ಗದಗ | ಕಳ್ಳತನ ಪ್ರಕರಣ; ಆರೋಪಿಗಳ ಬಂಧಿಸಿ ₹2.48 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ

Date:

ಲಕ್ಷ್ಮೇಶ್ವರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೈತರನ್ನು ಗುರಿಯಾಗಿಸಿಕೊಂಡು ಚಿನ್ನಾಭರಣ, ನಗದು ಮತ್ತು ಜಾನುವಾರುಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸಿ, ಒಟ್ಟು 2.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

2026ರ ಫೆಬ್ರವರಿ 10ರಂದು ಲಕ್ಷ್ಮೇಶ್ವರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ 15 ಗ್ರಾಂ ತೂಕದ ಬಂಗಾರದ ಗುಂಡುಗಳು ಹಾಗೂ ಲಾಕೆಟ್ ಹೊಂದಿದ್ದ ಸರ ಕಳ್ಳತನವಾಗಿತ್ತು. ಮೇ 6ರಂದು ಸೋಗಿಹಾಳ ಗ್ರಾಮದ ಹೊರವಲಯದಲ್ಲಿನ ಶೆಡ್‌ನಲ್ಲಿ ಕಟ್ಟಿದ್ದ ಎರಡು ಎತ್ತುಗಳು (1 ಲಕ್ಷ ರೂ. ಮೌಲ್ಯ) ಹಾಗೂ ಒಂದು ಆಕಳು (45 ಸಾವಿರ ರೂ. ಮೌಲ್ಯ) ಕಳ್ಳತನವಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಇನ್ನು ಆಗಸ್ಟ್ 13ರಂದು ಬಸ್ ನಿಲ್ದಾಣದಲ್ಲಿ ರೈತರೊಬ್ಬರ 77,500 ರೂ. ಹಾಗೂ ಸೆಪ್ಟೆಂಬರ್ 24ರಂದು ಅದೇ ಬಸ್ ನಿಲ್ದಾಣದಲ್ಲಿ ಮತ್ತೊಬ್ಬ ರೈತರ 48 ಸಾವಿರ ರೂ. ಹಣ ಕಳ್ಳತನವಾಗಿತ್ತು. ಈ ನಾಲ್ಕು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಹುಬ್ಬಳ್ಳಿಯ ಅನೀಲ ಅಲಿಯಾಸ್ ಗಂಗ್ಯಾ ಕಂಜರಭಾಟ, ತಡಸದ ಅಲ್ತಾಫ್ ಬೇಪಾರಿ, ಯಾದವಾಡದ ನೂರಬಾದಶಹ, ತಡಸದ ಇಮಾಮಹುಸೇನ ಮಹಾಲ್ದಾರ ಹಾಗೂ ದಾವಣಗೆರೆಯ ಸಾಹಿಲ್ ಅಕ್ರಂ ಎಂದು ಗುರುತಿಸಲಾಗಿದೆ.

ಆರೋಪಿತರಿಂದ ಸುಮಾರು 1.30 ಲಕ್ಷ ರೂ. ಮೌಲ್ಯದ ಬಂಗಾರದ ಸರ ಹಾಗೂ 1,18,500 ರೂ. ನಗದು ಹಣ ಸೇರಿದಂತೆ ಒಟ್ಟು 2.48 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್. ಹಾಗೂ ಡಿವೈಎಸ್ಪಿ ಮುರ್ತುಜಾ ಖಾದ್ರಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಬಿ.ವಿ. ನ್ಯಾಮಗೌಡ, ಪಿಎಸ್‌ಐ ಆನಂದ ಸಿ. ಕ್ಯಾರಕಟ್ಟಿ, ಕ್ರೈಂ ವಿಭಾಗದ ಪಿಎಸ್‌ಐ ಟಿ.ಕೆ. ರಾಠೋಡ, ಎಎಸ್‌ಐ ವೈ.ಸಿ. ದೊಡ್ಡಮನಿ ಹಾಗೂ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪಾಂಡುರಂಗರಾವ್, ಡಿ.ಎಸ್. ನದಾಫ್, ಮಾರ್ತಂಡ ಉಪ್ಪಾರ, ಆರ್.ಎಚ್. ಮುಲ್ಲಾ, ಆರ್.ಎಸ್. ಯರಗಟ್ಟಿ, ಎಂ.ಎ. ಶೇಖ್, ಎಂ.ಎಸ್. ಬಳ್ಳಾರಿ, ಆನಂದ ಕಮ್ಮಾರ, ಸಿ.ಎಸ್. ಮಠಪತಿ, ಹೆಚ್.ಐ. ಕಲ್ಲಣ್ಣವರ, ಎನ್.ಎಚ್. ಮಠಪತಿ, ಎಸ್.ಬಿ. ವಾಲ್ಮೀಕಿ, ಎಲ್.ಪಿ. ಗಾಣಿಗೇರ, ವಿದ್ಯಾಶ್ರೀ ಹದ್ಲಿ, ಎಸ್.ಡಿ. ಭೂತಪ್ಪನವರ, ಅಪ್ಪಣ್ಣ ರಾಠೋಡ, ಕೃಷ್ಣ ಹುಲಗೂರು, ಗುರು ಬೂದಿಹಾಳ ಹಾಗೂ ಸಂಜು ಕೊರಡೂರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪೊಲೀಸ್ ತಂಡದ ಉತ್ತಮ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ವಾಟ‌ರ್ ಹೀಟರ್‌ ನಿಂದ ಮಗು ಸಾವು 

ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ  ಬಕೆಟ್‌ನಲ್ಲಿ ನೀರು ಕಾಯಿಸಲು ಹಾಕಿದ್ದ ವಾಟ‌ರ್...

ಚಿಕ್ಕಮಗಳೂರು | ಅಪಘಾತದಲ್ಲಿ ಮೃತ: ಸರ್ಕಾರದಿಂದ ಪರಿಹಾರ; ಶಾಸಕ ಹೆಚ್.ಡಿ ತಮ್ಮಯ್ಯ

ಬಿಳೇಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕ‌ರ್ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಏಕಾಏಕಿ...

ಉಡುಪಿ | ಕುಂದಾಪುರ ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ; ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸರ್ಜನ್...

ಚಿಕ್ಕಮಗಳೂರು | ನಾಡ ಹಬ್ಬದಲ್ಲೇ ಆಂಗ್ಲ ಭಾಷೆ ಬಳಕೆ: ಕನ್ನಡಿಗರ ಆಕ್ರೋಶ 

ಜಿಲ್ಲೆಯ ಮೂಡಿಗೆರೆ ತಾಲೂಕು ಕೇಂದ್ರದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು...