ಗದಗ | ಭೀಕರ ಅಪಘಾತ; ಇಬ್ಬರು ಪೊಲೀಸ್‌ ಕಾನ್ ಸ್ಟೆಬಲ್​ ಸೇರಿ ಮೂವರು ಸಾವು

Date:

Advertisements

ಭೀಕರ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೆಬಲ್​ಗಳು ಸೇರಿದಂತೆ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.

ಗೋವಾ ರಾಜ್ಯಕ್ಕೆ ಸೇರಿದ ಕದಂಬ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಟಗಿ ಗ್ರಾಮದ ನಿವಾಸಿ ಕೊಪ್ಪಳ ಜಿಲ್ಲಾ‌ ಪೊಲೀಸ್ ಕಂಟ್ರೋಲ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಪೇದೆ ವೀರಣ್ಣ ಉಪ್ಪಾರ (32), ಹಾವೇರಿ ಜಿಲ್ಲೆ ಪೊಲೀಸ್ ಕಂಟ್ರೋಲ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಪೇದೆ ಅರ್ಜುನ್ ನೆಲ್ಲೂರ(32) ಹಾಗೂ ಸಹೋದರ ಸಂಬಂಧಿ ರವಿ ನೆಲ್ಲೂರ (35) ಮೃತರು ಎಂದು ತಿಳಿದು ಬಂದಿದೆ.

ಬಸ್ ಚಾಲಕನಿಗೂ ಗಾಯಗಳಾಗಿವೆ. ಕಾರು ಚಾಲಕನ ನಿರ್ಲಕ್ಷ್ಯದಿಂದ ರೋಡ್ ಡಿವೈಡರ್ ದಾಟಿಕೊಂಡು ಎದುರು ಬರುವ ಬ‌ಸ್‌ಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.

ಬಸ್ ಮುಂದಿನ ಭಾಗ ಹಾಗೂ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ಹಾಗೂ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕ್ರೀಡೆಗಳಿಂದ ಮಾನಸಿಕ-ದೈಹಿಕ ಸದೃಢತೆ ಸಾಧ್ಯ: ಡಿಸಿ ಶ್ರೀಧರ್

ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ ಎಂದು‌ ಗದಗ ಜಿಲ್ಲಾಧಿಕಾರಿ...

ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಎಚ್ ಕೆ ಪಾಟೀಲ

ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು...

ಗದಗ | ಸೋಲು-ಗೆಲುವಿಗಿಂತ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ: ಡಿಸಿ ಶ್ರೀಧರ್

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಪಾಲ್ಗೊಂಡು ಸೋಲು ಗೆಲುವನ್ನು ಸಮಾನವಾಗಿ...

ಗದಗ | ರಾಜ್ಯ ಮಟ್ಟದ ʼಮಹರ್ಷಿ ವಾಲ್ಮೀಕಿʼ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನ

ಈ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಮಹರ್ಷಿ...

Download Eedina App Android / iOS

X