ಗದಗ | ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

Date:

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜುಲೈ 30 ರಿಂದ ಅಗಸ್ಟ್ 1 ರವರೆಗೆ ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

- Advertisement -

ಜುಲೈ 30 ರಂದು ಸಂಜೆ 6 ಗಂಟಗೆ ಬಾಗಲಕೋಟೆಯಿಂದ ಡಿವಿ ವಾಹನದ ಮೂಲಕ ಹೊರಟು 8.30 ಗಂಟೆಗೆ ಗದಗ ಜಿಲ್ಲೆಗೆ ಆಗಮಿಸಿ ವಾಸ್ತವ್ಯ ಮಾಡುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಜುಲೈ 31 ರಂದು ಬೆಳಿಗ್ಗೆ 9 ಗಂಟೆಗೆ ಡಿವಿ ವಾಹನದ ಮೂಲಕ ಹೊರಟು 9.15 ಗಂಟೆಗೆ ಗದಗ ನಗರದಲ್ಲಿ ಇರುವ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡುವರು. ಬೆಳಿಗ್ಗೆ 10.15 ಗಂಟೆಗೆ ನವನಗರದಲ್ಲಿರುವ ಮಹಿಳಾಪೊಲೀಸ್ ಠಾಣೆಗೆ ಭೇಟಿ ನೀಡುವರು. 11 ಗಂಟೆಗೆ ಗದಗ ಜಿಲ್ಲಾ ಆಡಳಿತ ಭವನದಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿರುವ POSH  ಅಧಿನಿಯಮ 2013 ರ ತರಬೇತಿ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸುವರು.

ನಂತರ ಗದಗನಿಂದ ರೋಣಕ್ಕೆ ಆಗಮಿಸಿ ರೋಣ ನಗರದ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿರುವ ಪೂಜ್ಯ ಮಾತೋಶ್ರೀ ಬಸಮ್ಮನವರು ಸಂಗನಗೌಡರು ಪಾಟೀಲ ಇವರ ಎಪ್ಪತ್ತೆರಡನೆಯ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಮಹಿಳಾ ಗೋಷ್ಟಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಭಾಗವಹಿಸುವರು.

ಮಧ್ಯಾಹ್ನ 3 ಗಂಟೆಗೆ ರೋಣ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡುವರು. ನಂತರ ಮಧ್ಯಾಹ್ನ 4.45 ಗಂಟೆಗೆ ಗದಗಗೆ ಆಗಮಿಸಿ ರಾಜೀವ ಗಾಂಧಿ ನಗರದಲ್ಲಿರುವ ಸುಡುಗಾಡು ಸಿದ್ಧ ಸಮುದಾಯದ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ವಾಸ್ತವ್ಯ ಮಾಡುವರು.

ಅಗಸ್ಟ 1 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಿಳಾ ಸಂಘ ಉದ್ಘಾಟನೆ ಮಾಡುವರು ಹಾಗೂ ಗದಗ ನಗರದ ವಿವಿಧ ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಸಂವಾದ ಮತ್ತು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. 

SHW ಜಿಲ್ಲೆಯಲ್ಲಿ ಜಾರಿಯಾದ ಬಗ್ಗೆ ಹಾಗೂ ಪ್ರಕರಣಗಳು ದಾಖಲಾದ ಬಗ್ಗೆ, ಅಂಕಿ ಅಂಶಗಳೊಂದಿಗೆ ಚರ್ಚೆ, ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ಸಮಿತಿ ಬಗ್ಗೆ ಪರಿಶೀಲನೆ, ಮಹಿಳಾ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ, ಮಹಿಳಾ ರಿಸರ್ವೆಶನ್, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ತೆಗೆದುಕೊಂಡ ಕ್ರಮದ ಬಗ್ಗೆ ಚರ್ಚೆ ನಡೆಸುವರು ಎಂದು ರಾಜ್ಯ ಮಹಿಳಾ ಆಯೋಗದ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮೊದಲು ಶಾಸಕರಿಗೆ ಗೌರವ ಕೊಡುವುದನ್ನು ಕಲಿಯಿರಿ: ಹೆಚ್. ಡಿ ರೇವಣ್ಣ 

ಜಿಲ್ಲಾಧಿಕಾರಿ ಲತಾ ಕುಮಾರಿ ಬಗ್ಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಮತ್ತೊಮ್ಮೆ ಕಿಡಿಕಾರಿದ್ದಾರೆ....

ಹಾಸನ | ಕೆನರಾ ಬ್ಯಾಂಕ್ ಶಾಖೆ: ₹2.5 ಕೋಟಿ ಹಣಕಾಸಿನ ವಂಚನೆ ಆರೋಪ

ಅರಸೀಕೆರೆ ತಾಲ್ಲೂಕಿನ ದೊಡ್ಡ ಮೇಟಿಕುರ್ಕೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುಮಾರು...

ಚಿಕ್ಕಮಗಳೂರು | ಯುವಪೀಳಿಗೆ ರಾಮಾಯಣ ಮಹಾಕಾವ್ಯವನ್ನು ಓದಬೇಕು; ಶಾಸಕ ಜಿ.ಎಚ್  ಶ್ರೀನಿವಾಸ್

ತರೀಕೆರೆ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ ಮತ್ತು...

ಚಿಕ್ಕಮಗಳೂರು | ₹266 ಕೋಟಿ ಬೆಳೆವಿಮೆ ರೈತರಿಗೆ ನೀಡಲಾಗಿದೆ; ಜಿ.ಭಂವರ್ ಸಿಂಗ್ ಮೀನಾ

2025-26ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿದ ರೈತರಿಗೆ ₹266 ಕೋಟಿ ವಿಮಾ ಮೊತ್ತ...