ಗದಗ | ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

Date:

ಕರ್ನಾಟಕ ರಾಜ್ಯ ಗ್ರಾಮಪಂಚಾಯತ ನೌಕರರ ಸಂಘ (ಸಿಐಟಿಯು) ಗದಗ ಜಿಲ್ಲಾ ಸಮಿತಿ ವತಿಯಿಂದ ಗ್ರಾಮ ಪಂಚಾಯತ ನೌಕರರ ಬೇಡಿಕೆಗಳನ್ನು ಇತ್ಯರ್ಥಪಡಿಸುವಂತೆ ಗದಗ ಪಟ್ಟಣದ ಜಿಲ್ಲಾಡಳಿತ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ ಗದಗ ಇವರ ಮುಖಾಂತರ ಮುಖ್ಯ ಕಾರ್ಯದರ್ಶಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಬೆಂಗಳೂರುವರಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ರುದ್ರಪ್ಪ ಕಂದಗಲ್ಲ ಜಿಲ್ಲಾಧ್ಯಕ್ಷರು ಸಿಐಟಿಯು ಮಾತನಾಡಿದ “ಗ್ರಾಮ ಪಂಚಾಯತ ನೌಕರರ ಬೇಡಿಕೆಗಳಿಗಾಗಿ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಭರವಸೆ ಕೊಟ್ಟು ಮೂರು ತಿಂಗಳು ಗತಿಸಿದರೂ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳು ಈಡೇರಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ಎಲ್ಲ ನೌಕರರಿಗೆ ಐದು ಸಾವಿರ ವೇತನ ಹೆಚ್ಚಳ ಮಾಡಿ ಇಲಾಖೆಯಿಂದ ಆದೇಶ ಹೊರಡಿಸಬೇಕು. ನೌಕರರು ನಿವೃತ್ತಿ/ನಿಧನ ಹೊಂದಿದರೆ ಅವರಿಗೆ ಇಡಗಂಟು ಆರು ಲಕ್ಷ ರೂ ನೀಡಬೇಕು.  ಸೇವಾ ಹಿರಿತನದ ಆಧಾರದಲ್ಲಿ ವೇತನ ನೀಡಬೇಕು. ತಾವು ಭರವಸೆ ನೀಡಿದ ಭಾಗವಾಗಿ ಸ್ವಚ್ಛವಾಹಿನಿ ನೌಕರರ ಸಭೆಯನ್ನು ಮಾಡಿ ಅವರ ಪ್ರಮುಖ ಬೇಡಿಕೆಗಳನ್ನು ಇತ್ಯರ್ಥಪಡಿಸಬೇಕು” ಎಂದು ಒತ್ತಾಯಿಸಿದರು.

“ಪ್ರತಿಯೊಂದು ಪಂಚಾಯತಿಗೆ ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ತುಂಬುವುದು.  ಕಳೆದ ಹದಿನೆಂಟು ಇಪ್ಪತ್ತು ವರ್ಷಗಳಿಂದ ಡಾಟಾ ಎಂಟ್ರಿ ಆಪರೇಟರ್‌ಗಳಾಗಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಅನುಮೋದನೆ ನೀಡಬೇಕು. ಎರಡನೇ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ ಆಗಬೇಕು” ಎಂದು ಒತ್ತಾಯಿಸಿದರು.

“ಈಗಾಗಲೇ ಆರೋಗ್ಯದ ಕುರಿತು ಸಿಬ್ಬಂದಿಗಳ ಮಾಹಿತಿಗಾಗಿ ಫಾರ್ಮೆಟ್ ಕಳಿಸಿದ್ದೀರಿ. ಅದರಲ್ಲಿ ಗುತ್ತಿಗೆ, ಹೊರಗುತ್ತಿಗೆ, ಗೌರವಧನದ, ಕಾರ್ಮಿಕರ ಮಾಹಿತಿ ನೀಡಲು ತಿಳಿಸಿದ್ದೀರಿ. ಆದರೆ ಈ ಫಾರ್ಮೆಟ್‌ನಲ್ಲಿ ಪಂಚಾಯತ ನೌಕರರೆಂದು ಮಾಹಿತಿ ಇಲ್ಲಾ ಇದನ್ನು ಸರಿಪಡಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು. 

“ಈ ಮನವಿಗೂ ತಾವು ಸ್ಪಂದಿಸದಿದ್ದರೆ ಮುಂದೆ ನಮ್ಮ ಹೋರಾಟ ಬೃಹತ್ ಪ್ರಮಾಣದಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಈ ಹೋರಾಟದಲ್ಲಿ ಏನಾದರೂ ಅನಾಹುತಗಳಾದರೆ ಇದಕ್ಕೆ ನೇರವಾಗಿ ಆರ್‌ಡಿಪಿಆರ್ ಇಲಾಖೆಯೆ ಹೊಣೆ ಆಗುತ್ತದೆ. ಕೂಡಲೆ ತಾವೇ ಒಪ್ಪಿಕೊಂಡ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ಪೀರು ರಾಠೋಡ, ರುದ್ರಪ್ಪ ಕಂದಗಲ್ಲ, ಮಹಾಂತೇಶ ದೊಡ್ಡವಾಡ, ಬಸವರಾಜ ಅರ್ಕಸಾಲಿ, ಬಸವರಾಜ ಮೇವುಂಡಿ, ಜಗದೀಶ ವಾಲ್ಮೀಕಿ, ರಮೇಶ ವಾಸನ, ಮುತ್ತು ಅರಹುಣಸಿ, ಮರಲಿಂಗಪ್ಪ ಮುತಾರಿ, ರವಿ ಖೋಡೆ, ಪ್ರಕಾಶ ನರೇಗಲ್ಲ, ಬಸಯ್ಯ ಜಂಗಮರ, ರುದ್ರಪ್ಪ ಹೈನಾಪೂರ, ಪ್ರಕಾಶ ಚಲವಾದಿ, ಮುದಕಪ್ಪ, ಕರಿಯಪ್ಪ ಕಾಳೆ, ನೀಲಮ್ಮ ಬರದ್ವಾಡ, ರುಕ್ಮೀಣಿ ಮಿನಗನವರ ಸೇರಿದಂತೆ ಗ್ರಾಮ ಪಂಚಾಯತ ನೌಕರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...