ಗದಗ | ‘ಕರ್ನಾಟಕ ಸಂಭ್ರಮ-50’ರ ಕನ್ನಡ ಜ್ಯೋತಿ ಸ್ವಾಗತಿಸಿದ ಮುಖ್ಯಮಂತ್ರಿ

Date:

ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ ‘ಕನ್ನಡ ಸಂಭ್ರಮ-50’ರ ಅಂಗವಾಗಿ ಹಂಪಿಯಿಂದ ಗದಗಕ್ಕೆ ಕನ್ನಡ ಜ್ಯೋತಿ ಆಗಮಿಸಿದೆ. ಕನ್ನಡ ಜ್ಯೋತಿಯನ್ನು ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.

- Advertisement -

ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. 1973ರ ನವೆಂಬರ್ 03ರಂದು ನಡೆದ ಕರ್ನಾಟಕ ನಾಮಕರಣ ಸಂಭ್ರಮದ ಕಾರ್ಯಕ್ರಮವನ್ನು, 2023ರ ನವೆಂಬರ್ 03ರಂದು 50ವರ್ಷದ ಸುವರ್ಣ ಸಂಭ್ರವನ್ನು ಪುನರಪಿಯಾಗಿ ಆಚರಿಸುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಅಂದು ಸಾಗಿದ ಮೆರವಣಿಗೆಯ ಮಾರ್ಗದಲ್ಲಿಯೇ ಇಂದು ಮೆರವಣಿಗೆ ಸಾಗಿದ್ದು ವಿಶೇಷವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅದ್ದೂರಿ ಮೆರವಣಿಗೆಯಲ್ಲಿ ಮೈಸೂರಿನ ಚಂಡೆ, ಮದ್ದಳೆ ಕಲಾತಂಡಗಳು ಸೇರಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 25ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯುದ್ದಕ್ಕೂ ಕಲಾಪ್ರದರ್ಶನ ನೀಡಿದವು. ಮೈಸೂರು ದಸರಾದಲ್ಲಿ ಪ್ರದರ್ಶನಗೊಂಡ ಸಬರಮತಿ ಆಶ್ರಮ, ಲಕ್ಕುಂಡಿಯ ಬ್ರಹ್ಮಜೀನಾಲಯ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಗತವೈಭವ ಸಾರಿದವು.

ನಗರಸಭೆ ವತಿಯಿಂದ ಭುವನೇಶ್ವರಿ, ಸರಕಾರದಿಂದ ಅಧಿಕೃತಗೊಳಿಸಲಾದ ಲಾಂಛನ ಹಾಗೂ ಭುನೇಶ್ವರಿ ದೇವಿ ಮೂರ್ತಿ, ಕುಂಭಹೊತ್ತ ಮಹಿಳೆಯರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಮೆರವಣಿಗೆಗೆ ರಂಗು ತುಂಬಿದರು.

ಹಾದಿಯುದ್ದಕ್ಕೂ ಮನೆಗಳ ಮುಂದೆ  ಕನ್ನಡದ ರಂಗೋಲಿ, ಬಾವುಟಗಳು ಕಣನ ಸೆಳೆಯುತ್ತಿದ್ದರೆ ಮಹಿಳೆಯರು, ಮಕ್ಕಳು ರಥಕ್ಕೆ ಹೂಮಳೆ ಗರೆಯುತ್ತಾ, ರಥದ ಚಕ್ರಗಳಿಗೆ ಹಣ್ಣು ಕಾಯಿ, ಹಾಲಿನ ಅಭಿಷೇಕ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಂಕಳ ವೈದ್ಯ ಸೇರಿ ಹಲವು ಮುಖಂಡರು ಮೆರವಣಿಗೆಯಲ್ಲಿದ್ದರು.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪೌರಾಡಳಿತ ಸಚಿವ ರಹೀಂಖಾನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ, ಶಾಸಕರಾದ ಜಿ.ಎಸ್. ಪಾಟೀಲ, ಶ್ರೀನಿವಾಸ ಮಾನೆ, ಜೆ.ಟಿ. ಪಾಟೀಲ, ಸರಕಾರದ ಮುಖ್ಯಸಚೇತಕ ಸಲೀಂ ಅಹ್ಮದ್, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಶಾಸಕ ಡಿ.ಆರ್. ಪಾಟೀಲ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿ ಹಲವರು ಇದ್ದರು. ಸಿಎಂ ಆಗಮನ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...