ಗದಗ | ಭಾರತೀಯರಲ್ಲಿ ಸ್ವಾಭಿಮಾನ ಮೂಡಿಸಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದ: ಸಚಿವ ಎಚ್ ಕೆ ಪಾಟೀಲ್

Date:

“ಸ್ವಾಮಿ ವಿವೇಕಾನಂದರ ತತ್ವ ಸಂದೇಶಗಳು ಸಾರ್ವಕಾಲಿಕ. ಅವರ ತತ್ವ ಸಿದ್ಧಾಂತಗಳನ್ನು ಪ್ರಸ್ತುತ ಯುವಕರು ಇನ್ನೂ ಹೆಚ್ಚೆಚ್ಚು ಅರಿತುಕೊಳ್ಳಬೇಕು ಎಂದು ರಾಜ್ಯದ ಕಾನೂನು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್ ತಿಳಿಸಿದರು.

- Advertisement -

ಗದಗ ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಶುಕ್ರವಾರದಂದು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸಂಘಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಶಾಲಾ ಮಕ್ಕಳಿಗೆ ಸ್ವಾಮಿ ವಿವೇಕಾನಂದರ ಆದರ್ಶ ಗುಣಗಳನ್ನು ತಿಳಿಸುವ ಕೆಲಸವಾಗಬೇಕು. ಸಮಾಜದ ಬಗ್ಗೆ ಚಿಂತನೆ ಮಾಡುವುದರ ಜತೆಗೆ ವಿವೇಕಾನಂದರ ಗುಣಗಳಾದ ದೇಶದ ರಕ್ಷಣೆ, ಸಹನೆ, ಔದಾರ್ಯ, ತಾಳ್ಮೆ ಇವುಗಳನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕು. ವಿವೇಕಾನಂದರು ವಿದೇಶದಲ್ಲಿಯೂ ಕೂಡ ನಮ್ಮ ದೇಶದ ಸಂಸ್ಕೃತಿಯ ಕೀರ್ತಿ ಪತಾಕೆ ಹಾರಿಸಿದ ಮಹಾನುಭವರು” ಎಂದು ಸ್ಮರಿಸಿದರು.

“ಚಿಕಾಗೋ ಧರ್ಮ ಸಮ್ಮೇಳನದಲ್ಲಿಯ ಅವರ ಭಾಷಣವು ವಿದೇಶಿಗರಲ್ಲಿ ಭಾತೃತ್ವ ಭಾವನೆ ಮೂಡಿಸಿತು. ವಿವೇಕಾನಂದರು ಹೇಳಿದಂತೆ ಯುವಕರು ತಮ್ಮ ಏಳಿಗೆಗೆ ತಾವೇ ಶಿಲ್ಪಿಗಳಾಗಿರುತ್ತಾರೆ. ಗದಗ ಜಿಲ್ಲೆಯು ವಿವೇಕಾನಂದರ ಸಂದೇಶಗಳನ್ನು ವಿಶ್ವಕ್ಕೆ ಬಿತ್ತರಿಸುವ ಕೇಂದ್ರವಾಗಿ ಕೆಲಸ ಮಾಡುತ್ತಿದೆ. ʼಶಕ್ತಿಯೇ ಜೀವನ, ದೌರ್ಬಲ್ಯವೇ ಮರಣʼ ಎಂದು ಸ್ವಾಮಿ ವಿವೇಕಾನಂದರು ಹೇಳಿದಂತೆ ಇಂದಿನ ಯುವಕರು ಖಿನ್ನತೆಗೊಳಗಾಗದೆ, ಸಮಯ ವ್ಯರ್ಥ ಮಾಡದೆ ತಮ್ಮ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ಮಾಡಬೇಕು” ಎಂದು ಸಚಿವ ಡಾ ಎಚ್ ಕೆ ಪಾಟೀಲ್ ಅವರು ಸಲಹೆ ನೀಡಿದರು.

ಕೆವಿಎರ್‌ಆರ್‌ ಪಪೂ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಅನಿಲ್ ವೈದ್ಯ ಮಾತನಾಡಿ‌, “ವಿವೇಕಾನಂದರ ಆದರ್ಶಗಳ ಮೂಲಕ ಸಾಕ್ಷಾತ್ಕಾರ ಮಾಡಿಕೊಳ್ಳಬೇಕು. ಇಂದಿನ ಯುವಜನರು ಜ್ಞಾನಾರ್ಜನೆ ಮಾಡಿ ಸಹನೆಯಿಂದ ಕೆಲಸ ನಿರ್ವಹಿಸಿದರೆ ಗುರಿ ಮುಟ್ಟಲು ಸಾಧ್ಯ. ಭವ್ಯ ಭಾರತ ಕಟ್ಟುವಲ್ಲಿ ವಿದ್ಯಾರ್ಥಿಗಳು ವಿವೇಕಾನಂದರ ಸಂದೇಶಗಳನ್ನು ಪಾಲಿಸಬೇಕು. ನಮ್ಮ ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿದ ಸ್ವಾಮಿ ವಿವೇಕಾನಂದರು ʼಯಾವುದೇ ವ್ಯಕ್ತಿಯೂ ತನ್ನ ಆತ್ಮ ಗೌರವವನ್ನು ಕಳೆದುಕೊಳ್ಳಬಾರದು ಹಾಗೂ ಯಾರ ಆತ್ಮ ಗೌರವವನ್ನು ಕಳೆಯುವ ಕೆಲಸ ಮಾಡಬಾರದುʼ ಎಂದು ಸಂದೇಶ ನೀಡಿದ್ದಾರೆ” ಎಂದು ವಿವರಿಸಿದರು.

ರಾಮಕೃಷ್ಣ–ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಮಾತನಾಡಿ, “ಯುವಶಕ್ತಿ ದೇಶದ ಸಂಪತ್ತಾಗಿದೆ. ಯುವಜನರು ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳವುದರ ಜತೆಗೆ ದೇಶಪ್ರೇಮ ಹೊಂದಿದವರಾಗಿರಬೇಕು. ದೇಶದ ಸುಧಾರಣೆಗೆ ಶ್ರೇಷ್ಠ ಶಿಕ್ಷಕರು ಅಗತ್ಯ. ಶಿಕ್ಷಣ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಿದರೆ ಮಾತ್ರ ದೇಶದ ಸುಧಾರಣೆ ಸಾಧ್ಯವಾಗುತ್ತದೆ. ಅಜ್ಞಾನದ ಅಂಧಕಾರವನ್ನು ತೊಲಗಿಸಿ ಜ್ಞಾನದ ಬೆಳಕಿನ ಕಡೆಗೆ ದಾರಿ ತೋರುವವನೇ ಗುರುವಾಗಿರುತ್ತಾನೆ” ಎಂದರು.

“ಪ್ರಸ್ತುತ ತಾಯಂದಿರು ತಮ್ಮ ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸಬೇಕು. ದೇಶದ ಪ್ರಜೆಗಳಲ್ಲಿ ಪ್ರಜ್ಞಾವಂತಿಕೆಯಿರುವುದು ಮುಖ್ಯವಾಗಿದೆ. ಇಂದಿನ ಯುವಕರು ನಿಸ್ವಾರ್ಥಿಗಳಾಗಿ ಸಮಾಜ ಸೇವೆಗೆ ತೊಡಗಬೇಕು. ವಿವೇಕಾನಂದರ ಸಂದೇಶಗಳು ಯುವಜನರಿಗೆ ಸೇರಿದಂತೆ ಪ್ರತಿಯೊಬ್ಬರಿಗೂ ಅನುಕರಣೀಯವಾಗಿವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ವಿದ್ಯುತ್ ಬಳಕೆದಾರರು ಗ್ರಾಹಕ ಸುರಕ್ಷಾ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು: ಎಂ.ಎಂ ನದಾಫ್

ಇದೇ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಪ್ರಬಂಧ, ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಹುಲಕೋಟಿ-ಗದಗದ ರಾಮಕೃಷ್ಣ ವಿವೇಕಾನಂದ ಸೇವಾ ಪ್ರತಿಷ್ಟಾನದ ಅಧ್ಯಕ್ಷ ಬ್ರಹ್ಮಚಾರಿ ಅದ್ವೈತ ಚೈತನ್ಯ(ಪುನೀತ್ ಮಹಾರಾಜ್), ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಮಾಜಿ ಶಾಸಕ ಡಿ ಆರ್ ಪಾಟೀಲ್, ಗಣ್ಯರುಗಳಾದ ಗುರಣ್ಣಾ ಬಳಗಾನೂರ, ಬಸವರಾಜ ಕಟ್ಟಿಮನಿ, ಬಿ ಬಿ ಅಸೂಟಿ, ಪ್ರಭು ಬುರಬುರೆ, ಪೀರಸಾಬ ಕೌತಾಳ, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...