ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

Date:

“ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಇಂತಹ ಸ್ಪರ್ಧೆಗಳು ಯುವಜನರಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ, ನಾಯಕತ್ವ ಗುಣ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಸಹಕಾರಿಯಾಗುತ್ತವೆ ಯುವಜನರು ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತರಬೇಕು” ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರು ತಿಳಿಸಿದರು.

- Advertisement -

ಗದಗ ನಗರದ ಗದಗ ಬೆಟಗೇರಿಯ ಆದರ್ಶ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಭವನದಲ್ಲಿ ಮಂಗಳವಾರ  ನವಂಬರ್ (24) ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸಂಘಗಳ ಒಕ್ಕೂಟ, ಮೇರಾ ಯುವ ಭಾರತ,  ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಆದರ್ಶ ಶಿಕ್ಷಣ ಸಮಿತಿಯ ಶ್ರೀ ಡಿ.ಎಸ್. ಕುರ್ತಕೋಟಿ ಮೆಮೋರಿಯಲ್ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯ ಗದಗ ಬೆಟಗೇರಿ ಇವರ ಸಹಯೋಗದಲ್ಲಿ  ಗದಗ ಜಿಲ್ಲಾ ಮಟ್ಟದ ಯುವಜನೋತ್ಸವ -2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

“ಯುವಜನೋತ್ಸವದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸ್ಪರ್ಧಿಯೂ ಗೆಲುವು-ಸೋಲನ್ನು ಸಮಾನವಾಗಿ ಸ್ವೀಕರಿಸಿ, ತಮ್ಮ ಪ್ರತಿಭೆಯನ್ನು ಮತ್ತಷ್ಟು ಬೆಳೆಸಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿಯೂ ಸಾಕಷ್ಟು ಪ್ರತಿಭಾವಂತ ಯುವಕ-ಯುವತಿಯರಿದ್ದು, ಅವರಿಗೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ದೊರೆತಾಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನರ ಮೇಲಿದೆ. ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು” ಎಂದರು.

“ಯುವಜನರು ಸ್ಪರ್ಧೆಯಲ್ಲಿ ಪರಸ್ಪರ ಸಕ್ರಿಯ ಭಾಗಿತ್ವ ಅತಿಮುಖ್ಯ ಜನಪದ ಕ್ಷೇತ್ರವು ನಶಿಸಿ ಹೋಗಬಾರದು ಎಂಬ ನಿಟ್ಟಿನಲ್ಲಿ ಶಿಗ್ಗಾವಿ ಪಕ್ಕದಲಿರುವ ಹಾವೇರಿ ವಿಶ್ವವಿದ್ಯಾಲಯಕ್ಕೆ ಹಾವೇರಿ ಜಾನಪದ ವಿಶ್ವ ವಿದ್ಯಾಲಯ ಎಂಬ ಹೆಸರಿಟ್ಟಿರುವುದು ಸಂತಸ ಸಂಗತಿ” ಎಂದರು.

ವಿಕಸಿತ ಭಾರತ ನಿರ್ಮಾಣ 2047: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತ ನಿರ್ಮಾಣದಲ್ಲಿ ಹಿಂದುಳಿದ ರಾಷ್ಟ್ರ, ಪ್ರಗತಿ ಹೊಂದುತ್ತಿರುವಂತಹ ರಾಷ್ಟ್ರ, ಪ್ರಗತಿ ಹೊಂದಿದ ರಾಷ್ಟ್ರಗಳನ್ನಾಗಿ 3 ಭಾಗಗಳನ್ನಾಗಿ ವಿಂಗಡಿಸಲಾಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯ ವಿಕಸಿತ ಭಾರತ ಸಂಕಲ್ಪ ಸಾಕಾರಗೊಳ್ಳುವಲ್ಲಿ ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದು ಯುವಶಕ್ತಿಯ ಸದುಪಯೋಗ, ಪ್ರತಿಭೆ ಮತ್ತು ಕೌಶಲ್ಯಾಭಿವೃದ್ಧಿಯಿಂದ ಸಮರ್ಥ ಹಾಗೂ ಸ್ವಾವಲಂಬಿ ರಾಷ್ಟ್ರ ನಿರ್ಮಾಣ ಆಗಲಿಕೆ ಸಾಧ್ಯ” ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರು ತಿಳಿಸಿದರು.

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾಧ್ಯಕ್ಷ ರವಿಕಾಂತ ಅಂಗಡಿ ಮಾತನಾಡಿ, “ಯುವಜನರು ದೇಶದ ಭವಿಷ್ಯದ ಶಕ್ತಿಯಾಗಿದ್ದು, ಅವರಲ್ಲಿರುವ ಸೃಜನಶೀಲತೆ, ಕೌಶಲ್ಯ ಹಾಗೂ ಪ್ರತಿಭೆಯನ್ನು ಹೊರತರಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಯುವಕರು ಕೇವಲ ಸ್ಪರ್ಧೆಗಳಲ್ಲಿ ಭಾಗವಹಿಸುವುದಕ್ಕೆ ಸೀಮಿತವಾಗದೆ, ತಮ್ಮಲ್ಲಿರುವ ಕಲಾ ಪ್ರತಿಭೆಯನ್ನು ನಿರಂತರವಾಗಿ ಬೆಳೆಸಿಕೊಂಡು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಗುರಿ ಹೊಂದಬೇಕು” ಎಂದರು.

ಇದೇ ಸಂದರ್ಭದಲ್ಲಿ ಜನಪದ ಕಲಾವಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾಂಡಪ್ಪ ದೇವಲಪ್ಪ ಲಮಾಣಿ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಯುವ ಪ್ರತಿಭೆಗಳು ಯುವಜನೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕಲಾ ಪ್ರದರ್ಶನ ನೀಡಿವರು. ವಿವಿಧ ಕ್ಷೇತ್ರದ ಜನಪದ ಕಲಾವಿದರು ನಿರ್ಣಾಯಕರಾಗಿ ಪಾಲ್ಗೊಳ್ಳವರು.

ಡಾ. ವೆಂಕಟೇಶ್ ಆಲ್ಕೋಡ ಹಾಗೂ ತಂಡದವರಿಂದ  ನಾಡಗೀತೆ ಪ್ರಸ್ತುತ ಪಡಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಸರ್ವರನ್ನು ಸ್ವಾಗತಿಸಿದರು.  ಕಾರ್ಯಕ್ರಮವನ್ನು ಪ್ರೊ. ಬಾಹುಬಲಿ ಜೈನರು ನಿರೂಪಿಸಿ ವಂದಿಸಿದರು.

ಈ ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಣ ಸಮಿತಿಯ ಗೌರವ ಕಾರ್ಯದರ್ಶಿ ಎ.ಡಿ. ಗೋಡಗಿಂಡಿ, ಆದರ್ಶ ಶಿಕ್ಷಣ ಸಮಿತಿಯ ಪ್ರಾಚಾರ್ಯರು ರವಿ ಕುಲಕರ್ಣಿ,  ಜನಪದ ಕಲಾವಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾಂಡಪ್ಪ ದೇವಲಪ್ಪ ಲಮಾಣಿ, ಸೇರಿದಂತೆ ಆದರ್ಶ ಶಿಕ್ಷಣ ಸಮಿತಿ ಕಾಲೇಜಿನ ವಿದ್ಯಾರ್ಥಿಗಳು, ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಯುವ ಪ್ರತಿಭೆಗಳು, ವಿವಿಧ ಜನಪದ ಕಲಾವಿದರ ತಂಡದ ನಿರ್ಣಾಯಕರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ|ಜಿ.ಹೆಚ್.ನಾಗರಾಜ್ ಕೆಪಿಸಿಸಿಯ ನೂತನ ಖಜಾಂಚಿಯಾಗಿ ರುವುದು ಕಾಂಗ್ರೆಸ್ ವಲಯದಲ್ಲಿ ಒಂದು ಉತ್ಸಾಹ ತುಂಬಿದೆ : ಅನ್ವರ್ ಪಾಷ

ಹಿಂದುಳಿದ ಈಡಿಗ ಜನಾಂಗಕ್ಕೆ ಸೇರಿದ ಜಿ.ಹೆಚ್.ನಾಗರಾಜ್ ರವರು ಅವಿಭಾಜಿತ ಕೋಲಾರ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

ಬಾಗಲಕೋಟೆ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...