“ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರು ಯುಜಿಸಿ ನಿಯಮಗಳಿಗೆ ಅನ್ವಯವಾಗದ ಹಿನ್ನೆಲೆಯಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆಯಿಂದ ವಂಚಿತರಾಗಿದ್ದರೆ” ಎಂದು ರಾಜ್ಯಾಧ್ಯಕ್ಷ ಡಾ. ಹನುಮಂತಗೌಡ ಆರ್ ಕಲ್ಮನಿರವರು ಹೇಳಿದರು.
ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನಮಂತಗೌಡ ಕಲ್ಮಣಿ ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ್ ಅವರನ್ನು ಭೇಟಿ ಮಾಡಿ ಮಾತನಾಡಿದರು.
“ಈ ಅಸಮಂಜಸವಾದ ಆದೇಶವನ್ನು ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟ ಮಾಡಿದಾಗ ಅಂದಿನ ಕಾನೂನು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ ಪಾಟೀಲರವರ ನೇತೃತ್ವದಲ್ಲಿ ಮಾಜಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್‌ರವರು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು. ಹಿರಿಯ ಶಿಕ್ಷಣ ತಜ್ಞರಾದ ಡಾ. ಆರ್.ಎಂ. ಕುಬೇರಪ್ಪನವರು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಶೈಕ್ಷಣಿಕ ಸಂಯೋಜಕರ ಹುದ್ದೆಗಳನ್ನು ಸೃಷ್ಟಿಸಿ ಆದೇಶ ಹೊರಡಿಸಿತ್ತು” ಎಂದರು.
“ಎಚ್. ಕೆ. ಪಾಟೀಲ್‌ರವರು ಬರುವ ದಿನಗಳಲ್ಲಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ತಮಗೆ ಸೇವಾ ಭದ್ರತೆ ನೀಡುವ ಕುರಿತು ಭರವಸೆ ನೀಡಿದ್ದಾರೆ” ಎಂದು ಹೇಳಿದರು.





