“ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಭ್ಯರ್ಥಿಗಳ ವಿರುದ್ಧ ಮತ ಚಲಾಯಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು ಬೆಂಬಲಿಸಬೇಕು” ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಕಾರ್ಯದರ್ಶಿ ಬಾಲು ರಾಠೋಡ್ ಅವರು ಮನವಿ ಮಾಡಿದ್ದಾರೆ.
“ಕೇಂದ್ರದ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವು ವರ್ಷಕ್ಕೆ ಎರಡುಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿ ಅಧಿಕಾರ ಬಂದು 12 ವರ್ಷಗಳಾಗಿವೆ. ಆದರೆ ಯುವಜನರ ಉದ್ಯೋಗವಕಾಶದ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಹಿಂದೆ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕರು ಈ ಭಾಗದ ಯುವಜನರ, ನೌಕರರ, ನಿವೃತ್ತ ನೌಕರರ ಸಮಸ್ಯೆಗಳಿಗೆ ಸಮರ್ಪಕವಾಗಿ ನ್ಯಾಯ ಒದಗಿಸಲು ವಿಫಲವಾಗಿದ್ದಾರೆ. ಈ ಹಿನ್ನಲೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೋಹನ ಲಿಂಬಿಕಾಯಿ ಅವರನ್ನು ಬೆಂಬಲಿಸಲು ಸಿಪಿಐ(ಎಂ) ತೀರ್ಮಾನಿಸಿದೆ” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





