ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

Date:

“ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿ ಒಟ್ಟು ಶೇ. 75.62 ರಷ್ಟು ಮತದಾನವಾಗಿದೆ” ಎಂದು ಚುನಾವಣಾಧಿಕಾರಿಗಳು ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ.ಎಮ್.ಜಾನಕಿ ಅವರು ತಿಳಿಸಿದ್ದಾರೆ.

- Advertisement -

ಬೆಳಿಗ್ಗೆ 8 ಗಂಟೆಯಿಂದ ನಿಗದಿಯಂತೆ ನಾಲ್ಕು ಜಿಲ್ಲೆಯ 137 ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭವಾಯಿತು. ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಧಾರವಾಡ ಜಿಲ್ಲೆಯಲ್ಲಿ ಶೇ.27.17, ಹಾವೇರಿ ಜಿಲ್ಲೆಯಲ್ಲಿ ಶೇ.28.37, ಗದಗ ಜಿಲ್ಲೆಯಲ್ಲಿ ಶೇ.25.27 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.29.65 ಸೇರಿ ಒಟ್ಟು ಶೇ.27.46 ಮತದಾನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮಧ್ಯಾಹ್ನ 02 ಗಂಟೆಯವರೆಗೆ ಧಾರವಾಡ ಜಿಲ್ಲೆಯಲ್ಲಿ ಶೇ.47.71, ಹಾವೇರಿ ಜಿಲ್ಲೆಯಲ್ಲಿ ಶೇ.53.06, ಗದಗ ಜಿಲ್ಲೆಯಲ್ಲಿ ಶೇ.46.18 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.52.09 ಸೇರಿ ಒಟ್ಟು ಶೇ.49.45 ಮತದಾನವಾಗಿದೆ. ಮತ್ತು ಸಂಜೆ 04 ಗಂಟೆಯವರೆಗೆ ಧಾರವಾಡ ಜಿಲ್ಲೆಯಲ್ಲಿ ಶೇ.69.16, ಹಾವೇರಿ ಜಿಲ್ಲೆಯಲ್ಲಿ ಶೇ.75.78, ಗದಗ ಜಿಲ್ಲೆಯಲ್ಲಿ ಶೇ.74.29 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.74.68 ಸೇರಿ ಒಟ್ಟು ಶೇ.72.88 ರಷ್ಟು ಮತದಾನವಾಗಿದೆ.

Advertisements

ಧಾರವಾಡ ಜಿಲ್ಲೆಯಲ್ಲಿ ನೋಂದಾಯಿತರಾದ 35,119 ಮತದಾರರ ಪೈಕಿ ಪುರುಷ 14,982, ಮಹಿಳೆ 10,232 ಸೇರಿದಂತೆ ಒಟ್ಟು ಪದವೀಧರ ಮತದಾರರು 25,214 ಜನರು ಮತ ಚಲಾಯಿಸಿದ್ದಾರೆ. ಒಟ್ಟು ಧಾರವಾಡ ಜಿಲ್ಲೆಯಲ್ಲಿ ಶೇ.71.80 ರಷ್ಟು ಮತದಾನವಾಗಿದೆ.

ಹಾವೇರಿ ಜಿಲ್ಲೆಯಲ್ಲಿ ನೋಂದಾಯಿತರಾದ 24,648 ಮತದಾರರ ಪೈಕಿ ಪುರುಷ 12,748, ಮಹಿಳೆ 6,653 ಸೇರಿದಂತೆ ಒಟ್ಟು ಪದವೀಧರ ಮತದಾರರು 19,401 ಜನರು ಮತ ಚಲಾಯಿಸಿದ್ದಾರೆ. ಒಟ್ಟು ಹಾವೇರಿ ಜಿಲ್ಲೆಯಲ್ಲಿ ಶೇ.78.71 ರಷ್ಟು ಮತದಾನವಾಗಿದೆ. 

ಗದಗ ಜಿಲ್ಲೆಯಲ್ಲಿ ನೋಂದಾಯಿತರಾದ 21,594 ಮತದಾರರ ಪೈಕಿ ಪುರುಷ 11,028, ಮಹಿಳೆ 5,742 ಸೇರಿದಂತೆ ಒಟ್ಟು ಪದವೀಧರ ಮತದಾರರು 16,770 ಜನರು ಮತ ಚಲಾಯಿಸಿದ್ದಾರೆ. ಒಟ್ಟು  ಗದಗ ಜಿಲ್ಲೆಯಲ್ಲಿ ಶೇ.77.66 ರಷ್ಟು ಮತದಾನವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನೋಂದಾಯಿತರಾದ 16,039 ಮತದಾರರ ಪೈಕಿ ಪುರುಷ 6,352, ಮಹಿಳೆ 5,921 ಸೇರಿದಂತೆ ಒಟ್ಟು ಪದವೀಧರ ಮತದಾರರು 12,273 ಜನರು ಮತ ಚಲಾಯಿಸಿದ್ದಾರೆ. ಒಟ್ಟು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.76.52 ರಷ್ಟು ಮತದಾನವಾಗಿದೆ.

ಮತಕ್ಷೇತ್ರ ವ್ಯಾಪ್ತಿಯ 4 ಜಿಲ್ಲೆಗಳು ಸೇರಿದಂತೆ ಒಟ್ಟು 97,400 ನೋಂದಾಯಿತ ಮತದಾರರಿದ್ದು, ಈ ಪೈಕಿ 45,110 ಪುರುಷ ಹಾಗೂ 28,548 ಮಹಿಳಾ ಮತದಾರರು ಸೇರಿದಂತೆ ಒಟ್ಟು 73,658 ಮತದಾರರು ಇಂದಿನ ಮತದಾನದಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದು, ಒಟ್ಟು ಶೇ.75.62 ರಷ್ಟು ಮತದಾನವಾಗಿದೆ.

“ಮತಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು ಕಂಡುಬಂದಿದೆ. ಮತದಾರರಲ್ಲಿ ಜಾಗೃತಿ ಮೂಡಿಸಲು ಕೈಗೊಂಡ ಕ್ರಮಗಳು ಮತ್ತು ಅಭ್ಯರ್ಥಿಗಳ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ. ಮತಕ್ಷೇತ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶಾಂತಿಯುತವಾಗಿ ಮತದಾನವಾಗಿದೆ” ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...