ಸಂವಿಧಾನದ 73ನೇ ತಿದ್ದುಪಡಿಯಿಂದ ಪಂ. ರಾಜ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ: ಸಚಿವ ಎಚ್.ಕೆ ಪಾಟೀಲ್

Date:

ಸಂವಿಧಾನಕ್ಕೆ 73ನೇ ತಿದ್ದುಪಡಿ ತಂದ ನಂತರ ಮೂವತ್ತು ವರ್ಷಗಳ ಅವಧಿಯನ್ನು ಅವಲೋಕನ ಮಾಡುವುದು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಡಾ. ಎಚ್.ಕೆ ಪಾಟೀಲ್ ಹೇಳಿದ್ದಾರೆ.

ಗದಗದಲ್ಲಿ ನಡೆಯುತ್ತಿರುವ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿನ ಬದಲಾವಣೆಗಾಗಿ ಭಾರತೀಯ ಸಂವಿಧಾನಕ್ಕೆ 73ನೇ ತಿದ್ದುಪಡಿ ತರಲಾಗಿತ್ತು. ತಿದ್ದುಪಡಿಗಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಅವಿರತ ಪ್ರಯತ್ನ ಪಟ್ಟಿದ್ದರು. ನಂತರ, ಪ್ರಧಾನಿ ನರಸಿಂಹರಾವ್ ಅವರ ಅವಧಿಯಲ್ಲಿ 73ನೇ ತಿದ್ದುಪಡಿ ತಂದರು. ಇದರಿಂದ ಗ್ರಾಮೀಣ ಪಂಚಾಯತ ರಾಜ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಾಲವಣೆಯನ್ನು ಇಂದು ನಾವೆಲ್ಲ ಕಾಣುತ್ತಿದ್ದೇವೆ” ಎಂದು ವಿವರಿಸಿದರು.

“ರಾಜಕೀಯ ಪಕ್ಷಗಳು ಪಂಚಾಯತಿಗಳಿಗೆ ನೀಡಿದ ಕೊಡುಗೆಯನ್ನು ಮೆಲಕು ಹಾಕಬೇಕಾಗಿದೆ. ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿನ ಪಂಚಾಯತಿಗಳು ಉತ್ತಮ ಸ್ಥಿತಿಯಲ್ಲಿವೆ. ಪರಿಶಿಷ್ಟರನ್ನು, ಹಿಂದುಳಿದ, ಬಡವರ ಹಾಗೂ ಮಹಿಳೆಯರನ್ನು ಪಂಚಾಯತಿ ಅಧ್ಯಕ್ಷರನ್ನಾಗಿಸಲಾಗಿದೆ. ಆದರೆ, ಶತಮಾನಗಳ ಹಿಂದೆ ಈ ಪರಿಸ್ಥಿತಿ ಇರಲಿಲ್ಲ. ಮಹಿಳೆಗೆ ರಾಜಕೀಯ, ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವಂತೆ ಬಸವಣ್ಣನವರು ಹೇಳಿದ್ದರೂ ಕೂಡ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಯಾವುದೇ ಸ್ಥಾನಮಾನ ನೀಡಿರಲಿಲ್ಲ. ಆದರೆ, 73ನೇ ತಿದ್ದುಪಡಿಯ ಮೂಲಕ ಮಹಿಳೆಯರಿಗೆ ಎಲ್ಲ ಸ್ಥಾನಮಾನಗಳನ್ನು ನೀಡಲಾಯಿತು. ಈ ತಿದ್ದುಪಡಿ ಕಾನೂನು ಅನುಷ್ಠಾನದಲ್ಲಿ ರಾಜ್ಯವು ಮುಂಚೂಣಿಯಲ್ಲಿತ್ತು” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪಂಚಾಯತ್ ವ್ಯವಸ್ಥೆಯಲ್ಲಿನ ಜನ ಪ್ರತಿನಿಧಿಗಳು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿರಬೇಕು. ಗಾಂಧೀ ಕಾಯಕ ಸಾಕ್ಷಿ ತಂತ್ರಜ್ಞಾನದ ಸದ್ಬಳಕೆ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾಡುವ ಅಧಿಕಾರದ ಸದ್ಬಳಕೆ ಆಗಬೇಕು. ಗದಗ ಜಿಲ್ಲೆಯು ಗ್ರಾಮ ಪಂಚಾಯತಿ ಹಂತದಲ್ಲಿ ತಳಮಟ್ಟದಿಂದ ಮೆಲ್ಮಟ್ಟಕ್ಕೆ ಯೋಜನೆ ರೂಪಿಸಿವದರಲ್ಲಿ ಮುಂಚೂಣಿಯಲ್ಲಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಐದು ಮಂದಿ ಅಲ್ಲ, ಕ್ಷೇತ್ರದ ಪ್ರತಿಯೊಬ್ಬರೂ ಶಾಸಕರೇ; ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ತಿರುಗೇಟು

“ಗ್ರಾಮಗಳು ವ್ಯಾಜ್ಯ ಮುಕ್ತ, ತ್ಯಾಜ್ಯ ಮುಕ್ತ, ಶೋಷಣೆ ಮುಕ್ತ, ಭಯ ಮುಕ್ತ, ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ಕಾನೂನುಗಳನ್ನು ನೀಡಲಾಗಿದೆ. ವಿಶ್ವವಿದ್ಯಾಲಯದ ಪ್ರತಿ ಐದು ವಿಧ್ಯಾರ್ಥಿಗಳಿಗೆ ಒಂದೊಂದು ಗ್ರಾಮಗಳನ್ನು ನೀಡಿ ಗ್ರಾಮಗಳನ್ನು ವ್ಯಾಜ್ಯ, ತ್ಯಾಜ್ಯ, ಶೋಷಣೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸಲು ಪಣತೊಡಬೇಕು” ಎಂದರು.

ಕಾರ್ಯಕ್ರಮದಲ್ಲಿ ಭಾರತೀಯ ಸಾರ್ವಜನಿಕ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಪಂಚಾಯತ್ ರಾಜ್ ಕಮಿಷನರೇಟ ನಿರ್ದೆಶಕಾರದ ಏಕಾಂತಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್.ಎಸ್ ಮಿನಾಕ್ಷಿ ಸುಂದರಂ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...