ಗದಗ | ಭೀಕರ ಅಪಘಾತ; ಇಬ್ಬರು ಪೊಲೀಸ್‌ ಕಾನ್ ಸ್ಟೆಬಲ್​ ಸೇರಿ ಮೂವರು ಸಾವು

Date:

ಭೀಕರ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೆಬಲ್​ಗಳು ಸೇರಿದಂತೆ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.

- Advertisement -

ಗೋವಾ ರಾಜ್ಯಕ್ಕೆ ಸೇರಿದ ಕದಂಬ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇಟಗಿ ಗ್ರಾಮದ ನಿವಾಸಿ ಕೊಪ್ಪಳ ಜಿಲ್ಲಾ‌ ಪೊಲೀಸ್ ಕಂಟ್ರೋಲ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಪೇದೆ ವೀರಣ್ಣ ಉಪ್ಪಾರ (32), ಹಾವೇರಿ ಜಿಲ್ಲೆ ಪೊಲೀಸ್ ಕಂಟ್ರೋಲ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಪೇದೆ ಅರ್ಜುನ್ ನೆಲ್ಲೂರ(32) ಹಾಗೂ ಸಹೋದರ ಸಂಬಂಧಿ ರವಿ ನೆಲ್ಲೂರ (35) ಮೃತರು ಎಂದು ತಿಳಿದು ಬಂದಿದೆ.

ಬಸ್ ಚಾಲಕನಿಗೂ ಗಾಯಗಳಾಗಿವೆ. ಕಾರು ಚಾಲಕನ ನಿರ್ಲಕ್ಷ್ಯದಿಂದ ರೋಡ್ ಡಿವೈಡರ್ ದಾಟಿಕೊಂಡು ಎದುರು ಬರುವ ಬ‌ಸ್‌ಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.

ಬಸ್ ಮುಂದಿನ ಭಾಗ ಹಾಗೂ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ಹಾಗೂ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಎಚ್ ಕೆ ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: ಕಾಂಗ್ರೆಸ್ ಸದಸ್ಯರ ರಾಜೀನಾಮೆ

ಎರಡನೇ ನೂತನ ಸಚಿವ ಸಂಪುಟದಲ್ಲಿ ಎಚ್ ಕೆ ಪಾಟೀಲ್ ಅವರಿಗೆ ಸಚಿವ...

ಗದಗ | ಆ.5 ರಿಂದ 7ರವರೆಗೆ ಉಪಲೋಕಾಯುಕ್ತ ನ್ಯಾ. ಕೆ ಎನ್ ಫಣೀಂದ್ರ ಜಿಲ್ಲಾ ಪ್ರವಾಸ

ಕರ್ನಾಟಕ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಗದಗ...

ಗದಗ | ಯುವಜನತೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು: ಎಸ್ ವ್ಹಿ ಸಂಕನೂರ

ದೇಶದ ನಿಜವಾದ ಆಸ್ತಿ ಎಂದರೆ ಈಗಿನ ಯುವಕರು ಮತ್ತು ವಿದ್ಯಾರ್ಥಿಗಳು. ಹಾಗಾಗಿ...