ಗದಗ | ಯುವಜನತೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು: ಎಸ್ ವ್ಹಿ ಸಂಕನೂರ

Date:

ದೇಶದ ನಿಜವಾದ ಆಸ್ತಿ ಎಂದರೆ ಈಗಿನ ಯುವಕರು ಮತ್ತು ವಿದ್ಯಾರ್ಥಿಗಳು. ಹಾಗಾಗಿ ಯುವಜನರು ಸ್ವಯಂ ಪ್ರೇರಣೆಯಿಂದ ದುಶ್ಚಟಗಳಿಂದ ದೂರವಿದ್ದು, ವ್ಯಸನಮುಕ್ತ ಸಮಾಜ ಹಾಗೂ ನಶಾಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್ ವ್ಹಿ ಸಂಕನೂರ ಅವರು ತಿಳಿಸಿದರು.

- Advertisement -

ಬೆಟಗೇರಿ ಆದರ್ಶ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಭವನದಲ್ಲಿ ಶ್ರೀ ಮ.ನಿ.ಪ್ರ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆದರ್ಶ ಶಿಕ್ಷಣ ಸಮಿತಿಯ ಶ್ರೀ ಡಿ ಎಸ್ ಕುರ್ತಕೋಟಿ ಮೆಮೋರಿಯಲ್ ಪಿಯು ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ವ್ಯಸನ ಮುಕ್ತ ದಿನಾಚರಣೆ-2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಆಗಸ್ಟ್ 1 ಪರಮಪೂಜ್ಯ ಮಹಾಂತ ಶಿವಯೋಗಿಗಳ ಜನ್ಮದಿನ. 1975 ರಿಂದ ಸುಮಾರು 42 ವರ್ಷಗಳ ಕಾಲ ‘ಮಹಾಂತ ಜೋಳಿಗೆ’ ಕಾರ್ಯಕ್ರಮದ ಮೂಲಕ ಮನೆ ಮನೆಗೆ ತೆರಳಿ, ಜನರ ಕೆಟ್ಟ ಅಭ್ಯಾಸಗಳನ್ನು (ಸಿಗರೇಟ್, ತಂಬಾಕು, ಮದ್ಯಪಾನ ಇತ್ಯಾದಿ) ಜೋಳಿಗೆಗೆ ಹಾಕಿಸಿಕೊಂಡು, ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಇಡೀ ಜೀವನವನ್ನೇ ಅರ್ಪಿಸಿದ ಮಹಾನ್ ಚೇತನ ಮಹಾಂತ ಶಿವಯೋಗಿಗಳು. ಅವರ ಅಪಾರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಆಗಸ್ಟ್ 1ರಂದು ಕರ್ನಾಟಕ ಸರ್ಕಾರ ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸುತ್ತಿದೆ” ಎಂದು ಹೇಳಿದರು.

ಸ್ವಾಮಿ ವಿವೇಕಾನಂದರ ನುಡಿಗಳನ್ನು ಸ್ಮರಿಸಿದ ಶಾಸಕರು, “ದೇಶದ ಭವಿಷ್ಯದ ಆಶಾಕಿರಣ ಯುವಕರಾಗಿದ್ದಾರೆ. ಆದರೆ ಇಂದು ಅನೇಕ ಯುವಕರು ಮದ್ಯಪಾನ, ಧೂಮಪಾನ, ತಂಬಾಕು ಸೇವನೆ ಹಾಗೂ ಮಾದಕ ದ್ರವ್ಯಗಳ (ಡ್ರಗ್ಸ್) ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿ. ಧೂಮಪಾನದಿಂದ ಶ್ವಾಸಕೋಶ, ಮದ್ಯಪಾನದಿಂದ ಲಿವರ್ ಹಾಗೂ ಮಾದಕ ದ್ರವ್ಯಗಳಿಂದ ನರಮಂಡಲ ಸಂಪೂರ್ಣ ಹಾಳಾಗುತ್ತದೆ. ಇದರಿಂದ ಕುಟುಂಬಗಳು ಬೀದಿಗೆ ಬೀಳುತ್ತಿದ್ದು, ದೇಶದ ಪ್ರಗತಿಗೆ ಮಾರಕವಾಗುತ್ತಿದೆ” ಎಂದರು.

ದುಶ್ಚಟಗಳ ತೀವ್ರತೆಯನ್ನು ವಿವರಿಸಿದ ಅವರು, “ನಮ್ಮ ದೇಶ ಹಾಗೂ ರಾಜ್ಯದಲ್ಲಿ ಕೋಟ್ಯಂತರ ಜನರು ಈ ಕೆಟ್ಟ ಅಭ್ಯಾಸಗಳಿಗೆ ಒಳಗಾಗಿದ್ದಾರೆ. ತಂಬಾಕು/ಧೂಮಪಾನದಿಂದ ವರ್ಷಕ್ಕೆ ಲಕ್ಷಾಂತರ ಜನರು, ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಸೇವನೆಯಿಂದ ಸಾವಿರಾರು ಜನರು ಅಕಾಲಿಕ ಮರಣ ಹೊಂದುತ್ತಿದ್ದಾರೆ. ಸರ್ಕಾರ ‘ನಶಾಮುಕ್ತ ಭಾರತ ಅಭಿಯಾನ’(NMBA) ಹಾಗೂ ಬಿಗಿ ಕಾನೂನುಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದರೂ, ಜನರ ಸ್ವಯಂ ಪ್ರೇರಣೆ ಹಾಗೂ ಜಾಗೃತಿ ಇಲ್ಲದೆ ಇದನ್ನು ಸಂಪೂರ್ಣ ತಡೆಯಲು ಸಾಧ್ಯವಿಲ್ಲ” ಎಂದು ವಿಧಾನ ಪರಿಷತ್ ಶಾಸಕ ಎಸ್. ವ್ಹಿ. ಸಂಕನೂರ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋವಿಜ್ಞಾನ ಸಹ ಪ್ರಧ್ಯಾಪಕರಾದ ಡಾ. ಫಕೀರಪ್ಪ ಗಾಣಿಗೇರ ಮಾತನಾಡಿ, ಮಾದಕ ದ್ರವ್ಯ ವ್ಯಸನ ದುಶ್ಚಟವಲ್ಲ, ಅದೊಂದು ಮೆದುಳಿನ ಕಾಯಿಲ ಎಂದ ಅವರು ದೇಶದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ವ್ಯಸನದ ಭೀಕರತೆ ಹಾಗೂ ಅದರ ಹಿಂದಿನ ವೈಜ್ಞಾನಿಕ ಕಾರಣಗಳ ಕುರಿತು ಅವರು ಸವಿಸ್ತಾರವಾಗಿ ಬೆಳಕು ಚೆಲ್ಲಿದರು.

“ಭಾರತದಲ್ಲಿ ಸುಮಾರು 16 ಕೋಟಿ ಜನರು ಮದ್ಯಪಾನ ಸಂಬಂಧಿತ ತೊಂದರೆಗಳಿಂದ ಬಳಲುತ್ತಿದ್ದು, ಅವರಲ್ಲಿ 6 ಕೋಟಿ ಜನ ತೀವ್ರ ಚಟಕ್ಕೆ (ಅಡಿಕ್ಷನ್) ಒಳಗಾಗಿದ್ದಾರೆ. ಪ್ರತಿವರ್ಷ ಸುಮಾರು 15 ಲಕ್ಷ ಮಂದಿ ಮದ್ಯಪಾನ ಜನ್ಯ ಕಾಯಿಲೆಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ದೇಶದಲ್ಲಿ 3 ರಿಂದ 4 ಕೋಟಿ ಜನರು ಗಾಂಜಾ ಬಳಸುತ್ತಿದ್ದು, 25 ಲಕ್ಷಕ್ಕೂ ಅಧಿಕ ಮಂದಿ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ವೈದ್ಯರ ಚೀಟಿ (Prescription) ಇಲ್ಲದೆ ನೋವು ನಿವಾರಕ ಮಾತ್ರೆಗಳನ್ನು (Opioids) ಅತಿಯಾಗಿ ಸೇವಿಸುವುದರಿಂದ 77 ಲಕ್ಷ ಜನರು ನರ ಸಂಬಂಧಿತ ಹಾಗೂ ಮಾನಸಿಕ ತೊಂದರೆ ಅನುಭವಿಸುತ್ತಿದ್ದಾರೆ.
ಸುಮಾರು 18 ರಿಂದ 20 ಲಕ್ಷ ಜನ ನರಗಳಿಗೆ ಇಂಜೆಕ್ಷನ್ ಮೂಲಕ ಮಾದಕ ದ್ರವ್ಯ ತೆಗೆದುಕೊಳ್ಳುತ್ತಿದ್ದು, ಕಲುಷಿತ ಸೂಜಿಗಳ ಬಳಕೆಯಿಂದ 5 ರಿಂದ 6 ಲಕ್ಷ ಜನರು ಹೆಪಟೈಟಿಸ್ ಹಾಗೂ ಹೆಚ್‌ಐವಿಯಂತಹ ಸಾಂಕ್ರಾಮಿಕ ರೋಗಗಳಿಗೆ ಈಡಾಗುತ್ತಿದ್ದಾರೆ” ಎಂದು ಹೇಳಿದರು.

“10 ರಿಂದ 15 ವರ್ಷದ ಸುಮಾರು 20 ಲಕ್ಷ ಮಕ್ಕಳು ಈ ವ್ಯಸನಕ್ಕೆ ತುತ್ತಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಸಿಗರೇಟ್, ಮದ್ಯ ಸಿಗದಿದ್ದಾಗ ಮಕ್ಕಳು ಸುಲಭವಾಗಿ ಸಿಗುವ ವೈಟ್ನರ್ ಪೇಂಟ್ ಥಿನ್ನರ್, ಪಂಕ್ಚರ್ ಸೊಲ್ಯೂಷನ್ ಹಾಗೂ ಪೆಟ್ರೋಲ್ ವಾಸನೆ ಗ್ರಹಿಸುವ ಮೂಲಕ ಮಾದಕ ಚಟಕ್ಕೆ ಬೀಳುತ್ತಿದ್ದಾರೆ. ಮಾದಕ ವ್ಯಸನ ಎನ್ನುವುದು ಕೇವಲ ವ್ಯಕ್ತಿಯ ವ್ಯಕ್ತಿತ್ವದ ದೋಷ ಅಥವಾ ನಡವಳಿಕೆಯ ತಪ್ಪಲ್ಲ. ಇದು ಮೆದುಳಿನಲ್ಲಿ ಉಂಟಾಗುವ ಜೈವಿಕ ಹಾಗೂ ರಾಸಾಯನಿಕ ಬದಲಾವಣೆಯ ಫಲಿತಾಂಶ” ಎಂದರು.

“ಆಹಾರ ಸೇವನೆ ಅಥವಾ ಸಂತೋಷದ ಕೆಲಸ ಮಾಡಿದಾಗ ಮೆದುಳಿನಲ್ಲಿ ಸ್ರವಿಸುವ ಡೋಪಮೈನ್ ರಾಸಾಯನಿಕಕ್ಕಿಂತ, ಮಾದಕ ದ್ರವ್ಯಗಳನ್ನು ಸೇವಿಸಿದಾಗ ನೂರಾರು ಪಟ್ಟು ಹೆಚ್ಚು ಡೋಪಮೈನ್ ಬಿಡುಗಡೆಯಾಗುತ್ತದೆ. ಆರಂಭದಲ್ಲಿ ಕಡಿಮೆ ಪ್ರಮಾಣದ ಡ್ರಗ್ಸ್ ನೀಡುವ ಖುಷಿ, ದಿನಕಳೆದಂತೆ ಸಿಗುವುದಿಲ್ಲ. ಹೀಗಾಗಿ ಪ್ರಮಾಣವನ್ನು ಹೆಚ್ಚಿಸುತ್ತ ಹೋಗಬೇಕಾಗುತ್ತದೆ. ಒಂದು ವೇಳೆ ಮಾದಕ ವಸ್ತು ಸಿಗದಿದ್ದರೆ ಕೈ-ಕಾಲು ನಡುಕ, ತೀವ್ರ ಕಿರಿಕಿರಿ ಹಾಗೂ ಮಾನಸಿಕ ರಸಭಂಗದಂತಹ ವಿತ್‌ಡ್ರಾವಲ್ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ” ಎಂದು ಹೇಳಿದರು.

“ದೇಶದಿಂದ ಡ್ರಗ್ಸ್ ಹಾವಳಿಯನ್ನು ನಿರ್ಮೂಲನೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ನಶಾ ಮುಕ್ತ ಭಾರತ’ದಂತಹ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಇದನ್ನು ಯಶಸ್ವಿಗೊಳಿಸಲು ಪ್ರತಿಯೊಂದು ಇಲಾಖೆಯೂ ಕೈಜೋಡಿಸಬೇಕಾಗಿದೆ. ಮಾದಕ ವಸ್ತುಗಳ ಸೇವನೆಯಿಂದ ಖಿನ್ನತೆ, ಉತ್ಸಾಹಹೀನತೆ, ನಿದ್ರಾಹೀನತೆ ಮತ್ತು ತೀವ್ರ ಭೀತಿ/ಆತಂಕದಂತಹ ಹಲವು ಮಾನಸಿಕ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಯಾವುದೇ ಪೂರ್ವ ಮಾನಸಿಕ ಅನಾರೋಗ್ಯದ ಹಿನ್ನೆಲೆ ಇಲ್ಲದ ವ್ಯಕ್ತಿಯೂ ಕೂಡ ಕೇವಲ ಒಮ್ಮೆ ಗಾಂಜಾ ಸೇವನೆ ಮಾಡುವುದರಿಂದಲೂ ತೀವ್ರ ಪ್ರಮಾಣದ ಮಾನಸಿಕ ಕಾಯಿಲೆಗೆ ತುತ್ತಾಗುವ ಅಪಾಯವಿರುತ್ತದೆ” ಎಂದು ಹೇಳಿದರು.

“ರೋಗಿಗಳು ಆಸ್ಪತ್ರೆಗೆ ಬರುವ ಹಂತ ತಲುಪುವ ಮುನ್ನವೇ, ಮನೆ ಮತ್ತು ಶಾಲೆಗಳ ಮಟ್ಟದಲ್ಲೇ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸಿ ತಡೆಗಟ್ಟುವ ಪ್ರಯತ್ನಗಳಾಗಬೇಕು. ಯಾರಿಗಾದರೂ ವ್ಯಸನದ ಸಮಸ್ಯೆಗಳಿದ್ದರೆ ಅಥವಾ ಸಂಕೋಚದಿಂದ ನೇರವಾಗಿ ವೈದ್ಯರನ್ನು ಭೇಟಿಯಾಗಲು ಸಾಧ್ಯವಾಗದಿದ್ದರೆ, ಸರ್ಕಾರಿ ಉಚಿತ ಸಹಾಯವಾಣಿಯಾದ ‘ಟೆಲಿ-ಮಾನಸ’ 24×7 ಸಂಖ್ಯೆಗೆ ಕರೆ ಮಾಡಿ ಸೂಕ್ತ ಆಪ್ತಸಮಾಲೋಚನೆ ಹಾಗೂ ವೈದ್ಯಕೀಯ ನೆರವು ಪಡೆಯಬಹುದು” ಎಂದರು.

ಸಮಾಜಕ್ಕೆ ಕರೆ:

“ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಸಮಾಜದಲ್ಲಿ ಜಾಗೃತಿ ಮೂಡಿಸುವ ಮೂಲಕ “Say No to Drugs, Yes to Life” (ಡ್ರಗ್ಸ್‌ಗೆ ಬೇಡ ಎನ್ನಿ, ಜೀವನಕ್ಕೆ ಹೌದು ಎನ್ನಿ) ಎಂಬ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಾದಕ ವ್ಯಸನಿಗಳನ್ನು ಸಮಾಜದಲ್ಲಿ ಕೀಳಾಗಿ ಕಾಣುವ ಅಥವಾ ನಿಂದಿಸುವ ಮೂಢನಂಬಿಕೆಯನ್ನು ಬಿಡಬೇಕು. ಆರಂಭಿಕ ಹಂತದಲ್ಲೇ ಕುಟುಂಬಸ್ಥರು ಹಾಗೂ ಸ್ನೇಹಿತರು ಇಂತಹ ಬದಲಾವಣೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೈದ್ಯಕೀಯ ಕೌನ್ಸೆಲಿಂಗ್ ಹಾಗೂ ನರರೋಗ ಚಿಕಿತ್ಸೆ ಕೊಡಿಸುವುದರಿಂದ ಮಾತ್ರವೇ ದೇಶವನ್ನು “ವ್ಯಸನ ಮುಕ್ತ” ಮಾಡಲು ಸಾಧ್ಯ” ಎಂದು ಕೆ ಎಚ್ ಪಾಟೀಲ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋವಿಜ್ಞಾನ ಸಹ ಪ್ರಧ್ಯಾಪಕ ಡಾ. ಫಕೀರಪ್ಪ ಗಾಣಿಗೇರ ಕರೆ ನೀಡಿದರು.

ಇದನ್ನೂ ಓದಿದ್ದೀರಾ? ಯಾದಗಿರಿ | ಮಕ್ಕಳ ಹಕ್ಕು, ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಕಾರ್ಯಕ್ರಮಕ್ಕೂ ಮುನ್ನ ಕಾಲೇಜಿನ ಪ್ರಾಂಶುಪಾಲರಾದ ಆರ್. ಆರ್ ಕುಲಕರ್ಣಿ ಅವರು ವ್ಯಸನ ಮುಕ್ತ ದಿನಾಚರಣೆಯ 2026ರ ಕುರಿತು ಪ್ರತಿಜ್ಞಾವಿಧಿ ಭೋದಿಸಿದರು. ರಾಜ್ಯ ಪ್ರಶಸ್ತಿ ವಿಜೇತ ಜನಪದ ಕಲಾವಿದ ವೀರಣ್ಣ ಅಂಗಡಿ ದುಶ್ಚಟಗಳ ದುಷ್ಟಪರಿಣಾಮಗಳ ಕುರಿತು ಸ್ವರಚಿತ ಗೀತೆ ಪ್ರಸ್ತುತ ಪಡಿಸಿದರು. ಆದರ್ಶ ಶಿಕ್ಷಣ ಸಮಿತಿಯ ಕಾಲೇಜು ವಿದ್ಯಾರ್ಥಿಗಳಿಂದ ವ್ಯಸನ ಮುಕ್ತ ದಿನಾಚರಣೆಯ 2026 ಕುರಿತು ಕಿರು ನಾಟಕ ಪ್ರದರ್ಶನ ನಡೆಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಜಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಆದರ್ಶ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎ.ಡಿ. ಗೋಡಕಿಂಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ .ಬಿ. ಮಡ್ಲೂರ, ಬೆಟಗೇರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ(ಪಿ.ಎಸ್.ಐ ) ಲಕ್ಷ್ಮಣ ಅರಿ ಆದರ್ಶ ಶಿಕ್ಷಣ ಸಮಿತಿಯ ಪ್ರಾದ್ಯಪಕ ಬಾಹುಬಲಿ ಜೈನರು, ಕಾಲೇಜಿನ ಉಪನ್ಯಾಸಕರು, ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...