ಗದಗ | ಚಿಕಿತ್ಸೆ ನೀಡಬೇಕಾದ ಆರೋಗ್ಯ ಕೇಂದ್ರವೇ ಅಸ್ವಸ್ಥ; ಮೇಲ್ದರ್ಜೆಗೇರಿಸಲು ಸಾರ್ವಜನಿಕರ ಒತ್ತಾಯ

Date:

ಜನರ ಆರೋಗ್ಯ ರಕ್ಷಿಸಬೇಕಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ತಾನೇ ಅಸ್ವಸ್ಥಗೊಂಡಿದೆ. ಸುತ್ತ ಕಸ-ಕಂಟಿ ಬೆಳೆದು, ಬೇಡದ ತ್ಯಾಜ್ಯದಿಂದ ಗಬ್ಬುನಾರುತ್ತಿದ್ದು, ಆಸ್ಪತ್ರೆಗೆ ಬರುವ ರೋಗಿಗಳನ್ನು ಇನ್ನಷ್ಟು ಅನಾರೋಗ್ಯಕ್ಕೆ ದೂಡುತ್ತಿದೆ. ಇಲ್ಲಿ ಕೆಲಸ ಮಾಡುವ ಆರೋಗ್ಯ ಸಿಬ್ಬಂದಿ ಹಾಗೂ ಡಾಕ್ಟರ್‌ಗಳೂ ಇದೇ ವಾತಾವರಣದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

- Advertisement -

ಗದಗ ಪಟ್ಟಣದ ಹೃದಯ ಭಾಗ, ಗಾಂಧಿ ವೃತ್ತದ ಬಳಿ ಇರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಗರದ ನಿವಾಸಿಗಳಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಚಿಕಿತ್ಸೆ ಒದಗಿಸುವ ಕೇಂದ್ರವಾಗಿದ್ದು, ದಿನನಿತ್ಯ ಶೀತ, ಕೆಮ್ಮು, ಜ್ವರ, ಇತ್ಯಾದಿ ಸಾಮಾನ್ಯ ರೋಗಗಳಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕಾಗಿತ್ತು. ಮಧುಮೇಹ, ಮಲೇರಿಯಾದಂತಹ ಸಣ್ಣ ಪುಟ್ಟ ರಕ್ತ ಪರೀಕ್ಷೆ ಮಾಡಿಸಲು ಲ್ಯಾಬ್ ಸೌಲಭ್ಯವಿದೆ. ಆದರೆ ಆರೋಗ್ಯ ಕೇಂದ್ರದ ಸುತ್ತ ಅನೈರ್ಮಲ್ಯವೇ ಮನೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಆಸ್ಪತ್ರೆಯ ಪಕ್ಕದಲ್ಲೇ ಇರುವ ಗಟಾರನ್ನು ತಿಂಗಳುಗಳಿಂದ ಸ್ವಚ್ಛಗೊಳಿಸದ ಕಾರಣ, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ನಿತ್ಯ ಸಂಚರಿಸುವ ಸಾವಿರಾರು ಜನರು ಈ ನರಕಸದೃಶ ದೃಶ್ಯವನ್ನು ದಾಟಿಕೊಂಡೇ ಹೋಗಬೇಕಿದೆ. ಆಸ್ಪತ್ರೆಯ ಪಕ್ಕದ ಜಾಗವು ಕಸದ ತೊಟ್ಟಿಯಂತಾಗಿದ್ದು, ರಾಶಿ ರಾಶಿ ಕಸ ಕೊಳೆತು ದುರ್ವಾಸನೆ ಬೀರುತ್ತಿದೆ. ಈ ಕಸದ ರಾಶಿಯಲ್ಲಿ ಇಲಿ, ಹೆಗ್ಗಣ ಹಾಗೂ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಅಧಿಕಾರಿಗಳು ಇದೇ ಮಾರ್ಗವಾಗಿ ಓಡಾಡುತ್ತಿದ್ದರೂ, ಯಾವುದನ್ನೂ ಗಮನಿಸದವರಂತೆ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಆಸ್ಪತ್ರೆಗೆ ಬರುವ ಗರ್ಭಿಣಿಯರು, ವೃದ್ಧರು ಹಾಗೂ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಆಸ್ಪತ್ರೆಯ ಒಳಗೆ ಹೋಗಲು ದಾರಿಯೇ ಇಲ್ಲದಂತೆ ಮುಂಭಾಗದಲ್ಲಿ ಬೈಕುಗಳನ್ನು ಅಡ್ಡಾದಿಡ್ಡಿ ನಿಲ್ಲಿಸಲಾಗುತ್ತಿದೆ. ಪಾರ್ಕಿಂಗ್ ಅವ್ಯವಸ್ಥೆಯಿಂದಾಗಿ ಗರ್ಭಿಣಿಯರು ನಡೆದಾಡಲು ಹರಸಾಹಸ ಪಡುತ್ತಿದ್ದಾರೆ.

ಆರೋಗ್ಯ ಕೇಂದ್ರದ ರಕ್ಷಣೆಗೆ ಇರಬೇಕಾದ ಕಾಂಪೌಂಡ್ ಅಲ್ಲಲ್ಲಿ ಕುಸಿದು ಬಿದ್ದಿದೆ. ಮುಂಭಾಗದ ಗೇಟ್ ಕೂಡ ಮುರಿದು ಹೋಗಿದ್ದು, ಆಸ್ಪತ್ರೆಯ ಆವರಣದೊಳಗೆ ದನಕರುಗಳು ಮುಕ್ತವಾಗಿ ಓಡಾಡುತ್ತಿವೆ. ಇದರಿಂದ ಆಸ್ಪತ್ರೆಯ ಒಳಾಂಗಣವೂ ಅನೈರ್ಮಲ್ಯದಿಂದ ಕೂಡಿದ್ದು, ಮಹಿಳೆಯರು ಮತ್ತು ಮಕ್ಕಳಿಗೆ ಸಂಕಷ್ಟ ಎದುರಾಗಿದೆ.

ಈ ಕುರಿತು ಆಸ್ಪತ್ರೆಗೆ ಬಂದಿದ್ದ ಕೆಂಚಪ್ಪ ಎಂಬುವವರು ಮಾತನಾಡಿ, “ಸುಮಾರು ತಿಂಗಳಿಂದ ಆಸ್ಪತ್ರೆಯ ಪಕ್ಕದಲ್ಲಿ ಕಸದ ರಾಶಿ ತುಂಬಿ ದುರ್ವಾಸನೆ ಬೀರುತ್ತಿದೆ. ರೋಗಿಗಳು ಚಿಕಿತ್ಸೆ ಪಡೆಯಲು ಬಂದರೆ ಇಲ್ಲಿನ ವಾಸನೆಯಿಂದ ಮತ್ತಷ್ಟು ಕಾಯಿಲೆ ಬೀಳುವಂತಾಗಿದೆ. ಕೂಡಲೇ ಸಂಬಂಧಪಟ್ಟವರು ಸ್ವಚ್ಛ ಮಾಡಿಸಿದರೆ ಬಡ ರೋಗಿಗಳಿಗೆ ಅನುಕೂಲವಾಗುತ್ತದೆ” ಎಂದು ಮನವಿ ಮಾಡಿದರು.

ಸಾಮಾಜಿಕ ಕಾರ್ಯಕರ್ತ ಮುತ್ತು ಬಿಳಿಯಲಿ ಮಾತನಾಡಿ, “ಸರಕಾರಿ ಜಿಲ್ಲಾಸ್ಪತ್ರೆ ಅವಳಿ ನಗರದ ಜನರಿಗೆ ದೂರವಾಗುತ್ತದೆ. ಗದಗ ತಾಲೂಕು ಮಟ್ಟದಲ್ಲಿ ತಾಲೂಕು ಆಸ್ಪತ್ರೆ ಇಲ್ಲ. ನಗರದ ಕೇಂದ್ರದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾದರೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಿ, ಇದನ್ನು ಮೇಲ್ದರ್ಜೆಗೇರಿಸಿದರೆ ಬಡ ಜನರಿಗೆ ಅನುಕೂಲವಾಗುತ್ತೆ. ಹಾಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲಿನ ಅನೈರ್ಮಲ್ಯ ರೋಗಿಗಳ ಮೇಲೆ ತೀವ್ರ ಪರಿನಾಮ ಬೀರುತ್ತಿದೆ. ಕೂಡಲೇ ಸ್ವಚತೆಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಗದಗ | ಹಸಿರು ಕ್ರಾಂತಿಯ ಹರಿಕಾರ ಬಾಬೂಜಿ: ವಕೀಲರು ಮೈಲಾರಪ್ಪ ಡಿ ಎಚ್

ಗದಗದ ಈ ಪ್ರಾಥಮಿಕ ಆರೋಗ್ಯ ಕೇಂದ್ರದ ಇಂದಿನ ಸ್ಥಿತಿ ‘ದೀಪದ ಕೆಳಗೆ ಕತ್ತಲೆ’ ಎಂಬಂತಾಗಿದೆ. ಜನಸಾಮಾನ್ಯರಿಗೆ ಆರೋಗ್ಯ ಭಾಗ್ಯ ನೀಡಬೇಕಾದ ಕೇಂದ್ರವೇ ಅನೈರ್ಮಲ್ಯದ ಕೂಪವಾಗಿರುವುದು ವ್ಯವಸ್ಥೆಯ ಅಣಕ. ಕೇವಲ ಬಣ್ಣದ ಮಾತುಗಳಿಂದ ಅಥವಾ ಮೇಲ್ನೋಟದ ಪ್ರಚಾರದಿಂದ ಜನರ ಆರೋಗ್ಯ ಸುಧಾರಿಸುವುದಿಲ್ಲ. ಆಸ್ಪತ್ರೆಯ ಆವರಣದ ಸ್ವಚ್ಛತೆ, ಮುರಿದ ಗೇಟುಗಳ ದುರಸ್ತಿ ಮತ್ತು ಮೂಲಭೂತ ಸೌಕರ್ಯಗಳ ಕಡೆಗೆ ಅಧಿಕಾರಿಗಳು ತುರ್ತು ಗಮನಹರಿಸಬೇಕಿದೆ. ಹದಗೆಟ್ಟಿರುವ ಈ ಶೋಚನೀಯ ಪರಿಸ್ಥಿತಿಯನ್ನು ಸರಿಪಡಿಸಿ, ಈ ಕೇಂದ್ರವನ್ನು ಮೇಲ್ದರ್ಜೆಗೇರಿಸುವುದು ಈ ಭಾಗದ ಬಡ ರೋಗಿಗಳ ಹಕ್ಕಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರು ನೆಮ್ಮದಿಯಿಂದ ಉಸಿರಾಡುವಂತಹ ವಾತಾವರಣ ನಿರ್ಮಿಸಲಿ ಎಂಬುದು ಸಾರ್ವಜನಿಕರ ಆಶಯ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...