ಗದಗ | ಗಡಿಭಾಗದ ಹಳ್ಳಿಗಳಿಗೆ ಸಾರಿಗೆ ಬಸ್ ಇಲ್ಲ, ವಿದ್ಯಾರ್ಥಿಗಳಿಗೆ ಪಸ್ ಪಾಸ್ ನೀಡುತ್ತಿಲ್ಲ; ಕರವೇ ಪ್ರತಿಭಟನೆ

Date:

“ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸಾರಿಗೆ ಇಲಾಖೆ ಚೆಲ್ಲಾಟವಾಡುತ್ತಿದೆ. ​ಗದಗ ನಗರದಿಂದ ಶಿರಹಟ್ಟಿ ಗಡಿಭಾಗದ ಹಳ್ಳಿಗಳಿಗೆ ಬಸ್ ಸೌಲಭ್ಯವಿಲ್ಲ. ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯು ಬಸ್ ಪಾಸ್ ನೀಡುತ್ತಿಲ್ಲ” ಎಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ತಹಶೀಲ್ದಾರ ಕಛೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಿರಹಟ್ಟಿ ತಾಲೂಕಿನ ಗಡಿಭಾಗದ ಗ್ರಾಮಗಳಲ್ಲಿ ತೀವ್ರ ಬಸ್ ಸಮಸ್ಯೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆಯಲ್ಲಿ ಸಾರಿಗೆ ಇಲಾಖೆ ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಪ್ರತಿಭಟನೆಯಲ್ಲಿ ಕರವೆ ತಾಲೂಕು ಅಧ್ಯಕ್ಷ ಶಿವು ಮಠದ ಮಾತನಾಡಿ, “ಗದಗ ಸಾರಿಗೆ ಅಧಿಕಾರಿಗಳು ಕೋಗನೂರು, ನಾಗರಮಡವು, ಅಂಕಲಿ ಹಾಗೂ ಇತರೆ ಕೊನೆಯ ಹಳ್ಳಿಗಳಿಗೆ ಬಸ್ ಪಾಸ್ ನೀಡುವುದಿಲ್ಲವೆಂದು ಅಧಿಕೃತ ಸೂಚನಾ ಫಲಕವನ್ನು ಹಾಕಿರುವುದು ವಿದ್ಯಾರ್ಥಿಗಳ ಹಾಗೂ ಪೋಷಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ” ಎಂದರು.

“ಸಾರಿಗೆ ಅಧಿಕಾರಿಗಳ ಈ ಜನವಿರೋಧಿ ಧೋರಣೆಯನ್ನು ಖಂಡಿಸಿ ಕರವೇ ಕಾರ್ಯಕರ್ತರು, ತಕ್ಷಣವೇ ಆ ಸೂಚನಾ ಪತ್ರವನ್ನು ತೆರವುಗೊಳಿಸಿ ಎಲ್ಲ ವಿದ್ಯಾರ್ಥಿಗಳಿಗೆ ತಾರತಮ್ಯ ಇಲ್ಲದೆ ಪಾಸ್ ವಿತರಿಸಬೇಕು” ಎಂದು ಆಗ್ರಹಿಸಿದರು.

“​ಕೋಗನೂರು, ನಾಗರಮಡವು, ಅಂಕಲಿ ಸೇರಿದಂತೆ ಗಡಿಭಾಗದ ಕೊನೆಯ ಹಳ್ಳಿಗಳ ವಿದ್ಯಾರ್ಥಿಗಳಿಗೆ ತಕ್ಷಣವೇ ಬಸ್ ಪಾಸ್ ಸೌಲಭ್ಯ ಕಲ್ಪಿಸಬೇಕು. ಗದಗ ಮತ್ತು ರಾಣೆಬೆನ್ನೂರು ನಗರಗಳಿಂದ ಸಂಚರಿಸುವ ಬಸ್ಸುಗಳು ಕಡ್ಡಾಯವಾಗಿ ವಡವಿ ಹೊಸೂರಿನಿಂದ ಗೋವಿನಕೊಪ್ಪ, ಕೋಗನೂರು ಮೂಲಕ ತಂಗೋಡ ತಲುಪಿ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕು” ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.

“​ತಂಗೋಡ ಮೂಲಕ ಹಾದು ಹೋಗುವ ಇತರೆ ಹೆಚ್ಚುವರಿ ಬಸ್ಸುಗಳಲ್ಲೂ ವಿದ್ಯಾರ್ಥಿಗಳು ಪ್ರಯಾಣಿಸಲು ಅನುಮತಿ ನೀಡುವಂತೆ ನಿರ್ವಾಹಕರಿಗೆ (ಕಂಡಕ್ಟರ್) ಸಾರಿಗೆ ಇಲಾಖೆ ತಕ್ಷಣವೇ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು.

“ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಜೊತೆ ಆಟವಾಡುತ್ತಿರುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಂದಿನ ಏಳು ದಿನಗಳ ಒಳಗಾಗಿ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ, ತಂಗೋಡದ ರಾಜ್ಯ ಹೆದ್ದಾರಿಯನ್ನು ಸಂಪೂರ್ಣವಾಗಿ ಬಂದ್ ಮಾಡಿ ಸಾರಿಗೆ ಇಲಾಖೆಯ ವಿರುದ್ಧ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಕರವೇ ಮುಖಂಡರು ಎಚ್ಚರಿಕೆ ನೀಡಿದರು.

​ಪ್ರತಿಭಟನೆಯಲ್ಲಿ​ ಕರವೇ ಜಿಲ್ಲಾ ಉಪಾಧ್ಯಕ್ಷರು ಹಾಗೂ ವಕೀಲರು ಶರಣಪ್ಪ ಪುರತಗಿರಿ, ಪ್ರಮುಖ ಮುಖಂಡರು ರಾಕೇಶ್ ಬೂದಿಹಾಳ, ರಾಹುಲ್ ಮಡಿವಾಳರ, ಕಿರಣ ಚನ್ನೂರು, ನಾಗರಾಜ್ ಬೀರಬ್ಬಿ, ಸಂಜೀವ ಚೂರಿ, ಮಣಿಕಂಠ, ದುರಗಪ್ಪ ಸೇರಿದಂತೆ ಕರವೇ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ರಾಹುಲ್ ಮಡಿವಾಳರ, ಮೀಡಿಯಾ ವಾಲಂಟೀಯರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...

ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ...