ಗದಗ | ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು: ಶಾಸಕ ಎಸ್.ವಿ. ಸಂಕನೂರ

Date:

“ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಯುವಕರೇ ದೇಶದ ನಿಜವಾದ ಸಂಪತ್ತು ಹಾಗೂ ಆಶಾಕಿರಣವಾಗಿದ್ದಾರೆ. ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳುವುದರ ಜೊತೆಗೆ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು” ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.

- Advertisement -

ಗದಗ ಪಟ್ಟಣದಲ್ಲಿ ಇಂದ ಶುಕ್ರವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಜಿಲ್ಲಾಡಳಿತದಲ್ಲಿ ಆಯೋಜಿಸಲಾದ ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

“ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ. ದೇಶವನ್ನು ಮುನ್ನಡೆಸುವ ಶಕ್ತಿ ಯುವಜನತೆಯಲ್ಲಿದೆ. ಯುವಕರಲ್ಲಿ ನಾಯಕತ್ವದ ಗುಣ, ಸಾಮಾಜಿಕ ಕಳಕಳಿ ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಬೆಳೆಸುವ ಉದ್ದೇಶದಿಂದ ಯುವ ಸಂಸತ್ತನ್ನು ಆಯೋಜಿಸಲಾಗಿದೆ. ಯುವಕರು ದೇಶದ ಆಡಳಿತ ವ್ಯವಸ್ಥೆ, ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನಿಕ ಮೌಲ್ಯಗಳ ಕುರಿತು ಆಳವಾದ ಅರಿವು ಹೊಂದಬೇಕು” ಎಂದರು.

“ಸಮಾಜದಲ್ಲಿ ಅರ್ಹತೆ ಮತ್ತು ಸಾಮರ್ಥ್ಯ ಹೊಂದಿರುವವರಿಗೆ ಸೂಕ್ತ ಸ್ಥಾನಮಾನ ಹಾಗೂ ಅವಕಾಶಗಳನ್ನು ಕಲ್ಪಿಸಿದಾಗ ಮಾತ್ರ ವ್ಯವಸ್ಥೆ ಸರಿಯಾದ ದಿಕ್ಕಿನಲ್ಲಿ ಸಾಗಲು ಸಾಧ್ಯ. ಸರ್ಕಾರದ ಆದ್ಯತೆಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಮಾತನಾಡಿ, “ದೇಶದ ಯುವಜನರಲ್ಲಿ ಸರ್ಕಾರದ ಕಾರ್ಯವೈಖರಿ ಹಾಗೂ ಕಾನೂನು ವ್ಯವಸ್ಥೆಯ ಕುರಿತು ಸಮಗ್ರ ತಿಳುವಳಿಕೆ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ. ದೇಶದ ಆಡಳಿತ ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ, ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಜವಾಬ್ದಾರಿಗಳೇನು ಎಂಬುದರ ಅರಿವು ಯುವಜನರಿಗೆ ಇರಬೇಕು. ವಿರೋಧ ಪಕ್ಷದ ಕೆಲಸ ಕೇವಲ ಆಡಳಿತ ಪಕ್ಷವನ್ನು ಟೀಕಿಸುವುದಕ್ಕೆ ಸೀಮಿತವಾಗಬಾರದು. ಆಡಳಿತ ಪಕ್ಷ ಉತ್ತಮ ಕಾರ್ಯಗಳನ್ನು ಕೈಗೊಂಡಾಗ ಅವುಗಳನ್ನು ಮುಕ್ತ ಮನಸ್ಸಿನಿಂದ ಪ್ರೋತ್ಸಾಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ಜಿಲ್ಲಾ ಜಾಗೃತ ಸಮಿತಿ ಮತ್ತು ಸಫಾಯಿ ಕರ್ಮಚಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಡಾ. ನಂದಾ ಹಣಬರಟ್ಟಿ ಸರ್ವರನ್ನು ಸ್ವಾಗತಿಸಿದರು. ಎಂ.ಎ.ಯರಗುಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಮನೆಯವರಿಗೆ ಚಾಕು ತೋರಿಸಿ ಬೆದರಿಸಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ...

ವಿಶೇಷ ಶಿಕ್ಷಕರ ರಾಜ್ಯ ಪ್ರಶಸ್ತಿ: ದಾವಣಗೆರೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನ

2026-27ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯುತ್ತಿರುವ ಸಂಸ್ಥೆಗಳು, ವಿಕಲಚೇತನರ ಕ್ಷೇತ್ರದಲ್ಲಿ...

ದಾವಣಗೆರೆ | ದೀಪಾವಳಿ ಪ್ರಯುಕ್ತ ‘ದೀಪ ಸಂಜೀವಿನಿ’ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು...

ರಾಯಚೂರು | ದಲಿತರ ಮೇಲಿನ ಹಲ್ಲೆ ಖಂಡಿಸಿ ನ. 8ರಂದು ‘ತಿಡಿಗೋಳ ಚಲೋ’ ಬೈಕ್ ರ್ಯಾಲಿ

ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಸಾಮೂಹಿಕ ಹಲ್ಲೆ...