದಿ ಹೆಸರುಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿ ಸರಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಗಲೂ ದರೋಡೆ ಮಾಡುತ್ತಿದ್ದು ಸಂಬಂಧಿಸಿದ ಅಧಿಕಾರಿಗಳು ಮೌನ ವಹಿಸಿರುವುದೇಕೆ?” ಎಂದು ಪ್ರಶ್ನಿಸಿದರು.

ಸರಕಾರ ನಿಯಮಗಳ ಪ್ರಕಾರ ಸರ್ಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು 500 ರೂ. ಅನುದಾನರಹಿತ ಶಿಕ್ಷಣ ಸಂಸ್ಥೆಗಳು ರೂ.600 ಗಳನ್ನು ಮಾತ್ರ ಅಭಿವೃದ್ಧಿ ಶುಲ್ಕವನ್ನು ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ, ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ. ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾರಂಭಿಕ ತರಗತಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸಬಾರದು ಎಂದು ಶಿಕ್ಷಣ ಹಕ್ಕು ಕಾಯ್ದೆ 2009 ರ ಸೆಕ್ಷನ್ 13(2)(ಬಿ) ಹೇಳುತ್ತದೆ” ಎಂದರು.

“ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ 25 ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ. ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ 10×6 ಸೈಜಿನಲ್ಲಿ ಫ್ಲೆಕ್ಸ್ ಪ್ರಕಟಿಸಬೇಕೆಂದು ಹಾಗೂ ಇದೇ ಮಾಹಿತಿಯನ್ನು ಇಲಾಖೆಯ ವೆಬ್ ಸೈಟ್‌ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ ಆದರೆ ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ” ಎಂದು ಆರೋಪಿಸಿದರು.

“ಕೂಡಲೇ ಈ ರೀತಿ ವರ್ತಿಸುವ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ಮುಚ್ಚಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮತ್ತು ಈ ಕೂಡಲೇ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆ ಸೇರಲು ಎಸ್.ಎಫ್.ಐ ಗಜೇಂದ್ರಗಡ ತಾಲೂಕು ಸಮಿತಿಯು ತಿಳಿಸುತ್ತದೆ” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರಾದ ಚಂದ್ರು ರಾಠೋಡ, ಶೀವಾಲಲ್ ನಾಯಕ, ಎಸ್ ಎಫ್ ಐ ತಾಲೂಕು ಅಧ್ಯಕ್ಷರು ಅನಿಲ್ ಆರ್, ಶರಣಪ್ಪ ಮಾಟರಂಗಿ, ಕವಿತಾ ಹೊಸಮನಿ, ಗುರುಕಿರಣ್, ಶೀವರಾಜ, ಗಣೇಶ, ಪ್ರಸನ್ನ ಮೂರ್ತಿ, ಪ್ರೇಮಕುಮಾರ, ರೇವಣ್ಣ, ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...