ಗದಗ | ಬುದ್ಧನ ಶಾಂತಿ ಮಂತ್ರ ಇಂದಿನ ಜಗತ್ತಿಗೆ ಅನಿವಾರ್ಯ: ಸಚಿವ ಎಚ್. ಕೆ. ಪಾಟೀಲ

Date:

“ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡಗಳು ಕವಿದಿರುವ ಇಂದಿನ ಅಕ್ಷರಶಃ ವಿಷಮ ಪರಿಸ್ಥಿತಿಯಲ್ಲಿ ಭಗವಾನ್ ಬುದ್ಧನ ಶಾಂತಿ ಮತ್ತು ಸಹಬಾಳ್ವೆಯ ಸಂದೇಶಗಳು ಹಿಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ. ಬುದ್ಧನ ಶಾಂತಿ, ಮಂತ್ರ ಇಂದಿನ ಜಗತ್ತಿಗೆ ಅನಿವಾರ್ಯ” ಎಂದು ರಾಜ್ಯದ ಕಾನೂನು ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು,ಪ್ರವಾಸೋದ್ಯಮ ಇಲಾಖೆಯ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಹೇಳಿದರು.

- Advertisement -

ಗದಗ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬುದ್ಧನ ತತ್ವಗಳು ಕೇವಲ ಒಂದು ಧರ್ಮ ಅಥವಾ ಪ್ರದೇಶಕ್ಕೆ ಸೀಮಿತವಾಗಿಲ್ಲ, ಅವು ಇಡೀ ಜಗತ್ತಿನ ಆಸ್ತಿ ಎಂದು ಬಣ್ಣಿಸಿದರು. ಬುದ್ಧ ಶಾಂತಿಯ ಸಂಕೇತ. ಬುದ್ಧ ಎಂದರೆ ಕಣ್ಣು ಮುಚ್ಚಿ ಕುಳಿತ ಶಾಂತಿ ಮೂರ್ತಿ ಮಾತ್ರವಲ್ಲ, ಆತ ಜಗತ್ತಿಗೆ ಏಕಾಗ್ರತೆ ಮತ್ತು ಸಮಾನತೆಯ ಪಾಠ ಕಲಿಸಿದ ಮಹಾಗುರು. ಸಮಾಜದಲ್ಲಿ ಗಂಡು-ಹೆಣ್ಣು, ಶ್ರೀಮಂತ-ಬಡವ ಎಂಬ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಸಮಸಮಾಜದ ಕನಸನ್ನು ಬುದ್ಧ ಅಂದೇ ಕಂಡಿದ್ದರು. ಇಂದಿನ ರಾಜಕೀಯ ನಾಯಕರು ಒಬ್ಬರನ್ನೊಬ್ಬರು ಕೊಲ್ಲುವ, ದ್ವೇಷಿಸುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಆದರೆ, ಭಾರತವು ವಿವಿಧ ಜಾತಿ, ಧರ್ಮ ಮತ್ತು ಪಂಥಗಳ ನಡುವೆಯೂ ಬುದ್ಧನ ಶಾಂತಿ ಮಂತ್ರದ ಅಡಿಯಲ್ಲಿ ಒಗ್ಗಟ್ಟಿನಿಂದ ಸಾಗುತ್ತಿದೆ” ಎಂದು ಹೆಮ್ಮೆಯಿಂದ ನುಡಿದರು.

“ಇಂದಿನ ಜಗತ್ತಿಗೆ ಬುದ್ಧನ ಶಾಂತಿ ಮಂತ್ರ ಅತಿ ಅವಶ್ಯಕವಾಗಿದೆ. ಪತ್ರಿಕೆಯೊಂದರಲ್ಲಿ ಪ್ರಕಟವಾದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಂದೂಕು ಹಿಡಿದು ಫೋಟೋ ತೆಗೆಸಿಕೊಂಡಿದ್ದನ್ನು ಉಲ್ಲೇಖಿಸಿದ ಸಚಿವರು, “ಟ್ರಂಪ್ ಅವರೇ, ಇಂದು ಜಗತ್ತಿಗೆ ನಿಮ್ಮ ಬಂದೂಕು ಬೇಕಾಗಿಲ್ಲ, ಬುದ್ಧನ ಶಾಂತಿ ಮಂತ್ರ ಬೇಕಾಗಿದೆ” ಎಂದು ಮಾರ್ಮಿಕವಾಗಿ ನುಡಿದರು.

“ಜಗತ್ತಿನಾದ್ಯಂತ ಸಕಾರಾತ್ಮಕ ಮತ್ತು ರಚನಾತ್ಮಕ ಬದಲಾವಣೆಗೆ ಬುದ್ಧನ ತತ್ವಗಳೇ ದಾರಿದೀಪ ಎಂದರು. ನಮ್ಮ ದೇಶದ ಸಂವಿಧಾನವು ಬುದ್ಧನ ಬುದ್ಧಂ ಧಮ್ಮಂ ಸಾರವನ್ನು ಒಳಗೊಂಡಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಬುದ್ಧನ ಸಮ ಸಮಾಜ, ಶೋಷಣೆ ಮುಕ್ತ ಸಮಾಜ ಮತ್ತು ಸಮಾನತೆಯ ತತ್ವಗಳಿಂದ ಪ್ರೇರಿತರಾಗಿ ಸಂವಿಧಾನವನ್ನು ರೂಪಿಸಿದ್ದಾರೆ. ಇದರಲ್ಲಿ ಬಸವಣ್ಣ ಮತ್ತು ಗಾಂಧೀಜಿಯವರ ವಿಚಾರಧಾರೆಗಳೂ ಸಮ್ಮಿಳಿತವಾಗಿವೆ” ಎಂದು ಅವರು ವಿವರಿಸಿದರು.

ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರು ಮಾತನಾಡಿ, “ಜಗತ್ತಿನಲ್ಲಿ ಶಾಂತಿ, ಅಹಿಂಸೆ ಮತ್ತು ಮಾನವೀಯತೆ ನೆಲೆಸಲು ಭಗವಾನ್ ಬುದ್ಧನ ತತ್ವಗಳು ಅತ್ಯವಶ್ಯಕವಾಗಿದ್ದು, ಅವುಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಜೀವನದ ಸತ್ಯ ಮತ್ತು ಸನ್ಮಾರ್ಗ ಜೀವನದಲ್ಲಿ ಸಾವು, ಮುಪ್ಪು ಮತ್ತು ರೋಗಗಳು ಅನಿವಾರ್ಯವಾಗಿದ್ದು, ಇವುಗಳ ನಡುವೆಯೂ ಮನುಷ್ಯನು ಕೆಟ್ಟ ಮಾರ್ಗವನ್ನು ಬಿಟ್ಟು ಧರ್ಮದ ಹಾದಿಯಲ್ಲಿ ನಡೆಯಬೇಕು ಎಂದು ಸಂಕನೂರು ಹೇಳಿದರು ಇಂದಿನ ದಿನಗಳಲ್ಲಿ ಸಮಾಜಕ್ಕೆ ಬುದ್ಧನ ವೈಚಾರಿಕತೆ ಬಹಳ ಅವಶ್ಯಕವಾಗಿದೆ ಎಂದು ಅವರು ಒತ್ತಿ ಹೇಳಿದರು.

ನಿವೃತ್ತ ಉಪನ್ಯಾಸಕರುಸತೀಶ ಪಾಶಿ ಮಾತನಾಡಿ, “ಬುದ್ಧ ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ, ಆತ ಇಡೀ ಜಗತ್ತನ್ನೇ ಗೆದ್ದ ಮಹಾನ್ ಶಕ್ತಿ. ಇತಿಹಾಸದಲ್ಲಿ ಬುದ್ಧನ ತ್ಯಾಗ ಮತ್ತು ಸತ್ಯದ ಹುಡುಕಾಟದ ಹಾದಿ ಇಂದಿಗೂ ಪ್ರಸ್ತುತ” ಎಂದು ಯುವ ಚಿಂತಕ ಸತೀಶ ಪಾಶಿ ಅವರು ಹೇಳಿದರು.

ಜೇನುಗೂಡು ಕಲಾತಂಡದ ಬಸವರಾಜ ಅಂಗಡಿ ಮತ್ತು ಸಂಗಡಿಗರಿಂದ ಭಗವಾನ ಬುದ್ಧರ ಗಾಯನ ಪ್ರಸ್ತುತ ಪಡಿಸಿದರು. ಬಸವರಾಜ ಅಂಗಡಿ ಮತ್ತು ಸಂಗಡಿಗರು ನಾಡಗೀತೆ ಪ್ರಸ್ತುತ ಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು ಪ್ರೊ. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಹಾಗೂ ಡಾ.ಎಸ್. ವಿ. ಸಂಕನೂರು, ಅಮೃತ ಹಸ್ತದಿಂದ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಬಿ.ಇ.ಡಿ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಭಗವಾನ ಬುದ್ಧರ ಕುರಿತು ಪ್ರಬಂಧ ಸ್ಪರ್ದೆಯಲ್ಲಿ ವೀಜೆತರಾದ ವಿದ್ಯರ್ಥಿಗಳಿಗೆ, ಎಸ್ ಎಸ್ ಎಲ್ ಸಿ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೀಕೆಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಡಿ. ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕ್ಷರು ಅಧ್ಯಕ್ಷ ಬಿ.ಬಿ ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ.ಕೆ.ಆರ್., ಉಪವಿಭಾಗಧಿಕಾರಿ ಗಂಗಪ್ಪ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ. ಆರ್. ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ. ನಂದಾ ಹಣಬರಟ್ಟಿ, ಸಪಾಯಿ ಕರ್ಮಚಾರಿ ಸಂಘದ ಸದಸ್ಯ ಎಸ್.ಎನ್ ಬಳ್ಳಾರಿ, ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು, ಎಲ್ಲಾ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...