ಗದಗ | ಬಿತ್ತನೆ ಬೀಜ-ಗೊಬ್ಬರ ಸರಿಯಾಗಿ ಪೂರೈಕೆಯಾಗುತ್ತಿಲ್ಲ; ಸಂಗಣ್ಣ ಪವಾಡಶೆಟ್ಟಿ ಆರೋಪ

Date:

“ಬಿತ್ತನೆ ಬೀಜ, ರಸಗೊಬ್ಬರ ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡುವ ಭರವಸೆ ಹುಸಿಯಾಗಿದೆ. ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾದರೂ ಅನೇಕ ಸಮಸ್ಯೆಗಳಿಂದಾಗಿ ಬಿತ್ತನೆ ಪ್ರಮಾಣ ಕುಂಠಿತವಾಗಿದೆ”  ಎಂದು ರೈತ ಮುಖಂಡ ಸಂಗಣ್ಣ ಪವಾಡಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಗದಗ ಜಿಲ್ಲೆಯ ರೋಣ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಸೋಮವಾರ ಡಿಸೇಲ್ ಅಭಾವ, ಬೀಜ-ಗೊಬ್ಬರ ಸರಿಯಾಗಿ ಪೂರೈಕೆ ಆಗುವಂತೆ ಪ್ರತಿಭಟಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಕರ್ನಾಟಕ ರಾಜ್ಯ ರೈತ ಸಂಘ ತಾಲ್ಲೂಕು ಘಟಕ ಅಧ್ಯಕ್ಷ ಶಿವಲಿಂಗಪ್ಪ ಬೋಪಳಾಪುರ ಮಾತನಾಡಿ, “ರೋಣ ತಾಲ್ಲೂಕಿನಾದ್ಯಂತ ಡೀಸೆಲ್ ಅಭಾವ ಹೆಚ್ಚಾಗುತ್ತಿದ್ದು, ರೈತರ ಬಿತ್ತನೆ ಪ್ರಕ್ರಿಯೆಗೆ ತೀವ್ರ ತೊಂದರೆಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

“ರೈತರಿಗೆ ಕ್ಯಾನ್‌ಗಳಲ್ಲಿ ಡೀಸೆಲ್ ಹಾಕದಂತೆ ಸೂಚಿಸಲಾಗಿದ್ದು, ಇದರಿಂದ ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಹೊರೆಯಾಗಲಿದೆ. ಅಧಿಕಾರಿಗಳು ಮನಬಂದಂತೆ ಆದೇಶ ಹೊರಡಿಸುವುದನ್ನು ಬಿಟ್ಟು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು” ಎಂದರು.

ಈ ವೇಳೆ ರೈತ ಮುಖಂಡರು ಸಂಗಣ್ಣ ದಂಡಿನ, ಮೇಘರಾಜ ಬಾವಿ, ಬಸವರಾಜ ಹೊಸಮನಿ, ಶಾಂತವೀರಯ್ಯ ಬೆನಹಾಳ, ಅಂದಪ್ಪ ಕಡಿಯವರ, ಬಸನಗೌಡ ಚನ್ನಪ್ಪಗೌಡ್ರ, ಶರಣಪ್ಪ ಚನ್ನಪ್ಪಗೌಡ್ರ, ಮಂಜುನಾಥ ಮುಗಳಿ, ಕಾವ್ಯ ಸೋಮನಕಟ್ಟಿ, ಮಲ್ಲಪ್ಪ ಯಂಡಿಗೇರಿ, ಮೈಲಾರಪ್ಪ ಚವಡಿ, ಕಳಕಪ್ಪ ನೀರಲೋಟಿ, ಶಂಕರಪ್ಪ ಗೋಸಾವಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...