ಗದಗ | ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಅವಕಾಶ ತಲುಪಿಸಲು ಅಗಸ್ಟ 15 ರಿಂದ ವಿಶೇಷ ಅಭಿಯಾನ

Date:

“ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–G RAM G ಯೋಜನೆಯಡಿ ರೋಣ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಅಗಸ್ಟ 15 ರಿಂದ ಹಮ್ಮಿಕೊಳ್ಳಲಾಗುತ್ತಿದೆ” ಎಂದು ರೋಣ ಹಾಗೂ ಗಜೇಂದ್ರಗಡ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಹೇಳಿದರು.

- Advertisement -

ಗದಗ ಜಿಲ್ಲೆಯ ಪಟ್ಟಣದ ತಾಲೂಕ ಪಂಚಾಯತ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು “ಆಗಸ್ಟ್ 15ರಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸುವ ಹಿನ್ನೆಲೆಯಲ್ಲಿ ರೋಣ ಹಾಗೂ ಗಜೇಂದ್ರಗಡ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿಯೂ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಾನವ ದಿನಗಳ ಸೃಷ್ಟಿಗೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶ ಹೊಂದಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರಿಶೀಲಿಸುವುದು, ಅಗತ್ಯವಿರುವವರಿಗೆ ಹೊಸ ಜಾಬ್ ಕಾರ್ಡ್ ಮಾಡಿಸಿಕೊಡುವುದು, ಜಾಬ್ ಕಾರ್ಡ್ ನವೀಕರಣ ಹಾಗೂ e-KYC ಪ್ರಕ್ರಿಯೆ ಪೂರ್ಣಗೊಳಿಸುವುದು ಸೇರಿದಂತೆ ಉದ್ಯೋಗದ ಬೇಡಿಕೆಯನ್ನು ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆಯನ್ನು ಗ್ರಾಮ ಪಂಚಾಯತಿ ಯಲ್ಲಿ ಮಾಡಲಾಗುತ್ತಿದೆ” ಎಂದರು.

“ಇದರ ಜೊತೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ-ಮನೆ ಭೇಟಿ ಮೂಲಕ ಸಾರ್ವಜನಿಕರಿಗೆ ಯೋಜನೆಯ ಕುರಿತು ಮಾಹಿತಿ ನೀಡುವುದು, ಗ್ರಾಮ ಮಟ್ಟದಲ್ಲಿ ಸಭೆಗಳನ್ನು ನಡೆಸುವುದು, ಪೋಸ್ಟರ್ ಹಾಗೂ ಬ್ಯಾನರ್‌ಗಳ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜಾಬ್ ಕಾರ್ಡ್ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲು ಸೂಚಿಸಲಾಗಿದೆ. ಗ್ರಾಮೀಣ ಜನರು ಯೋಜನೆಯ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ” ಎಂದರು.

“ಕಾರ್ಮಿಕರ ಹಾಜರಾತಿ, ಕಾಮಗಾರಿಗಳ ಪ್ರಗತಿ ಹಾಗೂ ಸಂಬಂಧಿತ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ನಿರ್ವಹಿಸುವುದಕ್ಕೂ ಒತ್ತು ನೀಡಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬಂಧಿತ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ ಅರ್ಹ ಕುಟುಂಬಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

“ಉದ್ಯೋಗದ ಅವಕಾಶವನ್ನು ಅರ್ಹ ಕುಟುಂಬಗಳ ಮನೆಬಾಗಿಲಿಗೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಜಾಬ್ ಕಾರ್ಡ್, e-KYC ಹಾಗೂ ಉದ್ಯೋಗದ ಬೇಡಿಕೆ ಸಲ್ಲಿಕೆ ಸೇರಿದಂತೆ ಯಾವುದೇ ಮಾಹಿತಿ ಅಗತ್ಯವಿದ್ದರೂ ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ಜನರ ಸಹಕಾರ ಅತ್ಯಂತ ಮುಖ್ಯ” ಎಂದು ತಿಳಿಸಿದರು

“ಜನರು ಜಾಬ್ ಕಾರ್ಡ್ ಮೇಳದ ಸದುಪಯೋಗ ಪಡೆದುಕೊಂಡು ಉದ್ಯೋಗದ ಬೇಡಿಕೆಯನ್ನು ಸಲ್ಲಿಸಿ, ಗ್ರಾಮೀಣ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಹಾಗೂ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಮಾಡುವಂತೆ ಜನರಿಗೆ ಈ ಮ‌ೂಲಕ ಮನವಿ ಮಾಡಿಕೊಳ್ಳುತ್ತೇನೆ” ಎಂದು ಚಂದ್ರಶೇಖರ ಬಿ. ಕಂದಕೂರ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...