ಗದಗ | ರೋಣ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗೆ ಕಟ್ಟುನಿಟ್ಟಿನ ಸೂಚನೆ: ಇಒ ಚಂದ್ರಶೇಖರ ಬಿ. ಕಂದಕೂರ

Date:

“ರಾಜ್ಯದಲ್ಲಿ ತೀವ್ರ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ರೋಣ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ” ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಗದಗ ಜಿಲ್ಲೆಯ ರೋಣ ತಾಲೂಕ ಪಂಚಾಯತಿ ಸಭಾಭವನದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಸಹಾಯಕ ಲೆಕ್ಕಾಧಿಕಾರಿಗಳು, ತಾಲೂಕ ಪಂಚಾಯತ ರೋಣ ಇವರ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ವಾಟರ್‌ಮೆನ್‌ಗಳು, ನರೇಗಾ ಸಿಬ್ಬಂದಿಗಳು ಹಾಗೂ ತಾಲೂಕ ಪಂಚಾಯತಿ ಸಿಬ್ಬಂದಿಗಳೊಂದಿಗೆ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸಭೆಯಲ್ಲಿ ಮಾತನಾಡಿದ ಕಾರ್ಯ ನಿರ್ವಾಹಕ ಅಧಿಕಾರಿಗಳು, “ಬೇಸಿಗೆ ಸಂದರ್ಭದಲ್ಲಿ ನಮ್ಮ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು” ಎಂದು ತಿಳಿಸಿದರು.

“ಡಿಬಿಓಟಿ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಪಿಡಿಒಗಳು ನಿರಂತರ ನಿಗಾ ವಹಿಸಬೇಕು. ಪ್ರತಿದಿನ ಮುಂಜಾನೆ ಹಾಗೂ ಸಂಜೆ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಸರಬರಾಜು ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಬೇಕು. ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಂದ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು” ಎಂದು ಸೂಚಿಸಿದರು.

“ಕೆಲವು ಗ್ರಾಮಗಳಲ್ಲಿ ಬೋರ್‌ವೆಲ್‌ಗಳ ನೀರಿನ ಮಟ್ಟ ಕುಸಿತ, ಮೋಟಾರ್ ದೋಷ, ವಿದ್ಯುತ್ ಸಮಸ್ಯೆ ಹಾಗೂ ಪೈಪ್‌ಲೈನ್ ದುರಸ್ತಿ ಸಮಸ್ಯೆಗಳಿಂದ ಕುಡಿಯುವ ನೀರಿನ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ತ್ವರಿತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು. ನೀರು ಸರಬರಾಜಿನಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕಾರ್ಯಕ್ಕೆ ವೇಗ ನೀಡಬೇಕು ಎಂದು ಅಧಿಕಾರಿಗಳು ಸೂಚಿಸಿದರು. ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಳ್ಳುವ ಜೊತೆಗೆ ಯೋಜನೆಯ ಲಾಭ ಪ್ರತಿಯೊಂದು ಮನೆಗೂ ತಲುಪುವಂತೆ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.

ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ಉದ್ಯೋಗ ಸೃಷ್ಟಿ, ಕೆರೆ ಅಭಿವೃದ್ಧಿ, ನೀರು ಸಂರಕ್ಷಣೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯತಿಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರ ಸಮಸ್ಯೆಗೆ ತ್ವರಿತ ಸ್ಪಂದನೆ ನೀಡಬೇಕು ಎಂದು ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ವಿವಿಧ ಗ್ರಾಮ ಪಂಚಾಯತಿಗಳ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...