ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

Date:

“ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ. ಇದರ ಜೊತೆ ಕೈ ಜೋಡಿಸಿ, ಗದಗ ಜಿಲ್ಲೆಯನ್ನು ರಾಜ್ಯಕ್ಕೆ ಮಾದರಿ ಜಿಲ್ಲೆಯಾಗಿ ಮಾಡಲಾಗುವುದು. ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ” ಎಂದು ಸಂಘದ ರಾಜ್ಯಾಧ್ಯಕ್ಷ ವಿಜಯ ಜಾಧವ್ ಹೇಳಿದರು.

- Advertisement -

ಗದಗ ಪಟ್ಟಣದ ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಜಿಲ್ಲಾ ಘಟಕದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಸೇವಾಲಾಲ ಮಹಾರಾಜ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಂತರ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಇಡೀ ರಾಜಾಧ್ಯಂತ ಪ್ರತಿ ಜಿಲ್ಲೆಗೂ ಸುತ್ತಿ ಸಮಾಜದ ಆಗು ಹೋಗುಗಳ ಸಮಸ್ಯೆಗೆ ಧ್ವನಿಯಾಗಿ ಕೆಲಸ ಮಾಡುತ್ತಿರುವ ಏಕೈಕ ಸಂಘಟನೆ ಆಲ್ ಇಂಡಿಯಾ ಬಂಜಾರ ಸೇವಾ ಸಂಘ” ಎಂದು ಅವರು ಆಶಿಸಿದರು.

ಯುವ ಘಟಕ ರಾಜ್ಯಾಧ್ಯಕ್ಷ ಸುನೀಲ್ ನಾಯ್ಕ ಮಾತನಾಡಿ, “ಭಾರತ ದೇಶದಲ್ಲಿ 73 ವರ್ಷಗಳಿಂದ ನಿರಂತರವಾಗಿ ಸಾಗಿಬರುತ್ತಿರು ಏಕೈಕ ಬಂಜಾರ ಸಂಘಟನೆ. ಯುವತ್ತಿನ ಆಧುನಿಕ ಯುಗದಲ್ಲಿ ಭಾರತ ದೇಶದಲ್ಲಿ ಯುವಕರ ಶಕ್ತಿ ಅತೀ ಮುಖ್ಯವಾಗಿದೆ. ಅದಕ್ಕಾಗಿ ಈ ಸಂಘಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರ ಸಂಘಟನೆ, ಬಲಾಢ್ಯ ಸಂಘಟನೆ ಆಗಬೇಕು” ಎಂದು ಹೇಳಿದರು.

ನೂತನ ಅಧ್ಯಕ್ಷ ಸೋಮಪ್ಪ ಲಮಾಣಿ ಮಾತನಾಡಿ, “ಇಂದು ನನ್ನ ಜೀವನದ ಅತ್ಯಂತ ಜವಾಬ್ದಾರಿಯುತ ದಿನ. ನನಗೆ ಗದಗ ಜಿಲ್ಲಾ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ನೂತನ ಸಂಘಟನೆಯ ಜಿಲ್ಲಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಲು ನನಗೆ ಹೆಮ್ಮೆ ಮತ್ತು ವಿನಮ್ರತೆಯ ಭಾವ ಒಟ್ಟಿಗೆ ಮೂಡುತ್ತಿದೆ” ಎಂದರು.

ಗೋವಾ ರಾಜ್ಯಧ ರಾಜ್ಯಾಧ್ಯಕ್ಷ ಸುರೇಶ ರಜಪೂತ, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರು ಜಾಧವ, ವಿಜಯಪುರ ಜಿಲ್ಲಾ ಕಾರ್ಯಾಧ್ಯಕ್ಷರು ಶಿವಾನಂದ ಲಮಾಣಿ, ಕೊಪ್ಪಳ ಜಿಲ್ಲಾಧ್ಯಕ್ಷ ಲಕ್ಷ್ಮಣ ನಾಯಕ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಾ. ಬಿ ಎಸ್ ರಾಠೋಡ, ಡಾ. ಗುಂಡಪ್ಪ ನಾಯಕ ನಿರೂಪನೆ ಮಾಡಿದರು, ಸುರೇಶ ಮಹಾರಾಜ ಪ್ರಾಸ್ತಾವಿಕವಾಗಿ ಮಾತನಾಡಿದವರು, ಮೋತಿಲಾಲ ಮಾಳಗಿಮನಿ, ಗೋಪಾಲ ಜಾಧವ, ಬಾಲಚಂದ್ರ ತುಳಸಿಮನಿ,  ಠಾಕೂರ ಜಾಧವ, ಅನಿಲ, ಕೃಷ್ಣಾ, ಈಶ್ವರ ನಾಯಕ,ಸಮಸ್ತ ಗದಗ ಜಿಲ್ಲೆಯ ಪ್ರತಿಯೊಂದು ತಾಂಡಾದ ನಾಯಕ ಮುಖಂಡರು ಉಪಸ್ಥಿತರಿದ್ದರು. ಸೇವಾಲಾಲ ಗೀತೆ ಹಾಡುವ ಮೂಲಕ ಕಾರ್ಯಕ್ರಮ ಚಾಲನೆ ನೀಡಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...

ಕೊಡಗು | ₹25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಿಲ್ಲಾ ವಿಮಾ ಅಧಿಕಾರಿ

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ...

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...

ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ...