ಗದಗ | ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್

Date:

“ಜಿಲ್ಲೆಯಲ್ಲಿ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಬೆಳೆಗಳ ರಕ್ಷಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ಸೂಚಿಸಿದರು.

- Advertisement -

ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನವೆಂಬರ್ 19 ಗುರುವಾರ ರಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ಒಕ್ಕಲಿಗ ರಾಜಕಾರಣದ ಅಸ್ಮಿತೆ: ಪಾರಂಪರಿಕ ಪ್ರಾಬಲ್ಯ ಮತ್ತು ಹೊಸ...

ರಾಜ್ಯದ ಒಕ್ಕಲಿಗ ರಾಜಕಾರಣವು ಇಂದು ಒಂದು ಮಹತ್ವದ ತಿರುವಿನಲ್ಲಿದೆ. ಒಂದು ಕಡೆ ದಶಕಗಳ ಅನುಭವ, ಭಾವನಾತ್ಮಕ ಬಾಂಧವ್ಯ ಮತ್ತು ಪಾರಂಪರಿಕ ಮತಬ್ಯಾಂಕ್ ಹೊಂದಿರುವ ದೇವೇಗೌಡರ ಕುಟುಂಬವಿದ್ದರೆ, ಇನ್ನೊಂದು ಕಡೆ ಆಕ್ರಮಣಕಾರಿ ರಾಜಕೀಯ ತಂತ್ರಗಾರಿಕೆ,...

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: ಬುಡಮೇಲಾಗುತ್ತಿದೆಯೇ ಪಂಚಾಯತ್ ರಾಜ್...

ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯಬೇಕು ಎಂಬುದು ಸಂವಿಧಾನದ ಆಶಯ. ಆದರೆ ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ವಿಳಂಬ ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆಯೇ...

ಸಭೆಯಲ್ಲಿ ಜಿಲ್ಲೆಯ ಮಳೆ ಪ್ರಮಾಣ, ಮಳೆ ಕೊರತೆ, ಅಂತರ್ಜಲ ಮಟ್ಟ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಕೃಷಿ ಚಟುವಟಿಕೆಗಳು ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಬರ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯಿರುವ ಗ್ರಾಮಗಳು ಹಾಗೂ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ, ಪರ್ಯಾಯ ನೀರಿನ ಮೂಲಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಕೆರೆಗಳು ಹಾಗೂ ಕುಡಿಯುವ ನೀರಿನ ಮೂಲಗಳನ್ನು ಗುರುತಿಸಿ, ಅವುಗಳಲ್ಲಿನ ಹೂಳು ತೆಗೆಯುವುದು, ಸ್ವಚ್ಛಗೊಳಿಸುವುದು ಹಾಗೂ ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಂಡು ನೀರಿನ ಸಂಗ್ರಹ ಮತ್ತು ಲಭ್ಯತೆ ಹೆಚ್ಚಿಸಲು ಕ್ರಮವಹಿಸಬೇಕು” ಎಂದರು.

“ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಮೂಲಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ದುರಸ್ತಿಯಲ್ಲಿರುವ ಕೊಳವೆಬಾವಿ, ಕೈಪಂಪ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತ್ವರಿತವಾಗಿ ದುರಸ್ತಿಗೊಳಿಸಬೇಕು. ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮವಹಿಸಬೇಕು. ಅಲ್ಲದೆ, ನೀರಿನ ಮಿತವ್ಯಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು” ಎಂದು  ಸೂಚಿಸಿದರು.

“ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವು ಸರಾಸರಿ 5 ಮೀಟರ್‌ಗಳಷ್ಟು ಕುಸಿತ ಕಂಡಿರುವುದು ಆತಂಕಕಾರಿ ಸಂಗತಿಯಾಗಿದೆ. ವಿಶೇಷವಾಗಿ ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕುಗಳ ಕೆಲವು ಭಾಗಗಳಲ್ಲಿ ಅಂತರ್ಜಲ ಮಟ್ಟದಲ್ಲಿ ಹೆಚ್ಚಿನ ಪ್ರಮಾಣದ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ವೃದ್ಧಿಗೆ ಜಿಲ್ಲೆಯ ಪ್ರಮುಖ ಕೆರೆಗಳನ್ನು ಗುರುತಿಸಿ ಅವುಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ಭೀಷ್ಮ ಕೆರೆ, ಡಂಬಳ ಹಾಗೂ ಜಂತ್ಲಿ ಶಿರೂರು ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸುವ ಸಾಧ್ಯತೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

“ಕೆರೆಗಳ ಸಂರಕ್ಷಣೆ, ಮಳೆನೀರು ಸಂಗ್ರಹಣೆ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ಪೂರಕವಾದ ಕಾಮಗಾರಿಗಳನ್ನು ಕೈಗೊಳ್ಳಬೇಕು. ಲಭ್ಯವಿರುವ ಜಲಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ ಸೂಕ್ತ ಯೋಜನೆ ರೂಪಿಸಬೇಕು” ಎಂದರು.

“ಬರ ಪರಿಸ್ಥಿತಿಯಿಂದ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ  ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಲಭ್ಯವಿರುವ ಮೇವು ಪ್ರಮಾಣ ಹಾಗೂ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಬೇಡಿಕೆಯ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಅಗತ್ಯವಿರುವ ಕಡೆ ಮೇವು ಬ್ಯಾಂಕ್ ಸ್ಥಾಪನೆಗೆ ಕ್ರಮ ವಹಿಸಬೇಕು. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶುವೈದ್ಯಕೀಯ ಸೇವೆಗಳನ್ನು ಸಮರ್ಪಕವಾಗಿ ಒದಗಿಸಬೇಕು” ಎಂದು ಸೂಚಿಸಿದರು.

ಮಳೆ ಕೊರತೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಪರಿಶೀಲಿಸಬೇಕು. ಬೆಳೆ ಹಾನಿಗೊಳಗಾದ ಪ್ರದೇಶಗಳ ವಿವರಗಳನ್ನು ಸಮಗ್ರವಾಗಿ ಸಂಗ್ರಹಿಸಿ, ಸರ್ಕಾರದ ಮಾರ್ಗಸೂಚಿಗಳನ್ವಯ ಮುಂದಿನ ಕ್ರಮ ಕೈಗೊಳ್ಳಬೇಕು. ರೈತರ FRUITS ತಂತ್ರಾಂಶದ FID ನೋಂದಣಿ ವಿವರಗಳನ್ನು ಪರಿಶೀಲಿಸಿ, ಅರ್ಹ ರೈತರಿಗೆ ಬರ ಪರಿಹಾರ ವಿತರಿಸುವ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಬರ ಪರಿಸ್ಥಿತಿಯಿಂದ ಗ್ರಾಮೀಣ ಪ್ರದೇಶದ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಉದ್ಯೋಗದ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿಬಿ–ಜಿ ರಾಮ್ ಜಿ ಯೋಜನೆಯಡಿ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಅರ್ಹ ಕಾರ್ಮಿಕರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗದ ಬೇಡಿಕೆ ಕುರಿತು ಮಾಹಿತಿ ಸಂಗ್ರಹಿಸಿ, ಅಗತ್ಯ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸುವ ಮೂಲಕ ಗ್ರಾಮೀಣ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು” ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೆಶ್ ಕೆ.ಆರ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮಕ್ಕಳ ಸೃಜನಶೀಲತೆ ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರ ಜವಾಬ್ದಾರಿ: ದಂಡಾಧಿಕಾರಿ ವಿಠಲ್ ಚೌಗಲ್‌

"ಮಕ್ಕಳಲ್ಲಿ ಅಡಗಿರುವ ಪ್ರತಿಭೆ, ಸೃಜನಶೀಲತೆ ಮತ್ತು ಆತ್ಮವಿಶ್ವಾಸವನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರ...

ರಾಯಚೂರು | ಮಹಾನಗರ ಪಾಲಿಕೆ ಪ್ರಭಾರಿ ಆಯುಕ್ತರಾಗಿ ಈಶ್ವರ ಕುಮಾರ ಕಾಂದೂ ನೇಮಕ

ರಾಯಚೂರು ಮಹಾನಗರ ಪಾಲಿಕೆಯ ಪ್ರಭಾರಿ ಆಯುಕ್ತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ...

ರಾಯಚೂರು ಬಿಇಒ ಆಗಿ ರಾಧಾದೇವಿ ನೇಮಕ

ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ (ಬಿಇಒ) ರಾಧಾದೇವಿ ಅವರನ್ನು ನೇಮಕ ಮಾಡಿ ರಾಜ್ಯ...