ಗದಗ | ಮಕ್ಕಳಿಗೆ ಉತ್ತಮ ಸಂಸ್ಕಾರ ಗುಣಾತ್ಮಕ ಶಿಕ್ಷಣ ನೀಡುವ ಶಿಕ್ಷಕರು ರಾಷ್ಟ್ರ ರಕ್ಷಕರು: ಡಾ. ಕಸ್ತೂರೆವ್ವ ದಳವಾಯಿ

Date:

“ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಗುಣಾತ್ಮಕ ಶಿಕ್ಷಣವನ್ನು ನೀಡಿ ಸಮಾಜ, ದೇಶದ ಅಭಿವೃದ್ಧಿಗೆ ನಿಸ್ವಾರ್ಥಿಯಾಗಿ ಸೇವೆ ಸಲ್ಲಿಸುವ, ಸಮರ್ಥ ಶಿಕ್ಷಕರೇ ರಾಷ್ಟ್ರ ರಕ್ಷಕರಾಗುತ್ತಾರೆ” ಎಂದು  ಪ್ರಾಂಶುಪಾಲರಾದ ಡಾ. ಕಸ್ತೂರೆವ್ವ ದಳವಾಯಿ ಹೇಳಿದರು.

- Advertisement -

ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್‌ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ  ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಮಕ್ಕಳ ಭವಿಷ್ಯ ರೂಪಿಸುವರು ಶಿಕ್ಷಕರಾಗಿದ್ದಾರೆ. ಎಂಜನಿಯರ್‌ ಕಾರ್ಯದಲ್ಲಿದೋಷವಾದರೆ ಕಟ್ಟಡಕ್ಕೆ ಹಾನಿಯಾಗುವುದು. ವೈದ್ಯನ ವೃತ್ತಿಯಲ್ಲಿದೋಷವಾದರೆ ರೋಗಿಗೆ ಹಾನಿಯಾಗುವುದು. ಆದರೆ ಶಿಕ್ಷಕನ ಕರ್ತವ್ಯದಲ್ಲಿ ಚ್ಯುತಿ ಉಂಟಾದರೆ ಇಡೀ ವಿದ್ಯಾರ್ಥಿ ಸಮೂಹದ ಭವಿಷ್ಯವೇ ಹಾಳಾಗುವುದು. ಆದ್ದರಿಂದ ಶಿಕ್ಷಕರ ಜವಾಬ್ದಾರಿ ಅತ್ಯಂತ ಗುರುತರವಾದದ್ದು ದಕ್ಷತೆ, ಪ್ರಾಮಾಣಿಕತೆಯಿಂದ ಶಿಕ್ಷಕರು ಕರ್ತವ್ಯ ನಿರ್ವಹಿಸುವುದು ಅತೀ ಅವಶ್ಯವಿದೆ” ಎಂದರು.

“ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದದ್ದು. ಕೇವಲ ಪಠ್ಯ ಬೋಧನೆಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಸತ್ಪ್ರಜೆಗಳಾಗುವ ಗುಣಗಳನ್ನು ಬೆಳೆಸುವುದು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ. ಭಾರತದ ಶ್ರೇಷ್ಠ ತತ್ವಜ್ಞಾನಿ, ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶ ಬದುಕು ಶಿಕ್ಷಕ ಸಮುದಾಯಕ್ಕೆ ಸದಾ ದಾರಿದೀಪವಾಗಿದೆ. ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸಿ, ಅವರ ಮಾರ್ಗದರ್ಶನದಲ್ಲಿ ಉನ್ನತ ಗುರಿ ತಲುಪಬೇಕು” ಎಂದು ಕಿವಿಮಾತು ಹೇಳಿದರು.

ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ) ಸಂಚಾಲಕರಾದ ಜಯಶ್ರೀ ಮುತಗಾರ ಮಾತನಾಡಿ, “ಶಿಕ್ಷಕರಾದವರು ಭಾವನಾತ್ಮಕವಾಗಿ, ಎಚ್ಚರಿಕೆಯಿಂದ ಪಾಠ ಹೇಳುವ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಮತ್ತು ಬೇರುಮಟ್ಟದ ಶಿಕ್ಷಣ ನೀಡಬೇಕು” ಎಂದರು.

“ಪ್ರತಿಯೊಂದು ವಿಷಯದಲ್ಲಿಯೂ ಗುರುಗಳನ್ನು ಕಾಣುವಂತಹ ಸಂಸ್ಕೃತಿ ನಮ್ಮದು. ಗುರುವಿನಿಂದ ಶಿಕ್ಷಣ ಕಲಿಯುವುದೇ ನಿಜವಾದ ಕಲಿಕೆ ಆಗಿದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಹೊರತರುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಇಂದಿನ ಸ್ಪರ್ಧಾತ್ಮಕ ಹಾಗೂ ಡಿಜಿಟಲ್ ಯುಗದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳುವುದು ಸವಾಲಿನ ಸಂಗತಿ. ವಿದ್ಯಾರ್ಥಿಗಳು ಸಮಯಪ್ರಜ್ಞೆ, ಶಿಸ್ತು ಮತ್ತು ನಿರಂತರ ಪರಿಶ್ರಮವನ್ನು ಮೈಗೂಡಿಸಿಕೊಂಡು ಕಾಲೇಜಿಗೆ ಹಾಗೂ ದೇಶಕ್ಕೆ ಕೀರ್ತಿ ತರಬೇಕು” ಎಂದು ಕರೆ ನೀಡಿದರು.

ಇದೇ ವೇಳೆ ಪ್ರಾಧ್ಯಾಪಕರು, ವಿದ್ಯಾರ್ಥಿಗಳು  ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.  ಪ್ರಾಧ್ಯಾಪಕರಾದ ಎಸ್. ಎಸ್. ಸೂಡಿ, ಸುನಂದಾ ಮುಂಜಿ, ಅನಿಲಕುಮಾರ, ಶಶಿಕಲಾ ವಿ. ಎಸ್.‌, ಶಿವಪ್ಪ ಕುರಬರ, ವಿರೂಪಾಕ್ಷ ಆರ್., ಅಯ್ಯಪ್ಪ, ಎನ್. ಎಸ್. ಹೊನ್ನೂರ, ವಿ. ಸಿ. ಇಲ್ಲೂರ, ಪಿ. ವೈ. ಶಾಸ್ತ್ರಿ, ಕೆ. ಎನ್. ಕಟ್ಟಿಮನಿ, ವಿವೇಕಾನಂದ ಹಿರೇಮಠ, ಶರಣಪ್ಪ ಚಿಕ್ಕೆನಕೊಪ್ಪ, ಶಂಕರಗೌಡ ಪಾಟೀಲ, ಎಂ. ಎಫ್. ತಹಶೀಲ್ದಾರ,  ಎಸ್.‌ ಆರ್.‌ ನದಾಫ್‌, ವಿವೇಕಾನಂದ ಹಿರೇಮಠ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...