ಗದಗ | ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಯಲ್ಲಿ ಯುವಜನತೆ ಪಾಲ್ಗೊಳ್ಳಬೇಕು: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

Date:

“ಜಿಲ್ಲೆಯಲ್ಲಿ ‘ಭಾರತ ಜೋಡೋ ಯುವ ಸಂಘಗಳ’ ಸ್ಥಾಪನೆಯು ಯುವ ಸಮುದಾಯದಲ್ಲಿ ರಾಷ್ಟ್ರೀಯ ಭಾವನೆ, ಸಾಮಾಜಿಕ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಸೌಹಾರ್ದತೆ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಯಲ್ಲಿ ಯುವಜನತೆ ಪಾಲ್ಗೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

- Advertisement -

ಗದಗ ನಗರದ ಜಿಲ್ಲಾಡಳಿತ ಭವನದ ಕೇಸ್ವಾನ ವಿಡಿಯೋ ಕಾನ್ಫರೆನ್ಸ್ ಹಾಲ್ ದಲ್ಲಿ ಸೋಮವಾರ ಅಗಸ್ಟ್ (24)ರಂದು ಜರುಗಿದ ಭಾರತ ಜೋಡೋ ಯುವ ಸಂಘಗಳ ಸ್ಥಾಪನೆ ಕುರಿತು ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಯುವಜನರು ಸಮಾಜದ ಮುಖ್ಯವಾಹಿನಿಗೆ ಬಂದು ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಐಕ್ಯತೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಇಂತಹ ಸಂಘಟನೆಗಳು ಸಹಕಾರಿಯಾಗಲಿವೆ. ಗ್ರಾಮೀಣ ಮತ್ತು ನಗರ ಪ್ರದೇಶಗಳ ಯುವಕರು ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು” ಎಂದರು.

ಯುವ ಜನತೆಯಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಹೆಚ್ಚಿಸಲು ಈ ಸಂಘಗಳು ವೇದಿಕೆಯಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಗದಿತ ಕಾಲಮಿತಿಯೊಳಗೆ ಸಂಘಗಳ ರಚನೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

“ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಹಾಗೂ ಇತರೆ ಸಂಬಂಧಿತ ಇಲಾಖೆಯ ಸಿಬ್ಬಂದಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿ ಯಶಸ್ವಿಗೊಳಿಸಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಈ ಸಂಘಗಳ ಪ್ರಯೋಜನ ಪಡೆಯುವಂತೆ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ” ಎಂದು ಹೇಳಿದರು.

ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಯುವ ಸಂಘಗಳನ್ನು ರಚಿಸುವ ಪ್ರಕ್ರಿಯೆ, ಸಂಘಗಳ ಕಾರ್ಯವೈಖರಿ ಮತ್ತು ಮುಂದಿನ ಚಟುವಟಿಕೆಗಳ ರೂಪುರೇಷೆಗಳ ಕುರಿತು ವಿಸ್ತೃತವಾಗಿ ಸಭೆಯಲ್ಲಿ ಚರ್ಚಿಸಲಾಯಿತು. ಯುವಕರು ದುಶ್ಚಟಗಳಿಂದ ದೂರ ಉಳಿದು, ರಚನಾತ್ಮಕ ಸಾಮಾಜಿಕ ಕಾರ್ಯಗಳಲ್ಲಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅಧಿಕಾರಿಗಳಿಗೆ ಮತ್ತು ಸಂಘಟಕರಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ. ಆರ್. ಮುಂಡರಗಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಎಮ್. ವಿ. ಚಳಗೇರಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಗದಗ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾ ಅಧಿಕಾರಿ ಡಾ. ಎಚ್. ಎಸ್. ಜಿನಗ, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ತಹಶೀಲ್ದಾರ್ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...