ಗದಗ | ʼನಮ್ಮ ಗ್ರಾಮ-ನಮ್ಮ ತೆರಿಗೆʼ ಅಭಿಯಾನಕ್ಕೆ ಜಯ; ಶೇ. 100ರಷ್ಟು ಗುರಿ ತಲುಪಿದ ಶಿರಹಟ್ಟಿ

Date:

ಯಾವುದೇ ಒಂದು ಭಾಗದ ಅಭಿವೃದ್ಧಿಗೆ ಅಲ್ಲಿನ ನಾಗರಿಕರ ಸಹಕಾರ ಮತ್ತು ಪ್ರಾಮಾಣಿಕ ತೆರಿಗೆ ಪಾವತಿ ಅತಿ ಮುಖ್ಯ. ಈ ನಿಟ್ಟಿನಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಜನತೆ ಮತ್ತು ಪಂಚಾಯತ್ ಅಧಿಕಾರಿಗಳ ಸಂಘಟಿತ ಪ್ರಯತ್ನಕ್ಕೆ ಅಭೂತಪೂರ್ವ ಯಶಸ್ಸು ಸಿಕ್ಕಿದೆ. 2025-26ನೇ ಸಾಲಿನ ತೆರಿಗೆ ವಸೂಲಾತಿಯಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸುವ ಮೂಲಕ ಶಿರಹಟ್ಟಿ ತಾಲೂಕು ಗದಗ ಜಿಲ್ಲೆಯಲ್ಲೇ ಮೊದಲ ಸ್ಥಾನದಲ್ಲಿದೆ.

- Advertisement -

ಪ್ರಸಕ್ತ ಸಾಲಿನಲ್ಲಿ ಒಟ್ಟು ₹1.56 ಕೋಟಿ (₹1,55,95,040) ಕಂದಾಯ ಬೇಡಿಕೆ ಇತ್ತು. ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿಶೇಷ ಅಭಿಯಾನದಿಂದಾಗಿ ಬೇಡಿಕೆಗಿಂತ ಅಧಿಕವಾಗಿ ₹1.56 ಕೋಟಿ (₹1,56,65,649 ಅಂದರೆ ಶೇ. 100.45) ಸಂಗ್ರಹಿಸಲಾಗಿದೆ. ಇದರಲ್ಲಿ ಕೋಗನೂರು ಗ್ರಾಮ ಪಂಚಾಯಿತಿ ಶೇ.124.40ರಷ್ಟು ಸಾಧನೆ ಮಾಡಿ ತಾಲೂಕಿನಲ್ಲಿ ಅಗ್ರಸ್ಥಾನದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಯೋಜನಾಧಿಕಾರಿ, ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ಅಧಿಕಾರಿಗಳ ನೇತೃತ್ವದ ತಂಡಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಪರಿಶ್ರಮ ಹಾಗೂ 14 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಸಾರ್ವಜನಿಕರ ಸಂಪೂರ್ಣ ಸಹಕಾರದಿಂದ ಕರ ವಸೂಲಾತಿಯಲ್ಲಿ ಶೇ.100ರಷ್ಟು ಗುರಿ ತಲುಪಲು ಸಾಧ್ಯವಾಗಿದೆ” ಎನ್ನುತ್ತಾರೆ ಅಧಿಕಾರಿಗಳು.

ಪಂಚಾಯಿತಿಗಳಿಗೆ ಕಟ್ಟುವ ತೆರಿಗೆ ಹಣವನ್ನು ಗ್ರಾಮಗಳಲ್ಲಿ ರಸ್ತೆ, ಚರಂಡಿ, ಬೀದಿ ದೀಪಗಳ ದುರಸ್ಥಿಗೆ ಬಳಕೆ ಮಾಡುವ ಕುರಿತು ಬಿಲ್ ಕಲೆಕ್ಟರ್‌ಗಳು ಮನವರಿಕೆ ಮಾಡಿಕೊಟ್ಟಿದ್ದರು. ಇವರ ಜೊತೆ ಎನ್‌ಆರ್‌ಎಲ್‌ಎಂ, ಎಲ್‌ಸಿಆರ್‌ಪಿ, ಕೃಷಿ ಸಖಿ, ಪಶು ಸಖಿ, ಬ್ಯಾಂಕ್ ಸಖಿಯರು ಅಭಿಯಾನಕ್ಕೆ ಕೈಜೋಡಿಸಿದ್ದರು. ಇವರಿಂದ ಪ್ರೇರಣೆಗೊಂಡ ಜನರು ಸಕಾಲದಲ್ಲಿ ತೆರಿಗೆ ಹಣ ಪಾವತಿಸಿದ್ದಾರೆ. ತೆರಿಗೆ ಶುಲ್ಕವನ್ನು ಆನ್ ಲೈನ್ ಮೂಲಕ ಜಮಾ ಮಾಡಿಸುವ ವ್ಯವಸ್ಥೆ ಮಾಡಿರುವುದರಿಂದ ಪಾವತಿ ಸುಲಭ ಆಗಿದೆ” ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತಿಳಿಸಿದರು.

ʼನಮ್ಮ ಗ್ರಾಮ-ನಮ್ಮ ತೆರಿಗೆʼ ಅಭಿಯಾನ

ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ರೂಪಿಸಲಾಗಿದ್ದ ‘ನಮ್ಮ ಗ್ರಾಮ-ನಮ್ಮ ತೆರಿಗೆ’ ಅಭಿಯಾನವೂ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್‌ಗಳು ಹಾಗೂ ಸ್ವಸಹಾಯ ಸಂಘಗಳ ಮಹಿಳೆಯರು ಮನೆ ಮನೆಗೆ ತೆರಳಿ ತೆರಿಗೆ ಪಾವತಿಯ ಮಹತ್ವ ಮತ್ತು ಆನ್‌ಲೈನ್ ಪಾವತಿ ಬಗ್ಗೆ ಅರಿವು ಮೂಡಿಸಿದ ಪರಿಣಾಮ ಯಶಸ್ಸು ಸಿಕ್ಕಿದೆ.

ಇದನ್ನೂ ಓದಿ: ಗದಗ | ಭಾರಿ ಆಲಿಕಲ್ಲು ಮಳೆ; ಗ್ರಾಮಸ್ಥರಲ್ಲಿ ಅಚ್ಚರಿ

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 36 ಮಾನದಂಡಗಳ ಆಡಳಿತಾತ್ಮಕ ಕಾರ್ಯಕ್ಷಮತೆಯ ಶ್ರೇಣಿಯಲ್ಲಿ ಶಿರಹಟ್ಟಿ ತಾಲೂಕು ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಅಲಂಕರಿಸಲು ಸಾಧ್ಯವಾಗಿದೆ. ಗ್ರಾಮ ಸ್ವರಾಜ್‍ದ ಕನಸು ನನಸಾಗಲು ಗ್ರಾಮಗಳು ಆರ್ಥಿಕವಾಗಿ ಸಶಕ್ತವಾಗಬೇಕು. ಆ ಹಿನ್ನೆಲೆಯಲ್ಲಿ ತೆರಿಗೆ ಪಾವತಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಇನ್ನೂ ಕಂದಾಯ ಬಾಕಿ ಇರುವವರು ಶೀಘ್ರ ತೆರಿಗೆ ಪಾವತಿಸಿ ಗ್ರಾಮಗಳ ಅಭಿವೃದ್ದಿ ಸಹಕರಿಸಿ” ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಅವರು ಸಂತಸ ಹಂಚಿಕೊಂಡರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

ಗದಗ | ಸರ್ಕಾರಿ ಕನ್ನಡ ಶಾಲೆಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ನೀಡಲು ನಿರ್ಧಾರ; ಎಸ್ಎಫ್ಐ ಖಂಡನೆ

"ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವೈಯಕ್ತಿಕ ಕೊಡುಗೆದಾರರ (Individual CSR) ಸಭೆಯಲ್ಲಿ...

ಗದಗ | ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು: ಶಾಸಕ ಎಸ್.ವಿ. ಸಂಕನೂರ

"ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಯುವಕರೇ ದೇಶದ ನಿಜವಾದ ಸಂಪತ್ತು ಹಾಗೂ...

ಗದಗ | ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ನೀಡವಂತೆ ರಾಜ್ಯಾಧ್ಯಕ್ಷ ಡಾ.ಹನುಮಂತಗೌಡ ಆರ್. ಕಲ್ಮನಿ ಮನವಿ

"ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರು ಯುಜಿಸಿ ನಿಯಮಗಳಿಗೆ ಅನ್ವಯವಾಗದ...