ಜಾನುವಾರುಗಳಿಗೆ ಪೌಷ್ಟಿಕ ಮೇವು: 12,000 ಅಜೋಲಾ ಘಟಕ ಸ್ಥಾಪನೆಗೆ ತಯಾರಿ

Date:

ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಅಜೋಲಾ ಉತ್ಪಾದನಾ ಘಟಕಗಳನ್ನು ಉತ್ತೇಜಿಸಲು ಮಹತ್ವದ ಯೋಜನೆ ಹಮ್ಮಿಕೊಂಡಿದೆ. ಮಳೆಯ ಅಭಾವ, ಹಸಿರು ಮೇವಿನ ಕೊರತೆಗಳು ಉಂಟಾದಾಗ ಪ್ರೋಟೀನ್, ಖನಿಜಾಂಶಗಳು ಸೇರಿದಂತೆ ಉತ್ತಮ ಪೌಷ್ಟಿಕಾಂಶಗಳನ್ನು ಹೊಂದಿರುವ ಅಜೋಲಾವನ್ನು ಪೂರಕ ಆಹಾರವಾಗಿ ಬಳಸಬಹುದಾಗಿದೆ.

- Advertisement -

​ಈ ಯೋಜನೆಯಡಿ ರಾಜ್ಯದ ಎಲ್ಲಾ 31 ಜಿಲ್ಲೆಗಳ 240 ತಾಲ್ಲೂಕುಗಳಲ್ಲಿ ಒಟ್ಟು 3,78,00,000 ರೂಪಾಯಿಗಳ ವೆಚ್ಚದಲ್ಲಿ 12,000 ಅಜೋಲಾ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು, ಜಿಲ್ಲಾವಾರು ಭೌತಿಕ ಮತ್ತು ಆರ್ಥಿಕ ಗುರಿಯನ್ನು ನಿಗದಿಪಡಿಸಲಾಗಿದೆ. ಪ್ರತಿ ಘಟಕ ಸ್ಥಾಪನೆಗೆ ಅಂದಾಜು 3,150 ರೂಪಾಯಿ ವೆಚ್ಚವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಬೆಳಗಾವಿ ಜಿಲ್ಲೆಯಲ್ಲಿ 15 ತಾಲ್ಲೂಕುಗಳಿದ್ದು 750 ಘಟಕಗಳಿಗೆ 23,62,500 ರೂಪಾಯಿ ನಿಗದಿಪಡಿಸಲಾಗಿದೆ. ವಿಜಯಪುರ ಜಿಲ್ಲೆಯ 13 ತಾಲ್ಲೂಕುಗಳಿಗೆ 650 ಘಟಕಗಳಿಗೆ 20,47,500 ರೂಪಾಯಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳಿಗೆ 600 ಘಟಕಗಳಿಗೆ 18,90,000 ರೂಪಾಯಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಕಲಬುರಗಿ ಜಿಲ್ಲೆಯ 11 ತಾಲ್ಲೂಕುಗಳಿಗೆ 550 ಘಟಕಗಳಿಗಾಗಿ 17,32,500 ರೂಪಾಯಿ ವೆಚ್ಚವಾಗಲಿದೆ.

​ಬಾಗಲಕೋಟೆ ಜಿಲ್ಲೆಯ 10 ತಾಲ್ಲೂಕು ಮತ್ತು ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಿಗೆ ತಲಾ 500 ಘಟಕಗಳಂತೆ ತಲಾ 15,75,000 ರೂಪಾಯಿಗಳನ್ನು ನಿಗದಿಗೊಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ 9 ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆಯ 9 ತಾಲ್ಲೂಕು ಹಾಗೂ ಮೈಸೂರು ಜಿಲ್ಲೆಯ 9 ತಾಲ್ಲೂಕುಗಳಿಗೆ ತಲಾ 450 ಘಟಕಗಳನ್ನು ಸ್ಥಾಪಿಸಲು ತಲಾ 14,17,500 ರೂಪಾಯಿ ಕಾಯ್ದಿರಿಸಲಾಗಿದೆ.

​ಬೀದರ್ ಜಿಲ್ಲೆಯ 8 ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆಯ 8 ತಾಲ್ಲೂಕು, ಧಾರವಾಡ ಜಿಲ್ಲೆಯ 8 ತಾಲ್ಲೂಕು, ಹಾಸನ ಜಿಲ್ಲೆಯ 8 ತಾಲ್ಲೂಕು, ಹಾವೇರಿ ಜಿಲ್ಲೆಯ 8 ತಾಲ್ಲೂಕು ಮತ್ತು ರಾಯಚೂರು ಜಿಲ್ಲೆಯ 8 ತಾಲ್ಲೂಕುಗಳಿಗೆ ತಲಾ 400 ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ಪ್ರತಿಯೊಂದು ಜಿಲ್ಲೆಗೆ ತಲಾ 12,60,000 ರೂಪಾಯಿ ಅನುದಾನ ನೀಡಲಾಗಿದೆ.

​ಗದಗ ಜಿಲ್ಲೆಯ 7 ತಾಲ್ಲೂಕು, ಕೊಪ್ಪಳ ಜಿಲ್ಲೆಯ‌ 7 ತಾಲ್ಲೂಕು, ಮಂಡ್ಯ ಜಿಲ್ಲೆಯ 7 ತಾಲ್ಲೂಕು, ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕು ಮತ್ತು ಉಡುಪಿ ಜಿಲ್ಲೆಯ 7 ತಾಲ್ಲೂಕುಗಳಿಗೆ ತಲಾ 350 ಘಟಕಗಳಿಗೆ ತಲಾ 11,02,500 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕು, ದಾವಣಗೆರೆ ಜಿಲ್ಲೆಯ 6 ತಾಲ್ಲೂಕು, ಕೋಲಾರ ಜಿಲ್ಲೆಯ 6 ತಾಲ್ಲೂಕು, ವಿಜಯನಗರ ಜಿಲ್ಲೆಯ 6 ತಾಲ್ಲೂಕು ಹಾಗೂ ಯಾದಗಿರಿ ಜಿಲ್ಲೆಯ 6 ತಾಲ್ಲೂಕುಗಳಿಗೆ ತಲಾ 300 ಘಟಕಗಳ ಗುರಿ ನೀಡಲಾಗಿದ್ದು, ತಲಾ 9,45,000 ರೂಪಾಯಿ ವೆಚ್ಚವಾಗಲಿದೆ.

​ಬೆಂಗಳೂರು ನಗರ ಜಿಲ್ಲೆಯ 5 ತಾಲ್ಲೂಕು, ಬಳ್ಳಾರಿ ಜಿಲ್ಲೆಯ 5 ತಾಲ್ಲೂಕು, ಚಾಮರಾಜನಗರ ಜಿಲ್ಲೆಯ‌ 5 ತಾಲ್ಲೂಕು, ಕೊಡಗು ಜಿಲ್ಲೆಯ 5 ತಾಲ್ಲೂಕು ಮತ್ತು ರಾಮನಗರ 5 ತಾಲ್ಲೂಕುಗಳಿಗೆ ತಲಾ 250 ಘಟಕ ಸ್ಥಾಪನೆಗೆ ತಲಾ 7,87,500 ರೂಪಾಯಿ ನೀಡಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಿಗೆ 200 ಘಟಕ ಸ್ಥಾಪಿಸಲು 6,30,000 ರೂಪಾಯಿ ವೆಚ್ಚ ಮಾಡಲಾಗುವುದು.

ತಾಂತ್ರಿಕ ಹಾಗೂ ವೆಚ್ಚದ ವಿವರ: ಈ ಅಜೋಲಾ ಘಟಕಗಳನ್ನು ರೈತರ ಮನೆ ಅಥವಾ ಕೊಟ್ಟಿಗೆಯ ಸಮೀಪವೇ ಕಡಿಮೆ ಸ್ಥಳದಲ್ಲಿ ನಿರ್ಮಿಸಬಹುದಾಗಿದೆ. ಸುಮಾರು 10 ಅಡಿ ಉದ್ದ, 4 ಅಡಿ ಅಗಲ ಹಾಗೂ 1 ಅಡಿ ಆಳದ (2.60 ಮೀ. x 1.60 ಮೀ.) ಅಳತೆಯಲ್ಲಿ ಘಟಕವನ್ನು ನಿರ್ಮಿಸಲಾಗುತ್ತದೆ.

  • ​ಪ್ರತಿ ಘಟಕದ ಒಟ್ಟು ವೆಚ್ಚವಾದ 3,150 ರೂಪಾಯಿ ಯಲ್ಲಿ ಸಾಮಗ್ರಿ ಹಾಗೂ ಕೂಲಿ ವೆಚ್ಚ ಸೇರಿದೆ. ಯುವಿ-ಸ್ಟೆಬಿಲೈಸ್ಡ್ ಎಚ್‌ಡಿಪಿಇ ಶೀಟ್ (450 GSM, 10×6 ಅಡಿ) – 1,350 ರೂಪಾಯಿ
  • ​ಶೇಕಡಾ 80 ರಷ್ಟು ನೆರಳು ಬಲೆ (Shade Net) ಮತ್ತು ಬಿದಿರು/ಜಿಐ ಫ್ರೇಮ್ – 650 ರೂಪಾಯಿ
  • ​ಫಲವತ್ತಾದ ಮಣ್ಣು, ಸಗಣಿ ಮತ್ತು ಸೂಪರ್ ಫಾಸ್ಫೇಟ್ ಮಿಶ್ರಣ – 250 ರೂಪಾಯಿ
  • ​ಅಜೋಲಾ ತಳಿ/ಬೀಜ (Starter Culture/Inoculum) 2 ಕೆಜಿ – 200 ರೂಪಾಯಿ
  • (ಸಾಮಗ್ರಿಗಳ ಒಟ್ಟು ವೆಚ್ಚ: 2,450 ರೂಪಾಯಿ)
  • ​ಸ್ಥಳ ಸಿದ್ಧತೆ, ತೊಟ್ಟಿ ಅಳವಡಿಕೆ, ಸಂರಕ್ಷಣೆ ಮತ್ತು ಬೀಜ ಬಿತ್ತನೆ ಕೆಲಸಕ್ಕಾಗಿ 2 ಮಾನವ ದಿನಗಳ ಕೂಲಿ ವೆಚ್ಚ (ದರ ದಿನಕ್ಕೆ 350 ರೂ. ನಂತೆ) – 700 ರೂಪಾಯಿ.

ಅನುಷ್ಠಾನ ಮತ್ತು ಮಾರ್ಗದರ್ಶಿ ಸೂತ್ರಗಳು: ಜಿಲ್ಲೆಗೆ ನಿಗದಿಪಡಿಸಿದ ಗುರಿಯನ್ನು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿವಾರು ಹಂಚಿಕೆ ಮಾಡಿ, ಸೂಕ್ತ ಸ್ಥಳ ಮತ್ತು ನೀರಿನ ಲಭ್ಯತೆ ಇರುವ ಜಾನುವಾರು ಸಾಕಣೆದಾರರನ್ನು ಆದ್ಯತೆಯ ಮೇಲೆ ಆಯ್ಕೆ ಮಾಡಲಾಗುವುದು. ಕಲುಷಿತ ನೀರಿನಲ್ಲಿ ಅಜೋಲಾ ಬೆಳೆಸಿದರೆ ಮಾಲಿನ್ಯಕಾರಕಗಳ ಅಪಾಯವಿರುವುದರಿಂದ ಕೇವಲ ಸ್ವಚ್ಛ ನೀರು ಲಭ್ಯವಿರುವ ಸ್ಥಳಗಳನ್ನಷ್ಟೇ ಆಯ್ಕೆ ಮಾಡಲಾಗುತ್ತದೆ. ಫಲಾನುಭವಿಗಳಿಗೆ ಅಜೋಲಾ ಉತ್ಪಾದನೆ, ಕೊಯ್ದು, ಸ್ವಚ್ಛತೆ, ಸಂಸ್ಕರಣೆ ಹಾಗೂ ಜಾನುವಾರುಗಳಿಗೆ ನೀಡುವ ಕುರಿತು ತಾಂತ್ರಿಕ ತರಬೇತಿ ನೀಡಲಾಗುತ್ತದೆ.

“ಈ ​ಯೋಜನೆಯನ್ನು VB-G RAM G ಮಾರ್ಗಸೂಚಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಗೊಳಪಟ್ಟು ಅನುಷ್ಠಾನಗೊಳಿಸಲಾಗುತ್ತದೆ. ಪ್ರತಿಯೊಂದು ಘಟಕದ ಫಲಾನುಭವಿಯ ವಿವರಗಳು, ಆಧಾರ್, ಜಿಪಿಎಸ್ ಸ್ಥಳ (GPS Location), ಕಾರ್ಯನಿರ್ವಹಣೆಯ ಮೊದಲು ಮತ್ತು ನಂತರದ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ದಾಖಲಿಸಲಾಗುತ್ತದೆ. ಜಿಲ್ಲಾ ಉಪ ನಿರ್ದೇಶಕರು ಮಾಸಿಕ ವೇಳಾಪಟ್ಟಿ ಸಿದ್ಧಪಡಿಸಿ ಅನುಷ್ಠಾನಗೊಳಿಸಲಿದ್ದು, ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಪ್ರಗತಿ ವರದಿಯನ್ನು ರಾಜ್ಯ ಕಚೇರಿಗೆ ಸಲ್ಲಿಸಬೇಕು” ಎಂದು” ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಈ ಕುರಿತು ಈದಿನ.ಕಾಮ್ ಜೊತೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ) ರೈತ ಮುಖಂಡರು ಚಂ. ಸು. ಪಾಟೀಲ್ ಮಾತನಾಡಿ, “ಅಜೋಲಾ ಘಟಕಗಳನ್ನು ಸ್ಥಾಪನೆ ಮಾಡುವುದರಿಂದ ಹಳ್ಳಿಗಳಲ್ಲಿ ಹೈನುಗಾರಿಕೆ ಮಾಡುತ್ತಿರುವ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಅನರ್ಹರಿಗೆ ಸಿಗದ ಹಾಗೆ ನೋಡಿಕೊಂಡು, ನೈಜ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಅಜೋಲಾ ಘಟಕಗಳನ್ನು ಸ್ಥಾಪನೆ ಮಾಡಲು ಅವಕಾಶ ಕೊಡಬೇಕು. ದನ-ಕರುಗಳಿಗೆ ಅಜೋಲಾ ಪೌಷ್ಠಿಕ ಆಹಾರ ಕೊಡುವುದರ ಮೂಲಕ ಹಾಲು ಉತ್ಪನ್ನ ಹೆಚ್ಚಾಗುತ್ತದೆ. ಹಾಗೆ ಗೊಬ್ಬರ ಬಳಕೆ ಮಾಡಲು ಹೆಚ್ಚು ಅನುಕೂಲ ಆಗಲಿದೆ” ಎಂದು ಹೇಳಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...