ಗದಗ | ಸಫಾಯಿ ಕರ್ಮಚಾರಿಗಳ ಕಲ್ಯಾಣ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ

Date:

“ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯವಾದುದು. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಅವರ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ” ಎಂದು ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ ತಿಳಿಸಿದರು.

- Advertisement -

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸಫಾಯಿ ಕರ್ಮಚಾರಿಗಳ ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಫಾಯಿ ಕರ್ಮಚಾರಿಗಳಿಗೆ ನಿಯಮಿತವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಮತ್ತು ಅಗತ್ಯ ವೈದ್ಯಕೀಯ ಕಿಟ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು  ಪ್ರತಿಯೊಬ್ಬ ಕರ್ಮಚಾರಿಗೂ ಆಧುನಿಕ ಸುರಕ್ಷತಾ ಪರಿಕರಗಳಾದ ಗ್ಲೌಸ್, ಮಾಸ್ಕ್, ಬೂಟು ಮತ್ತು ಸಮವಸ್ತ್ರಗಳನ್ನು ವಿಳಂಬವಿಲ್ಲದೆ ಒದಗಿಸಲು ಸೂಚಿಸಲಾಯಿತು.

ಸಫಾಯಿ ಕರ್ಮಚಾರಿಗಳ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ಮತ್ತು ವಸತಿ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು ಕರ್ಮಚಾರಿಗಳ ಮಾಸಿಕ ವೇತನವನ್ನು ನಿಗದಿತ ಸಮಯದಲ್ಲಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವುದು ಮತ್ತು ಪ್ರತಿಯೊಬ್ಬರಿಗೂ ವಿಮಾ ಸೌಲಭ್ಯ  ಖಚಿತ ಪಡಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು

ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಕರ್ಮಚಾರಿಗಳು ನೇರವಾಗಿ ನಮ್ಮ ಗಮನಕ್ಕೆ ತರಬಹುದು ಎಂದು ತಿಳಿಸಿದರು. ಸಫಾಯಿ ಕರ್ಮಚಾರಿಗಳಿಗೆ ಮೀಸಲಿರುವ ವಸತಿ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಅರ್ಹರಿಗೆ ಮನೆಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ  ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ಧಿ, ಆರೋಗ್ಯ ತಪಾಸಣೆ, ವೇತನ ಪಾವತಿ ಮತ್ತು ಸರ್ಕಾರದ ಸೌಲಭ್ಯಗಳು ತಲುಪುತ್ತಿರುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಸಫಾಯಿ ಕರ್ಮಚಾರಿಗಳು ಎದುರಿಸುತ್ತಿರುವ ಸವಾಲುಗಳು, ವೇತನ ವಿಳಂಬ, ಆರೋಗ್ಯ ಸುರಕ್ಷತೆ ಮತ್ತು ಸರ್ಕಾರದ ವಿವಿಧ ಸೌಲಭ್ಯಗಳ ಅನುಷ್ಠಾನದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.

ಈ ಸಭೆಯಲ್ಲಿ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ. ಆರ್. ಮುಂಡರಗಿ, ಸಫಾಯಿ ಕರ್ಮಚಾರಿಗಳ ಸಂಘದ ನಾಮನಿರ್ದೇಶಿತ  ಸದಸ್ಯರಾದ ಎಸ್. ಎನ್. ಬಳ್ಳಾರಿ, ಬಿಳೆಯಲಿ, ಶರಣಪ್ಪ ಮೂಕಪ್ಪ ಪೂಜಾರ, ಶ್ರೀಮತಿ ರೇಣುಕಾ.ಸು. ದೊಡ್ಡಮನಿ, ಶ್ರೀಮತಿ ಅಂಜನಾದೇವಿ.ಎಮ್. ಮ್ಯಾಗೇರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...