ಗದಗ | ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ: ಅಲ್ಕೋಡ್ ಹನುಮಂತಪ್ಪ

Date:

Advertisements

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮುಂಡರಗಿ ತಾಲೂಕು ಸೇರಿದಂತೆ ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ರೈತರೆಲ್ಲ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ, ಎಂದು ಜೆಡಿಎಸ್ ಮುಖಂಡ ಅಲ್ಕೋಡ್ ಹನುಮಂತಪ್ಪ ಆರೋಪಿಸಿದ್ದಾರೆ.

ಬರ ಅಧ್ಯಯನದ ಅಂಗವಾಗಿ ತಾಲೂಕಿನ ಜೆಡಿಎಸ್ ಕಾರ್ಯಕರ್ತರೊಂದಿಗೆ ಶನಿವಾರ ಸಂಜೆ ಬೆಣ್ಣಿಹಳ್ಳಿ, ಬೂದಿಹಾಳ ಹಾಗೂ ಮತ್ತಿತರ ಗ್ರಾಮಗಳ ಜಮೀನುಗಳಿಗೆ ರೈತರನ್ನು ಭೇಟಿ ನೀಡಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ತಾಲ್ಲೂಕಿನಲ್ಲಿ ರೈತರು ಮುಂಗಾರು ಹಂಗಾಮಿಲ್ಲಿ ಬೆಳೆದಿದ್ದ ಶೇಂಗಾ, ಮೆಕ್ಕೆಜೋಳ, ತೊಗರಿ, ಜೋಳ, ಹೆಸರು ಮೊದಲಾದ ಬೆಳೆಗಳು ಸಂಪೂರ್ಣವಾಗಿ ಒಣಗಿಹೋಗಿದ್ದು, ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ.

ದುಡಿಯಲು ಕೆಲಸ ಕಾರ್ಯಗಳಿಲ್ಲದ್ದರಿಂದ ರೈತರು ಹಾಗೂ ರೈತ ಕೂಲಿ ಕಾರ್ಮಿಕರು ಗುಳೆಹೋಗುತ್ತಿದ್ದಾರೆ. ತಾಲ್ಲೂಕಿನ ವಿವಿಧ ಗ್ರಾಮಗಳ ಜನರು ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದಾರೆ. ಸರ್ಕಾರ ಸಾರ್ವಜನಿಕರಿಗೆ ನಿತ್ಯ ಶುದ್ಧ ಕುಡಿಯುವ ನೀರು ಹಾಗೂ ನಿತ್ಯ ಬಳಕೆಗೆ ಅಗತ್ಯವಿರುವ ನೀರನ್ನು ಪೂರೈಸಬೇಕು. ಜಾನುವಾರುಗಳ ರಕ್ಷಣೆಗೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಗೋಶಾಲೆಗಳನ್ನು ತೆರೆಯಬೇಕು. ಆ ಮೂಲಕ ರೈತರ ಹಿತ ಕಾಯಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

Advertisements

ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ತಕ್ಷಣ ಬೆಳೆ ನಷ್ಟ ಸಮೀಕ್ಷೆಯನ್ನು ಕೈಗೊಳ್ಳಬೇಕು. ರೈತರಿಗೆ ತಕ್ಷಣ ಬರಗಾಲ ಹಾಗೂ ಬೆಳೆಹಾನಿ ಪರಿಹಾರವನ್ನು ವಿತರಿಸಬೇಕು. ಬೆಳೆ ವಿಮೆ ತುಂಬಿರುವ ರೈತರ ಖಾತೆಗಳಿಗೆ ಬೆಳೆಹಾನಿ ಪರಿಹಾರವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ಜೆಡಿಎಸ್ ಮುಖಂಡರಾದ ಗರುರಾಜ ಹುಣಸಿಮರದ, ವೀರಭದ್ರಪ್ಪ ಹಾಲರವಿ, ಎಂ.ವೈ.ಮುಧೋಳ, ಸಿ.ಎಸ್.ಪಾಟೀಲ, ಭಾಷಾಸಾಬ್ ಮುದುಗಲ್ಲ, ಶಂಕರ ಬಾಳಿಕಾಯಿ, ಮಂಜುನಾಥ ದೊಡ್ಡಮನಿ, ರಫಿಕ್ ಹವಾಲ್ದಾರ್, ಮಂಜುಳಾ ಮೇಟಿ, ಶಾರದಾ ಕಾತರಕಿ, ಉಮೇಶ ಹಿರೇಮಠ, ಯಲ್ಲಪ್ಪ ಭಜಂತ್ರಿ, ಶ್ರೀಕಾಂತ ಕಮತರ, ಪ್ರವೀಣ ಬಾಳಿಕಾಯಿ, ಸುಭಾಷಚಂದ್ರ ದಾನರಡ್ಡಿ, ಲಕ್ಷ್ಮಣ ನಾಯಕ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X