ಗದಗ | ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು: ಡಾ. ನಾಗಲಕ್ಷ್ಮೀ ಚೌಧರಿ

Date:

“ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ಜಿಲ್ಲೆಯ ಮಹಿಳೆಯರು ದೌರ್ಜನ್ಯ ರಹಿತರಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದರು.

- Advertisement -

ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಇಂದು ಶುಕ್ರವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಜಿಲ್ಲೆ ಇವರ ಸಹಯೋಗದೊಂದಿಗೆ ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2013 (  POSH ACT ) ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಮಹಿಳೆಯರ ಯಶಸ್ವಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪುರುಷರ ಸಹಕಾರವೂ ಅಗತ್ಯವಾಗಿತ್ತದೆ. ಮಹಿಳೆಯರು ತಮಗಾದ ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. POST ACT  ಗಿಂತ ಮೊದಲೇ ಸಾಕಷ್ಟು ಕಾನೂನು ಮಹಿಳಾ ಸಬಲೀಕರಣಕ್ಕಾಗಿ ಜಾರಿಗೊಂಡಿವೆ. ಹೆಣ್ಣುಮಕ್ಕಳಿಗೆ ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯವಾಗುತ್ತಿದ್ದರೆ POST ACT  ನಡಿ ರಚಿತವಾಗಿರುವ ಸಮಿತಿಗೆ ದೂರು ಕೊಟ್ಟು ಪರಿಹಾರ ಕಂಡುಕೊಳ್ಳಬಹುದು. POST ACT  ಅಧಿನಿಯಮ ಜಾರಿಯಾದ ಬಗೆಯನ್ನು ವಿವರಿಸಿದ ಅವರು ಕಾಯ್ದೆಯ ದುರ್ಬಳಕೆಯಾಗಬಾರದು ಎಂದು ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, “ಕಾನೂನು ಸೇವಾ ಪ್ರಾದಿಕಾರದಿಂದ ವಿವಿಧ ಇಲಾಖೆಯ ಸಹಯೋಗದೊಂದಿಗೆ POSH  ACT ನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. POSH  ನ ಉದ್ದೇಶವನ್ನು ಎಲ್ಲರೂ ತಿಳಿದುಕೊಳ್ಳಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ತೊಂದರೆಯಾದರೆ ಅಲ್ಲಿಯೇ ಇರುವ ಕಮೀಟಿಗೆ ದೂರು ಕೊಡಬಹುದು. ಸಿವಿಲ್ ಕೋರ್ಟಗೆ ಇರುವ ಅಧಿಕಾರವೇ ಆ ಕಮೀಟಿಗೂ ಇರುತ್ತದೆ. ಈ ಕಾಯ್ದೆಯು ಸರ್ಕಾರಿ ಕ್ಷೇತ್ರವಲ್ಲದೇ ಖಾಸಗಿ, ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಸಂಬಂಧಿಸಿದ್ದಾಗಿರುತ್ತದೆ. ಒಂದು ವೇಳೆ ಕಾಯ್ದೆಯ ಉದ್ದೇಶಪೂರ್ವಕವಾದ ದುರ್ಬಳಕೆಯಾದರೆ ದೂರುದಾರರಿಗೂ ಶಿಕ್ಷೆಯಾಗುತ್ತದೆ” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ಮಹಿಳೆಯರ ಸಬಲೀಕರಣಕ್ಕಾಗಿ ಮೊದಲಿಗಿಂತ ಮೊದಲೇ ಸಾಕಷ್ಟು ಕಾನೂನು ಬಂದಿವೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆಗಾಗಿ, ಮಾನವೀಯತೆ ಇಲ್ಲದೇ ಮಹಿಳಯರ ಮೇಲೆ ದಬ್ಬಾಳಿಕೆಯಾದಾಗ ಅಂತಹ ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. ಅನ್ಯಾಯ ಮತ್ತು ದೌರ್ಜನ್ಯವನ್ನು ಸಂಬವಿಸಿದಾಗ ಮೂಕವಿಸ್ಮಿತರಾಗಿ ಇದ್ದು ಸಹಿಸಿಕೊಳ್ಳುವುದು ಸಹ ತಪ್ಪು. ದೌರ್ಜನ್ಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಟಿ.ಎಸ್. ಚಂದ್ರಿಕಾ ಅವರು ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ -2013 ರ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ , ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್, ಸೇರಿದಂತೆ ಸಂಘ ಸಂಸ್ಥೆಯವರು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ನಾಡಗೀತೆಯೊಂದಿಗೆ ಪ್ರಾರಂಭವಾದ ಕರ‍್ಯಕ್ರಮದಲ್ಲಿ ಮಲ್ಲಪ್ಪ ಹೊಸಳ್ಳಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ನಿರೂಪಣಾಧಿಕಾರಿ ಮಹಾಂತಸ್ವಾಮಿ ಪೂಜಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...