ಗದಗ | ಎಸ್ಐಆರ್; ಬಿಎಲ್‌ಒಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಿ: ಇಓ ಚಂದ್ರಶೇಖರ. ಬಿ. ಕಂದಕೂರ

Date:

“ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಪ್ರಕ್ರಿಯೆಯಾಗಿದ್ದು, ಸಾರ್ವಜನಿಕರು ಮನೆ-ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿ ಸಂಪೂರ್ಣ ಸಹಕಾರ ನೀಡಬೇಕು” ಎಂದು ರೋಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಹೇಳಿದರು.

- Advertisement -

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ತಹಸೀಲ್ದಾರ ಹಾಗೂ ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್‌ಐಆರ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

“ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಸೇರ್ಪಡೆಯಾಗುವುದು ಮತ್ತು ಅನರ್ಹ ಹೆಸರುಗಳನ್ನು ತೆಗೆದುಹಾಕುವುದು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಗೆ ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದರು.

“ಭಾರತ ಚುನಾವಣಾ ಆಯೋಗವು ಜುಲೈ 1ರಿಂದ 29 ರವರೆಗೆ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೊಂಡಿದ್ದು, ಈ ಅವಧಿಯಲ್ಲಿ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಸಾರ್ವಜನಿಕರು ಯಾವುದೇ ಅನುಮಾನ ಅಥವಾ ನಿರ್ಲಕ್ಷ್ಯ ತೋರದೆ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಒದಗಿಸಬೇಕು. ಹಿಂದಿನ ಮತದಾರರ ಪಟ್ಟಿಯ ಆಧಾರದ ಮೇಲೆ ಎನ್ಯೂಮರೇಶನ್ ಫಾರ್ಮ್ ಭರ್ತಿ ಮಾಡಿ, ಚುನಾವಣಾ ಆಯೋಗ ಸೂಚಿಸಿರುವ ದಾಖಲೆಗಳನ್ನು ಲಗತ್ತಿಸಿ ಬಿಎಲ್‌ಒಗಳಿಗೆ ಸಲ್ಲಿಸಬೇಕು” ಎಂದು ಹೇಳಿದರು.

ರೋಣ ತಾಲೂಕಿನ ತಸಿಲ್ಧಾರರು ನಾಗರಾಜ ಮಾತನಾಡಿ, “ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿರುವರು. ಸಾರ್ವಜನಿಕರು ಅವರಿಗೆ ಅಗತ್ಯ ಸಹಕಾರ ನೀಡಬೇಕು. ಚುನಾವಣಾ ಆಯೋಗದ ಈ ಮಹತ್ವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಗ್ರಾಮಸ್ಥರು ಸಕ್ರಿಯವಾಗಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಎನ್ಯೂಮರೇಶನ್ ಫಾರ್ಮ್ ಭರ್ತಿ ಮಾಡುವ ವಿಧಾನ, ಅಗತ್ಯ ದಾಖಲೆಗಳು, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳು ವಿವರಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಬೂತ್ ಮಟ್ಟದ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...