ಗದಗ | ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿ SSLC ಪರೀಕ್ಷೆಯಲ್ಲಿ ಶೇ 73 ರಷ್ಟು ಫಲಿತಾಂಶ

Date:

SSLC ಪರೀಕ್ಷೆಯನ್ನು ತ್ಯಜಿಸಿ ತನ್ನ ತಾಯಿಯ ಜೊತೆ ದ್ರಾಕ್ಷಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಪಲ್ಲವಿ ಹಳ್ಳಿಕೇರಿ ಶೇ.73.28 ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.

- Advertisement -

ಗದಗ ಜಿಲ್ಲೆಯ ಬರದೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದ ಪಲ್ಲವಿ ಹಳ್ಳಿಕೇರಿ ಮನೆಯಲ್ಲಿ ಅತೀವ ಬಡತನವಿತ್ತು. ಜೊತೆಗೆ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದರು. ಹಾಗಾಗಿ ತಂದೆಯ ಔಷಧಿಯ ಖರ್ಚಿಗಾಗಿ ಹಣದ ಅವಶ್ಯಕತೆ ಇದ್ದ ಕಾರಣ, ಎಸ್.ಎಸ್.ಎಲ್.ಸಿ ಪರೀಕ್ಷೆ ಬಿಟ್ಟು ಪಲ್ಲವಿ ತನ್ನ ತಾಯಿ ಜೊತೆಗೆ ದ್ರಾಕ್ಷಿ ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪರೀಕ್ಷೆಯ ದಿನ ಪಲ್ಲವಿ ಗೈರು ಹಾಜರಾಗಿರುವುದನ್ನು ಕಂಡ ಮುಂಡರಗಿ ಬಿಇಓ ಅಧಿಕಾರಿ ಗಂಗಾಧರ ಅಣ್ಣಿಗೇರಿ ತಕ್ಷಣ ಆಕೆಯ ಹುಡುಕಾಟ ನಡೆಸಿದಾಗ ದ್ರಾಕ್ಷಿ ತೋಟದಲ್ಲಿ ಕೂಲಿ ಮಾಡುತ್ತಿರುವುದು ಕಂಡು ಬಂತು. ಇದೇ ವೇಳೆ ಕೂಡಲೇ ತೋಟಕ್ಕೆ ಧಾವಿಸಿದ ಬಿಇಓ ವಿದ್ಯಾರ್ಥಿನಿಯ ಮನವೊಲಿಸಿ, ಆಕೆಯನ್ನು ತಮ್ಮ ವಾಹನದಲ್ಲೇ ಪರೀಕ್ಷಾ ಕೇಂದ್ರಕ್ಕೆ ಕರೆತಂದು ಪರೀಕ್ಷೆ ಬರೆಸಿದ್ದರು.


ಇಂದು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪಲ್ಲವಿ ಹಳ್ಳಿಕೇರಿ 625ಕ್ಕೆ 458 ಅಂಕ (ಶೇ.73.28)ಗಳನ್ನು ಪಡೆಯುವ ಮೂಲಕ ಎಲ್ಲರನ್ನು ಅಚ್ಚರಿಪಡಿಸಿದ್ದಾಳೆ. 


ಪಲ್ಲವಿಯ ಈ ಸಾಧನೆಯನ್ನು ಗುರುತಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘವು ಆಕೆಯನ್ನು ಗೌರವಿಸಿದೆ. ಕಷ್ಟದ ಕಾಲದಲ್ಲಿ ಕೈಹಿಡಿದ ಬಿಇಓ ಗಂಗಾಧರ ಅಣ್ಣಿಗೇರಿ ಅವರಿಗೆ ಪಲ್ಲವಿ ಹಾಗೂ ಆಕೆಯ ಕುಟುಂಬ ಕೃತಜ್ಞತೆ ಸಲ್ಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಚುರುಕು, ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ

ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...