ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

Date:

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಬರ ಘೋಷಣೆಯ ಮಾರ್ಗಸೂಚಿಗಳನ್ನು ಮರುಪರಿಶೀಲಿಸಿ ರೈತರಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

- Advertisement -

ಬರಪೀಡಿತ ತಾಲೂಕುಗಳ ಘೋಷಣೆ ವಿಚಾರದಲ್ಲಿ ಕಾಂಗ್ರೆಸ್ ಶಾಸಕರ ಅಸಮಾಧಾನ ವ್ಯಕ್ತಪಡಿಸಿದ್ದು, ಇದೀಗ ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಸಿಎಂ.ಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ತಮ್ಮ ಪತ್ರದಲ್ಲಿ ಉತ್ತರ ಕರ್ನಾಟಕದ ಕಿತ್ತೂರು ಕರ್ನಾಟಕ ಪ್ರದೇಶವು ಈ ವರ್ಷ ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದೆ. ಈ ಭಾಗದಲ್ಲಿ ಶೇ.40ರಿಂದ 60ರವರೆಗೆ ಮಳೆ ಕೊರತೆಯಾಗಿದ್ದು, ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಕರಿಮಣ್ಣು ಅಥವಾ ಎರೆಭೂಮಿ ಇರುವುದರಿಂದ ಒಂದೇ ದಿನ ಅತಿಯಾದ ಮಳೆಯಾದರೂ ಮಣ್ಣಿನ ನೀರು ಹೀರಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಪರಿಣಾಮ ಮಳೆನೀರು ಮೇಲ್ಮೈಯಲ್ಲಿ ಹರಿದುಹೋಗಿ, ಮಣ್ಣಿನಲ್ಲಿ ಅಗತ್ಯ ತೇವಾಂಶ ಸಂಗ್ರಹವಾಗುವುದಿಲ್ಲ. ಹೀಗಾಗಿ ಈ ಭಾಗದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಬರ ಘೋಷಣೆಯ ಮಾರ್ಗಸೂಚಿಗಳನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

Advertisements

ಅಸಮರ್ಪಕ ಮಳೆಮಾಪನ ಕೇಂದ್ರಗಳ ಮಾಹಿತಿಯ ಆಧಾರದ ಮೇಲೆ ಬೆಂಗಳೂರಿನ ಅಧಿಕಾರಿಗಳು ಲೆಕ್ಕಾಚಾರ ನಡೆಸುತ್ತಿರುವ ಬಗ್ಗೆ ಹೆಚ್.ಕೆ. ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳೆ ವಿಮೆಗೆ ಸಂಬಂಧಿಸಿದಂತೆ ಸಾಂಖ್ಯಿಕ ಇಲಾಖೆಯ ಅಧಿಕಾರಿಗಳು ನೀಡಿರುವ ನಿರ್ದೇಶನಗಳನ್ನು ಗೌರವಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಸಭೆಗಳಲ್ಲಿ ಕೈಗೊಂಡ ನಿರ್ಣಯಗಳು ಹಾಗೂ ವಾಸ್ತವ ಪರಿಸ್ಥಿತಿಗೆ ಬದಲಾಗಿ ಅಧಿಕಾರಿಗಳು ತಮಗೆ ಅನುಕೂಲವಾದ ಮಾನದಂಡಗಳನ್ನು ಬಳಸುತ್ತಿದ್ದಾರೆ. ರೈತರ ಪರಿಸ್ಥಿತಿಯ ಬಗ್ಗೆ ನೈಜ ಕಾಳಜಿ ಇಲ್ಲದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಧಿಕ್ಕರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...