ಗದಗ | ಇವತ್ತಿನ ಸರ್ಕಾರ ಕಾರ್ಪೋರೇಟಗಳ ಉದ್ದಾರಕ್ಕಾಗಿ ಕೆಲಸ ಮಾಡುತ್ತಿದೆ: ಪರಮ ಪೂಜ್ಯ ಪ್ರಭು ಮಹಾಂತ ಸ್ವಾಮಿ

Date:

“ನಮ್ಮ ದೇಶ ರಾಜ್ಯದಲ್ಲಿ ಲೋಕ ಕಲ್ಯಾಣ ಮಾಡುತ್ತೇವೆ, ಬಡವರಿಗೆ ಶಿಕ್ಷಣ, ಆರೋಗ್ಯ ಮತ್ತು ವಸತಿ ಉಚಿತವಾಗಿ ನೀಡುತ್ತೇವೆಂದು ಅಧಿಕಾರಕ್ಕೆ ಬರುವ ಸರ್ಕಾರಗಳು ಜನರಿಗೆ ನೀಡಿರುವ ಭರವಸೆಗಳನ್ನು ಮರೆತು ಶ್ರೀಮಂತರ ಹಾಗೂ ಕಾರ್ಪೋರೇಟಗಳ ಉದ್ದಾರಕ್ಕಾಗಿ ಕೆಲಸ ಮಾಡುತ್ತಿದೆ” ಎಂದು ಬೇಲೂರು ಗುರು ಬಸವೇಶ್ವರ ಮಠದ ಪರಮ ಪೂಜ್ಯ ಡಾಕ್ಟರ್ ಪ್ರಭು ಮಹಾಂತ ಮಹಾ ಸ್ವಾಮೀಜಿಗಳು ಸರ್ಕಾರಗಳ ಬಡಜನರ ವಿರೋಧಿ ನೀತಿಗಳ ವಿರುಧ್ದ ಆಕ್ರೋಶ ವ್ಯಕ್ತ ಪಡಿಸಿದರು.

- Advertisement -

ಗದಗ ಪಟ್ಟಣದ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಸಾವಿತ್ರಿಬಾ ಪುಲೆ ಮಹಿಳಾ ಸಂಘಟನೆಯಿಂದ ಹಾಗೂ ಜಿಲ್ಲಾ ಸ್ಲಂ ಸಮಿತಿಯ ವತಿಯಿಂದ ಲಾಯನ್ಸ್ ಭವನದಲ್ಲಿ ರಾಜ್ಯ ಮಟ್ಟದ ಪ್ರತಿನಿಧಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ರಾಜ್ಯದಲ್ಲಿ ಅಧಿಕಾರಿಕ್ಕೆ ಬರಲು ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಫಲಾನುಭವಿಗಳ ಪುನರ್ ಪರಿಷ್ಕರಣೆ ಮುಂದಾಗಿರುವುದು ಬಡವರಿಗೆ ಸಿಗುತ್ತಿರುವ ಉಚಿತ ಯೋಜನೆಗಳನ್ನು ತೆಗೆದು ಹಾಕುವ ಕುತಂತ್ರ ನಡೆಸಲಾಗುತ್ತಿದೆ. ಹಾಗಾಗಿ ರಾಜ್ಯ ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಮಿತಿಯಿಂದ ಹಮ್ಮಿಕೊಂಡಿರುವ ಸಮ್ಮೇಳನವು ಯಶಸ್ವಿಯಾಗಿ ಜರುಗಲಿ” ಎಂದರು.

“ಸಮ್ಮೇಳನದ ಮೂಲಕ ಸ್ಲಂ ಜನರ ಹಕ್ಕೋತ್ತಾಯಗಳಿಗೆ ಸರ್ಕಾರ ಆದ್ಯತೆ ನೀಡಲಿ. ಸ್ಲಂ ಜನರ ಯಾವುದೇ ಹೋರಾಟಗಳಿಗೆ ಕರೆ ನೀಡಿದ್ದಲ್ಲಿ ನಾನು ಭಾಗವಹಿಸಿ ಜನರ ಧ್ವನಿಯಾಗಿ ನಿಲ್ಲುತ್ತೇನೆ” ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ರಾಜ್ಯ ಸಂಚಾಲಕ ಎ,ನರಸಿಂಹಮೂರ್ತಿ ಮಾತನಾಡಿ, “ರಾಜ್ಯ ಕಾಂಗ್ರಸ್ ಸರ್ಕಾರ ತಮ್ಮ 2023ರ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಮರೆತಿದೆ. ರಾಜ್ಯದ ಸ್ಲಂ ಜನರಿಗೆ ಉಚಿತ ಮನೆಗಳನ್ನು ನೀಡುತ್ತೇವೆಂದು ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಸರ್ಕಾರದ ವಸತಿ ಯೋಜನೆ ಬಡವರಿಗೆ ಸಿಗದೇ ಉಳ್ಳವರ ಪಾಲಾಗುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ 2023ರಲ್ಲಿ ರಾಜ್ಯದ ಸ್ಲಂ ಜನರಿಗೆ ನೀಡಿರುವ ಭರಸೆಗಳಿಗೆ ತಕ್ಕಂತೆ ಯೋಜನೆಗಳನ್ನು ಜಾರಿಗೆ ತರಲು ಮತ್ತು ಜನರಿಗೆ ನೀಡಿರುವ ಭರವಸೆಗಳನ್ನು ನೆನಪಿಸುವ ಉದ್ದೇಶದಿಂದ ನಗರದಲ್ಲಿ ರಾಜ್ಯ ಮಟ್ಟದ ಪ್ರತಿನಿಧಿಗಳ ಸಮ್ಮೇಳನ ನಡೆಸುತ್ತಿದ್ದೇವೆ” ಎಂದು ಹೇಳಿದರು.

ಪ್ರಗತಿಪರ ಚಿಂತಕರಾದ ಬಸವರಾಜ ಸುಳಿಬಾವಿ ಮಾತನಾಡಿ, “ಕೇಂದ್ರ ಸರ್ಕಾರ ದೇಶದ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತ ಜಾತಿ, ಧರ್ಮಗಳ ಮಧ್ಯ ಸಂಘರ್ಸ ನಡೆಸುವ ಮೂಲಕ ಕಳೆದ 12 ವರ್ಷಗಳಿಂದ ಅಧಿಕಾರ ನಡೆಸುತ್ತಿದೆ. ದೇಶದ ಸಾರ್ವಜನಿಕ ಸಂಪತ್ತನ್ನು ಕಾರ್ಪೋರೇಟ ಕಂಪನಿಗಳಿಗೆ ಮಾರಾಟ ಮಾಡಿ ಸಾರ್ವಜನಿಕ ಎಲ್ಲಾ ವಲಯಗಳನ್ನು ಖಾಸಗೀಕರಣ ಮಾಡಲಾಗಿದೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಎಂಬತ್ತು ವರ್ಷಗಳಾದರಜು ಸಹ ಬಡವರು ಈಗಲೂ ಕೂಡಾ ಒಂದು ನಿವೇಶನಕ್ಕಾಗಿ, ಒಂದು ಮನೆಗಾಗಿ ಹೋರಾಟ ನಡೆಸುತ್ತಿರುವುದು ಸರ್ಕಾರಗಳಿಗೆ ನಾಚಿಕೆ ಆಗಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಡವರಿಗೆ ಒಂದು ಸೂರು ಕಲ್ಪಿಸಲು ಆಗದೇ ಇರುವ ಸರ್ಕಾರ ನಮ್ಮಗೆ ಯಾಕೆ ಬೇಕು. ಇಂತಹ ಸಂವಿಧಾನ ವಿರೋಧಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಜನರು ಒಂದಾಗಿ ಹೋರಾಟ ನಡೆಸಬೇಕು” ಎಂದು ಹೇಳಿದರು.

ಗದಗ-ಬೆಟಗೇರಿ ನಗರಸಭೆಯ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಮಾರ್ಲಾಪಣೆ ಮಾಡುವ ಮೂಲಕ ಸಮ್ಮೇಳನದ ರ‍್ಯಾಲಿಯನ್ನು ಪ್ರಾರಂಭಿಸಿ, ನಗರದ ಗಾಂಧಿ ಸರ್ಕಲ್ ಮಾರ್ಗವಾಗಿ ಹಳೇ ಕೋರ್ಟ್ ರಸ್ತೆಯಲ್ಲಿರುವ ಲಾಯನ್ಸ್ ಭವನದ ವರಗೆ ಜಾಥಾವನ್ನು ನಡೆಸಲಾಯಿತು.

“ಸಾವಿತ್ರಿಬಾ ಪುಲೆ ಮಹಿಳಾ ಸಮಿತಿ ಸಂಚಾಲಕಿ ಚಂದ್ರಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಹೋರಾಟಗಾರರು ಎಂ.ಎಸ್.ಹಡಪದ, ಬಸವರಾಜ ಪೂಜಾರ, ಪೂರ್ಣ ರವಿಶಂಕರ್, ಡಿ.ಎಸ್.ಎಸ್. ಸಂಚಾಲಕ ವೆಂಕಟೇಶಯ್ಯ, ಪ್ರತಿಪರ ಚಿಂತಕರಾದ ಶೇಖಣ್ಣ ಕವಳಿಕಾಯಿ, ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರು ಇಮ್ತಿಯಾಜ.ಆರ್.ಮಾನ್ವಿ, ಉಪಾಧ್ಯಕ್ಷ ಅಶೋಕ ಕುಡತಿನಿ, ಜನಾರ್ಧನ ಹಳ್ಳಿಬೆಂಚಿ, ಶೋಭಾ ಕಮತರ, ರೇಣುಕಾ ಸರಡಗಿ, ಅಕ್ರಮ ಮಶಾಳಕರ, ಪುಷ್ಪಾ ಬಿಜಾಪೂರ, ಅರುಣ.ಟಿ, ರೇಣುಕಾ ಯಲ್ಲಮ್ಮ, ವೆಂಕಮ್ಮ, ಸುಧಾ.ಡಿ, ಫಕ್ಕೀರಪ್ಪ ತಳವಾರ, ಶೇಖರಬಾಬು, ರಸೂಲ ನದಾಫ, ಮಂಜುಬಾಯಿ ಮುಖ್ಯತಿಥಿಗಳಾಗಿ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೌಲಾಸಾಬ ಗಚ್ಚಿ, ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ಸಲೀಂ ಹರಿಹರ, ಮಕ್ತುಮಸಾಬ ಮುಲ್ಲಾನವರ, ಖಾಜಾಸಾಬ ಇಸ್ಮಾಯಿಲನವರ, ಮಂಜುನಾಥ ಶ್ರೀಗಿರಿ, ಮುನ್ನಾ ಅಗಡಿ, ವಿಶಾಲಕ್ಷಿ ಹಿರೇಗೌಡ್ರ, ನಜಮುನಿಸಾ ಮುರಗೋಡ, ಫೈರೋಜಾ ಗುಳಗುಂದಿ, ರಿಜ್ವಾನ ಮುಲ್ಲಾ, ದುರ್ಗಪ್ಪ ನವಲಗುಂದ, ಹುಸೇನ ಮುಲ್ಲಾನವರ, ನಜೀರಅಹ್ಮದ ಹಾವಗಾರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ವಕೀಲರು ಎಂ.ಬಿ.ನದಾಫ ಕಾರ್ಯಕ್ರಮವನ್ನು ನರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...